ಉಡುಪಿ: ಗಾಳಿ-ಮಳೆ, ವಿದ್ಯುತ್‌ ಅಸ್ತವ್ಯಸ್ತ

Team Udayavani, May 20, 2017, 3:10 PM IST

udupi.jpg

ಉಡುಪಿ: ಗುರುವಾರ ತಡರಾತ್ರಿಯಿಂದ ಬೆಳಗ್ಗೆವರೆಗೆ ಜಿಲ್ಲೆಯಾದ್ಯಂತ ಭಾರೀ ಗಾಳಿಯಿಂದ ಕೂಡಿದ ಮಳೆಯಾಯಿತು. ಬೇಸಗೆಯ ಬಿಸಿಯಿಂದ ಕಂಗೆಟ್ಟಿದ್ದ ಜನತೆ ಮಳೆಯಿಂದಾಗಿ ಹಿತಾನುಭವ ಹೊಂದಿದರು. 

ಉಡುಪಿ ಜಿಲ್ಲೆಯಲ್ಲಿ ಅಪರಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು. ರಾತ್ರಿ 11 ಗಂಟೆ ಬಳಿಕ ಗುಡುಗು, ಮಿಂಚಿನಿಂದ ಕೂಡಿದ ತುಂತುರು ಮಳೆಯಾಯಿತು. ಮಧ್ಯರಾತ್ರಿ ಬಳಿಕ ಭಾರೀ ಗುಡುಗು ಮಿಂಚಿನೊಂದಿಗೆ ಮುಂಜಾನೆವರೆಗೂ ಗಾಳಿ-ಮಳೆ ಸುರಿದು ವಿದ್ಯುತ್‌ ಸಂಪರ್ಕ ಕಡಿತವಾಯಿತು. 

60 ವಿದ್ಯುತ್‌ ಕಂಬ ಧರೆಗೆ
ಗಾಳಿಯ ಪರಿಣಾಮದಿಂದಾಗಿ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಉರುಳಿದವು. ಮೆಸ್ಕಾಂ ಮಣಿಪಾಲ, ಹಿರಿಯಡಕ ವಲಯಗಳಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ವಿದ್ಯುತ್‌ ಸಂಪರ್ಕ ಇರಲಿಲ್ಲ. ಉಡುಪಿ ನಗರದಲ್ಲಿ ಮಧ್ಯರಾತ್ರಿ ಹೋದ ವಿದ್ಯುತ್‌ ಬೆಳಗ್ಗೆ 9 ಗಂಟೆಗೆ ಬಂತು. ಉಡುಪಿ ಉಪವಿಭಾಗದಲ್ಲಿ ಸುಮಾರು 60 ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿದ್ದು ಬಹುತೇಕ ಕಂಬಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ. ಮಣಿಪಾಲ – ಪರ್ಕಳ ರಸ್ತೆಯ ಈಶ್ವರನಗರದಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಆರು ವಿದ್ಯುತ್‌ ಕಂಬಗಳು ಬಿದ್ದವು. 
ಬ್ರಹ್ಮಾವರ, ಕೋಟ, ಸಾಲಿಗ್ರಾಮ, ಕೊಲ್ಲೂರು,  ವಂಡ್ಸೆ, ಸಿದ್ದಾಪುರ, ಅಮಾಸೆಬೈಲಿನಲ್ಲಿ ಸಿಡಿಲು, ಮಿಂಚಿನಿಂದ ಕೂಡಿದ ಮಳೆಯಾಗಿದೆ.

ಸಿಡಿಲಿಗೆ 9 ಹಸುಗಳು ಸಾವು
ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಕುಂದಾಪುರ ತಾ|ನ ವಿವಿಧೆಡೆ ಗುರುವಾರ ತಡರಾತ್ರಿ ಸಿಡಿಲು ಬಡಿದು 9 ಹಸುಗಳು ಸಾವಿಗೀಡಾಗಿವೆ. 

ಕಲಶಾಭಿಷೇಕ – ವರುಣಾಭಿಷೇಕ
ಕಳೆದ ನಾಲ್ಕು ದಿನಗಳಿಂದ ಶ್ರೀಕೃಷ್ಣ ಮಠದಲ್ಲಿ ಬ್ರಹ್ಮಕಲಶೋತ್ಸವ ನಿಮಿತ್ತ ನಡೆದ ಸಭೆಗಳಲ್ಲಿ ಮೇ 18ರ ಬಳಿಕ ಮಳೆ ಬರುತ್ತದೆ ಎಂದು ಹಲವರು ತಿಳಿಸಿದ್ದರು. ಒಂದು ದಿನದ ಸಭೆಯಲ್ಲಿ “ಬ್ರಹ್ಮಕಲಶೋತ್ಸವಕ್ಕಾಗಿ ಮಳೆ ವಿಳಂಬವಾಗುವುದು ಬೇಡ. ಮಳೆ ಬರಲಿ’ ಎಂದು ಪೇಜಾವರ ಶ್ರೀಗಳು ಹಾರೈಸಿದ್ದರು. ಅಂತೂ ಬ್ರಹ್ಮಕಲಶೋತ್ಸವ ನಡೆದ ದಿನವೇ ಮಳೆ ಬಂದದ್ದು ಕಾಕತಾಳೀಯವಾಗಿದೆ. ಬ್ರಹ್ಮಕಲಶೋತ್ಸವದ ದಿನವೇ ಮಳೆ ಬಂದಿರುವುದಕ್ಕೆ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಹರ್ಷ ವ್ಯಕ್ತಪಡಿಸಿದೆ. ಮಳೆಗಾಗಿ ಪರ್ಯಾಯ ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಸಚಿವ ಪ್ರಮೋದ್‌ ಮಧ್ವರಾಜರು ಪ್ರಾರ್ಥನೆ ಸಲ್ಲಿಸಿದ್ದರು. ಮಸೀದಿ, ಚರ್ಚುಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.