ಅವೈಜ್ಞಾನಿಕ ಒಳಚರಂಡಿ ಕಾಮಗಾರಿ: ದೂರು
Team Udayavani, Aug 4, 2019, 5:35 AM IST
ಕುಂದಾಪುರ: ಪುರಸಭಾ ವ್ಯಾಪ್ತಿಯ ಮದ್ದುಗುಡ್ಡೆ ವಾರ್ಡ್ನ ವೆಂಕಟರಮಣ ಶಾಲೆಯ ಸಮೀಪ ಅವೈಜ್ಞಾನಿಕ ಒಳಚರಂಡಿ ಕಾಮಗಾರಿಯಿಂದಾಗಿ ಮನೆಯೊಂದರ ಬಾವಿಯ ನೀರು ದುರ್ವಾಸನೆ ಹಾಗೂ ನೊರೆಯುತವಾಗಿದೆ. ಇದನ್ನು ಸರಿಪಡಿಸಬೇಕೆಂದು ಕುಂದಾಪುರದ ಎಸಿಗೆ ಮನವಿ ಸಲ್ಲಿಸಲಾಗಿದೆ.
ಮದ್ದುಗುಡ್ಡೆ ವಾರ್ಡಿನ ಗೋಪಾಲಕೃಷ್ಣ ಕೆ. ಅವರು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಎಸ್. ಮಧುಕೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದು, ಮನೆಯ ಬಾವಿಗೆ ಅಸಮರ್ಪಕ ಕಾಮಗಾರಿಯಿಂದ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ನಿಂತಿದೆ. ಈ ಚರಂಡಿಯ ಪೂರ್ವದಲ್ಲಿ ಫ್ಲ್ಯಾಟ್ ಒಂದರ ಟಾಯ್ಲೆಟ್ ಪಿಟ್ನಿಂದ ಕೊಳಚೆ ನೀರು ಹೊರಗೆ ಬರುತ್ತಿದೆ. ಇದರಿಂದ ಬಾವಿಯ ನೀರು ದುರ್ವಾಸನೆಯಿಂದ ಕೂಡಿದೆ ಎಂದವರು ಮನವಿಯಲ್ಲಿ ತಿಳಿಸಿದ್ದಾರೆ. ಕೊಳಚೆ ನೀರು ನಿಂತ ಜಾಗ ಈಗ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿದೆ. ಈ ಬಗ್ಗೆ ಪುರಸಭೆಗೆ ಅನೇಕ ಬಾರಿ ಮನವಿ ಮಾಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.