“ಏಕರೂಪ ಶಿಕ್ಷಣ ನೀತಿಯಲ್ಲೂ ವಿಚಾರ ಭೇದ’
Team Udayavani, Jan 14, 2020, 6:05 AM IST
ಉಡುಪಿ: ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ವಿಚಾರದಲ್ಲಿಯೂ ಸಾಕಷ್ಟು ವಿಚಾರ ಭೇದಗಳಿವೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಗೆ ಸೋಮ ವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಇಂಗ್ಲಿಷ್ ಇಲ್ಲ ಎಂಬ ಕಾರಣಕ್ಕಾಗಿ ಸರಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಎಂಬ ವಾದ ಸರಿಯಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳು ಕೂಡ ಇವೆ. ಸರಕಾರ ಈಗ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಬೇಕೆಂಬ ಉದ್ದೇಶವನ್ನು ಹೊಂದಿದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಹಲವರು ಕಾಯುತ್ತಿರುವುದರಿಂದ ಅದನ್ನು ಯಾವ ರೀತಿ ಮಾಡಬೇಕೆಂಬ ಬಗ್ಗೆ ಯೋಚನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಪ್ರಭಾಕರ ಪೂಜಾರಿ, ಸಂಧ್ಯಾ ರಮೇಶ್ ಉಪಸ್ಥಿತರಿದ್ದರು. ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಸ್ತಾವನೆಗೈದರು. ಸುರೇಶ್ ನಾಯಕ್ ಸ್ವಾಗತಿಸಿದರು. ಕುತ್ಯಾರ್ ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
“ಪಕ್ಕೆಲುಬು’ ಶಿಕ್ಷಕನ ಅಮಾನತು:
ಹೊರಗೆ ಶ್ಲಾಘನೆ, ಊರಿನಲ್ಲಿ ವಿರೋಧ! ಮಕ್ಕಳ ನ್ಯೂನತೆ ಮತ್ತು ಕೊರತೆಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು ಅಕ್ಷಮ್ಯ. ಶಾಲಾ ಅವಧಿಯಲ್ಲಿ ಶಿಕ್ಷಕರು ಮೊಬೈಲ್ ಬಳಕೆ ಮಾಡಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಿದ ಸುರೇಶ ಕುಮಾರ್, ಉತ್ತರ ಕರ್ನಾಟಕದ ಶಾಲೆಯೊಂದರಲ್ಲಿ “ಪಕ್ಕೆಲುಬು’ ಪ್ರಕರಣದ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಶಿಕ್ಷಕನನ್ನು ಅಮಾನತುಗೊಳಿಸಿರುವ ಬಗ್ಗೆ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾದರೆ ಅಲ್ಲಿನ ಗ್ರಾಮಸ್ಥರು ಮಾತ್ರ ಪ್ರತಿಭಟಿಸುತ್ತಿದ್ದಾರೆ. ಅಮಾನತು ಆದೇಶ ಹಿಂಪಡೆಯದಿದ್ದರೆ ಶಾಲೆ ತೆರೆಯಲು ಬಿಡುವುದಿಲ್ಲ ಎಂದು ಧರಣಿ ನಡೆಸುತ್ತಿದ್ದಾರೆ. ಇದೊಂದು ವಿಚಿತ್ರ ಸನ್ನಿವೇಶ ಎಂದರು.
ಅಂಗನವಾಡಿಗಳಿಗೆ ತೊಂದರೆ ಇಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವುದರಿಂದ ಅಂಗನವಾಡಿ ಗಳಿಗೆ ತೊಂದರೆ ಆಗದು. ಅಂಗನವಾಡಿ ನೌಕರರ ಕೆಲಸ ಪೌಷ್ಟಿಕ ಆಹಾರ ಕೊಡುವುದಾದರೆ, ಎಲ್‌ಕೆಜಿ ಯುಕೆಜಿ ಕೆಲಸ ಶಿಕ್ಷಣ ನೀಡುವುದಾಗಿದೆ ಎಂದರು.
ಸಚಿವರು ಏನೆಂದರು?
– ನಾವು ಎಲ್‌ಕೆಜಿ, ಯುಕೆಜಿ ಆರಂಭಿಸದಿದ್ದರೆ ಸರಕಾರಿ ಶಾಲೆಗಳಿಗೆ ಮಕ್ಕಳೇ ಬರುವುದಿಲ್ಲ. ಇದು ಮಕ್ಕಳನ್ನು ಆಕರ್ಷಿಸುವ ತಾಣ.
– ಒಂದನೇ ತರಗತಿಯಿಂದ ನೀಡುವ ನಲಿಕಲಿ ಪಾಠವನ್ನು ಎಲ್‌ಕೆಜಿ, ಯುಕೆಜಿಯಲ್ಲೂ ಆರಂಭಿಸಲು ತರಬೇತಿ ಪಡೆದ ಶಿಕ್ಷಕರ ಅಗತ್ಯವಿದೆ. ಆ ರೀತಿ ತರಬೇತಿಯನ್ನು ಅಂಗನವಾಡಿ ನೌಕರರಿಗೆ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾಧ್ಯವೇ ಎಂಬ ಬಗ್ಗೆ ಚರ್ಚಿಸಲಾಗುವುದು.
– ಶಾಲಾ ಕಟ್ಟಡ, ಕಲಿಕೆಯ ಗುಣಮಟ್ಟ ಹೆಚ್ಚಿಸುವ ಮೂಲಕ ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಆಂಗ್ಲ ಮಾಧ್ಯಮ ಶಾಲೆ ಹೆಚ್ಚಿಸಲು ನಿರ್ಧರಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.