ಪೂರ್ಣಗೊಳ್ಳದ ಕೆರಾಡಿ – ವಂಡ್ಸೆ ಸಂಪರ್ಕ ರಸ್ತೆ
ಬಸ್ ಸಂಚಾರ ಸ್ಥಗಿತ, ವಿದ್ಯಾರ್ಥಿಗಳಿಗೆ ಸಂಕಷ್ಟ
Team Udayavani, Oct 21, 2019, 5:36 AM IST
ವಂಡ್ಸೆ: ಕೆರಾಡಿ ಮಾರ್ಗವಾಗಿ ಬೆಳ್ಳಾಲ, ನಂದೊಳ್ಳಿ, ನ್ಯಾಗಳಮನೆ, ಹಿಜಾಣ, ವಂಡ್ಸೆ ಮೂಲಕ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ, ಶಾಲಾ – ಮಕ್ಕಳ ಅನುಕೂಲಕ್ಕಾಗಿ ಇದ್ದ ಬಸ್ ಸಂಚಾರ ಸ್ಥಗಿತಗೊಂಡಿದೆ.
ಪ್ರತಿದಿನ ಈ ಮಾರ್ಗದಲ್ಲಿ ಸುಮಾರು 50ರಿಂದ 60 ಮಕ್ಕಳು ಬೇರೆ – ಬೇರೆ ಶಾಲಾ – ಕಾಲೇಜುಗಳಿಗೆ ಹೋಗುತ್ತಾರೆ. ಆದರೆ ಇಷ್ಟು ದಿನಗಳ ಕಾಲ ಬಸ್ ಸಮಸ್ಯೆ ಎದುರಾಗಿತ್ತು. ಈಗ ಬಸ್ ವ್ಯವಸ್ಥೆ ಇದ್ದರೂ ಕೂಡ ರಸ್ತೆ ಕಾಮಗಾರಿ ವಿಳಂಬ ಮಾಡುತ್ತಿರುವ ಕಾರಣದಿಂದ ಬಸ್ ಸಂಚಾರ ಸ್ಥಗಿತಗೊಂಡು ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.
4 ಕಿ.ಮೀ. ಕಾಲ್ನಡಿಗೆ
ಹತ್ತಿರದಲ್ಲೇ ಇದ್ದ ರಸ್ತೆಯ ಸಂಚಾರ ಕಡಿತಗೊಂಡ ಕಾರಣ ವಿದ್ಯಾರ್ಥಿಗಳು ಪ್ರತಿ ದಿನ ಬೆಳಗ್ಗೆ ಸುಮಾರು 4 ಕಿ.ಮೀ. ದೂರದವರೆಗೆ ಮಾರಣಕಟ್ಟೆ ಮಾರ್ಗವಾಗಿ ತೆರಳುವ ಬಸ್‌ಗೆ ನಡೆದುಕೊಂಡೇ ಹೋಗಬೇಕಾಗಿದೆ.
ಶೀಘ್ರ ಪೂರ್ಣಕ್ಕೆ ಆಗ್ರಹ
ಈ ಬಗ್ಗೆ ಸ್ಥಳೀಯ ನಾಯಕರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬಸ್ ಸಂಚಾರ ಶೀಘ್ರವೇ ಆರಂಭಿಸಲು, ರಸ್ತೆಯ ಕಾಮಗಾರಿ ಪೂರ್ಣಗೊಳಿಸಲು ಕ್ಷೇತ್ರದ ಶಾಸಕರು ಒತ್ತಾಯಿಸಬೇಕು ಎಂದು ಈ ಭಾಗದ ಹತ್ತಾರು ಮಂದಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.