ಆರಂಭವಾಗದ ರಸ್ತೆ ಕಾಮಗಾರಿ: ಆಕ್ರೋಶ
Team Udayavani, Jun 20, 2018, 2:35 AM IST
ತೆಕ್ಕಟ್ಟೆ: ಜಿಲ್ಲಾ ಪಂಚಾಯತ್ ವ್ಯಾಪ್ತಿಯ ತೆಕ್ಕಟ್ಟೆ – ದಬ್ಬೆಕಟ್ಟೆ ಸಂಪರ್ಕ ರಸ್ತೆ ಕಾಮಗಾರಿ ಲೋಕೋಪಯೋಗಿ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅನುದಾನದಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ವಿಶೇಷ ಮುತುವರ್ಜಿಯಿಂದ 980 ಲಕ್ಷ ರೂ. ಮೊತ್ತದಲ್ಲಿ ಕಾಮಗಾರಿಗೆ ಚಾಲನೆ ದೊರಕಿದ್ದು ಇದೀಗ ಉಳ್ತೂರಿನವರೆಗೆ ಪೂರ್ಣಗೊಂಡಿದೆ. ಆದರೆ ಮಲ್ಯಾಡಿಯಿಂದ ತೆಕ್ಕಟ್ಟೆಯವರೆಗೆ ಮಾತ್ರ ಕಾಮಗಾರಿ ಆರಂಭವಾಗದೆ ಇರುವ ಕಾರಣ ಬರೀ ಹೊಂಡ ಗುಂಡಿಗಳಿಂದಾಗಿ ರಸ್ತೆ ಯಾವುದೆಂದು ಗೊತ್ತಾಗದ ಪರಿಸ್ಥಿತಿ ಎದುರಾಗಿದೆ.
ಘನ ವಾಹನಗಳ ಸಂಚಾರ ದಟ್ಟಣೆ ಅಧಿಕವಾಗಿರುವುದರಿಂದ ರಸ್ತೆಯಲ್ಲಿ ಹೊಂಡಗಳನ್ನು ಲೆಕ್ಕಿಸದೆ ವಾಹನ ಚಾಲಕರು ಎಗ್ಗಿಲ್ಲದೆ ಸಾಗುತ್ತಿದ್ದು, ರಸ್ತೆಯ ಸಮೀಪದ ನಿವಾಸಿಗಳು ಹಾಗೂ ದಾರಿಹೋಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನಲೆ ರಸ್ತೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.