ಉಡುಪಿ: ವಿವಿಧೆಡೆ ಎಲ್ಲ ಸ್ತರದವರಿಂದ ಯೋಗಾಭ್ಯಾಸ
Team Udayavani, Jun 22, 2017, 11:39 AM IST
ಉಡುಪಿ: ಸ್ವಾಮೀಜಿಯವರು, ಜನಪ್ರತಿನಿಧಿಗಳು, ನ್ಯಾಯಾಧೀಶರು, ನ್ಯಾಯವಾದಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಅಧಿಕಾರಿಗಳು,ವೈದ್ಯರು,ಎಂಜಿನಿಯರ್, ಸರಕಾರಿ ನೌಕರರು ಬುಧವಾರ ಜಿಲ್ಲೆಯ ವಿವಿಧೆಡೆ ನಡೆದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ, ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಸಿದ್ಧಿ ಸಮಾಧಿ ಯೋಗ, ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದೂ ಪರಿಷದ್, ವಿವೇಕಾನಂದ ಜಿÇÉಾ ಯೋಗ ಸ್ವಾಸ್ಥ್ಯ ಕೇಂದ್ರ, ಅರೋಗ್ಯ ಭಾರತಿ, ಶ್ರೀ ಕೃಷ್ಣ ಯೋಗ ಕೇಂದ್ರ, ಸನಾತನ ಸಂಸ್ಥೆ, ಆರ್ಟ್ ಆಫ್ ಲಿವಿಂಗ್, ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜು ವತಿಯಿಂದ ನಡೆದ ದಿನಾಚರಣೆ ಯಲ್ಲಿ ಸ್ವತಃ ನಿತ್ಯ ಯೋಗಾಭ್ಯಾಸ ಮಾಡುವ ಪರ್ಯಾಯ ಶ್ರೀ ಪೇಜಾವರ ಮಠದ ಉಭಯ ಶ್ರೀಪಾದರು ಪಾಲ್ಗೊಂಡರು. ಜಿÇÉಾ ಭಾರತ್ ಸ್ವಾಭಿಮಾನ್ ಟ್ರಸ್ಟ್ ಜಿÇÉಾ ಪ್ರಭಾರಿ ಕರಂಬಳ್ಳಿ ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ಮಹಿಳಾ ಕಾಲೇಜು, ಉಜಿರೆ ಎಸ್‌ಡಿಎಂ ಎಜು ಕೇಶನಲ್ ಸೊಸೈಟಿ, ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜು ಸಹಭಾಗಿತ್ವ ದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ದಿನಾ ಚರಣೆ ಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಅಪರ ಜಿಲ್ಲಾಧಿ ಕಾರಿ ಅನುರಾಧಾ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಆಯುಷ್ ಅಧಿಕಾರಿ ಡಾ| ಅಲಕಾನಂದ ರಾವ್ ಮೊದಲಾದವರು ಪಾಲ್ಗೊಂಡಿದ್ದರು.
ಯೋಗಬಂಧು ಆಶ್ರಯದಲ್ಲಿ ಕುಂದಾಪುರದ ಪಾರಿಜಾತ ಹೊಟೇಲ್‌ನಲ್ಲಿ ನಡೆದ ದಿನಾಚರಣೆಯಲ್ಲಿ ಸಹಾಯಕ ಕಮಿಷನರ್ ಶಿಲ್ಪಾ ನಾಗ್ ಪಾಲ್ಗೊಂಡರು. ಮಣಿಪಾಲ ವಿ.ವಿ. ವತಿಯಿಂದ ಎಂಐಟಿಯಲ್ಲಿ ನಡೆದ ಕಾರ್ಯ
ಕ್ರಮದಲ್ಲಿ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಮಣಿಪಾಲದ ಮುನಿಯಾಲು ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಮುನಿಯೋಗ ಪ್ರಾತ್ಯಕ್ಷಿಕೆಯಲ್ಲಿ ಸಂಸ್ಥೆ ಅಧ್ಯಕ್ಷ ಡಾ| ಎಂ.ವಿ. ಶೆಟ್ಟಿ, ಜಿಲ್ಲಾ ಬಿಜೆಪಿಯಿಂದ ಕಿದಿಯೂರು ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.