Udupi ವಿಧಾನ ಪರಿಷತ್‌ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರದ ಮೇಲೆ ಅಭ್ಯರ್ಥಿಗಳ ಕಣ್ಣು

Team Udayavani, Oct 26, 2023, 12:30 AM IST

Udupi ವಿಧಾನ ಪರಿಷತ್‌ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರದ ಮೇಲೆ ಅಭ್ಯರ್ಥಿಗಳ ಕಣ್ಣುUdupi ವಿಧಾನ ಪರಿಷತ್‌ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರದ ಮೇಲೆ ಅಭ್ಯರ್ಥಿಗಳ ಕಣ್ಣು

ಉಡುಪಿ: ಲೋಕಸಭೆ ಚುನಾವಣೆಯ ಜತೆ ಜತೆಗೆ ವಿಧಾನ ಪರಿಷತ್‌ನ ನೈಋತ್ಯ ಪದವಿಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯೂ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೂರು ಪಕ್ಷಗಳಿಂದಲೂ ವಿಧಾನ ಪರಿಷತ್‌ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ.

ಆಡಳಿತರೂಢ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷದ ಆಕಾಂಕ್ಷಿಗಳು ಮತದಾರರ ಪಟ್ಟಿ ನೋಂದಣಿಗೆ ಶಿಕ್ಷಣ ಸಂಸ್ಥೆಗಳು ಹಾಗೂ ಖಾಸಗಿ ಸಂಸ್ಥೆಗಳಿಗೆ ಭೇಟಿ ನೀಡಿ, ಅಲ್ಲಿನ ಪ್ರಮುಖರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಬಿಜೆಪಿಗರು ಪದವೀಧರ ಕ್ಷೇತ್ರವನ್ನು ಪ್ರಮುಖವಾಗಿಟ್ಟುಕೊಂಡು ನೋಂದಣಿ ಪ್ರಕ್ರಿಯೆ ನಡೆಸುತ್ತಿದ್ದರೆ, ಜೆಡಿಎಸ್‌ ಶಿಕ್ಷಕರ ಕ್ಷೇತ್ರಕ್ಕೆ ಆದ್ಯತೆ ನೀಡಿ ನೋಂದಣಿ ಮಾಡಿಸುತ್ತಿದ್ದಾರೆ.

ನ.6ರವರೆಗೂ ಮತದಾರರ ಪಟ್ಟಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಮಾತುಕತೆಗಳು ಈಗಾಗಲೇ ರಾಷ್ಟ್ರಮಟ್ಟದ ವರಿಷ್ಠರ ಮಧ್ಯೆ ನಡೆದಿದೆ. ಆದರೆ, ವಿಧಾನ ಪರಿಷತ್‌ ಚುನಾವಣೆ ಮೈತ್ರಿ ಸಂಬಂಧ ಈವರೆಗೂ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆಗೆ ಮೈತ್ರಿ ಅಧಿಕೃತಗೊಂಡರೆ, ವಿಧಾನ ಪರಿಷತ್‌ ಚುನಾವಣೆಗೂ ಅದು ಅನ್ವಯಿಸುವ ಎಲ್ಲ ಸಾಧ್ಯತೆಯೂ ಇರುತ್ತದೆ. ಆಗ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಆಕಾಂಕ್ಷಿಗಳು
ಕಳೆದ ಬಾರಿ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಜಯ ಸಾಧಿಸಿದ್ದ ಆಯನೂರು ಮಂಜುನಾಥ ಅವರು ಸದ್ಯ ಕಾಂಗ್ರೆಸ್‌ನಲ್ಲಿ ಇರುವುದರಿಂದ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿಯಲ್ಲಿ ಅವರ ಹೆಸರೂ ಇದೆ. ಕಳೆದಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಸ್‌.ಪಿ. ದಿನೇಶ್‌ ಅವರ ಜತೆಗೆ ಉಡುಪಿ ಜಿಲ್ಲೆಯಿಂದ ಡಾ| ಸುದೀಪ್‌ ಶೆಟ್ಟಿ, ಚಿಕ್ಕಮಗಳೂರಿನ ಪ್ರೊ| ನಂಜೇಶ್‌ ಕೂಡ ಆಕಾಂಕ್ಷಿಯಾಗಿದ್ದಾರೆ.

ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ದ.ಕ. ಜಿಲ್ಲೆಯ ಮೋನಪ್ಪ ಭಂಡಾರಿ, ವಿಕಾಸ್‌ ಮೊದಲಾದವರ ಹೆಸರು ಚಾಲ್ತಿಯಲ್ಲಿದೆ. ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯ ಭೋಜೇಗೌಡರಿಗೆ ಎಸ್‌ಡಿಎಸ್‌ ಟಿಕೆಟ್‌ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಮೂರು ಪಕ್ಷಗಳಲ್ಲೂ ಆಕಾಂಕ್ಷಿಗಳ ಪಟ್ಟಿ ದಿನೇದಿನೆ ಬೆಳೆಯುತ್ತಿರುವುದರಿಂದ ಇನ್ನು ಕೆಲವರ ಹೆಸರು ಹುರಿಯಾಳುಗಳು ಪಟ್ಟಿಗೆ ಸೇರಿಕೊಳ್ಳುವ ಸಾಧ್ಯತೆಯೂ ಇದೆ.

ವಿಶಾಲ ಕ್ಷೇತ್ರ
ನೈಋತ್ಯ ಕ್ಷೇತ್ರವು ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ದಾವಣಗೆರೆಯ ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕುಗಳನ್ನು ಒಳಗೊಂಡಿದೆ. ಒಟ್ಟು ಆರು ಜಿಲ್ಲೆಗಳಲ್ಲಿ ಲಕ್ಷಾಂತರ ಪದವೀಧರರಿದ್ದಾರೆ. ಅಭ್ಯರ್ಥಿ ಆಕಾಂಕ್ಷಿಗಳು, ಪಕ್ಷ ಪ್ರಮುಖರಿಗೆ ಇಷ್ಟು ದೊಡ್ಡ ವ್ಯಾಪ್ತಿಯ ಮತದಾರರನ್ನು ನೋಂದಾಯಿಸುವುದೂ ಒಂದು ಸವಾಲಾಗಿದೆ.

ಕಳೆದ ಬಾರಿಯ ಫ‌ಲಿತಾಂಶ
2018ರಲ್ಲಿ ನಡೆದ ಚುನಾವಣೆಯಲ್ಲಿ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಯನೂರು ಮಂಜುನಾಥ ಅವರು 25,250 ಮತ ಪಡೆದು ಜಯ ಸಾಧಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ. ದಿನೇಶ್‌ 12,838 ಮತ ಪಡೆದಿದ್ದರು. ಶಿಕ್ಷಕ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ 8,647 ಮತ ಪಡೆದು ಜಯ ಸಾಧಿಸಿದ್ದರು. ಬಿಜೆಪಿಯ ಕ್ಯಾ| ಗಣೇಶ್‌ ಕಾರ್ಣಿಕ್‌ 5,812 ಮತ ಪಡೆದಿದ್ದರು.

ಶಿಕ್ಷಣ ಸಂಸ್ಥೆಗಳಿಂದ ಸಂದೇಶ
ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಹಕ್ಕು ಪಡೆಯುವ ಸಂಬಂಧ ಆಯಾ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು ತಮ್ಮ ವ್ಯಾಪ್ತಿಯ ಅರ್ಹ ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರಿಗೆ ಸಂದೇಶ ರವಾನಿಸಿ ಅಗತ್ಯ ದಾಖಲೆಗಳೊಂದಿಗೆ ಮತದಾನದ ಹಕ್ಕು ಪಡೆಯಲು ನೋಂದಾಯಿಸಿಕೊಳ್ಳಲು ತಿಳಿಸಿವೆ.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.