“ಉಪಚುನಾವಣಾ ಫಲಿತಾಂಶದಲ್ಲಿ ಮುಖ್ಯಮಂತ್ರಿಯ ಹಣದ ಪ್ರಭಾವ’


Team Udayavani, Apr 14, 2017, 3:23 PM IST

1304tke1(imp).jpg

ತೆಕ್ಕಟ್ಟೆ (ಕುಂಭಾಶಿ):  ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಎ. 13ರಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ  ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ  ಅವರು ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಅವರನ್ನು ದೇಗುಲದ ವತಿಯಿಂದ  ಶಾಲು ಹೊದೆಸಿ ಮಹಾಪ್ರಸಾದ ನೀಡಿದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ,  ವಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಮಾಧ್ಯಮದವರೊಂದಿಗೆ ಮಾತ ನಾಡಿದ  ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ  ಆಡಳಿತ ಪಕ್ಷದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಣದ ಪ್ರಭಾವ ಬಹಳಷ್ಟು ಹೆಚ್ಚಾಗಿದ್ದು
ಇದರಿಂದಾಗಿ  ಮುಂದಿನ ವರ್ಷ ನಡೆಯುವ ಯಾವುದೇ ಸಾರ್ವತ್ರಿಕ ಚುನಾವಣೆಗೆ ಯಾವುದೇ ರೀತಿಯ ಪರಿಣಾಮ ಬೀರದು. ಆಡಳಿತ ಪಕ್ಷವಿದ್ದಾಗ ಉಪಚುನಾವಣೆಯಲ್ಲಿ ಗೆಲ್ಲುವುದು ಸಹಜ. ಆದರೆ ಮೈಸೂರು ಮತ್ತು ಚಾಮರಾಜ ನಗರ  ಜಿಲ್ಲೆ  ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಷ್ಠೆ ಹಾಗೂ ಒಡಾಡಿದ ಸ್ಥಳ ಹಣದ ಪ್ರಭಾವದಿಂದಲೇ ಈ  ಉಪಚುನಾವಣಾ ಫಲಿತಾಂಶ ಬಂದಿದೆ.  ಈ ಫಲಿತಾಂಶ ಉಪಚುನಾವಣೆಗೆ ಮಾತ್ರ ಸೀಮಿತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ,  ಮಾಜಿ ಶಾಸಕ ರಘುಪತಿ ಭಟ್‌, ಶಂಭು ಶೆಟ್ಟಿ, ಉಡುಪಿ ಜಿಲ್ಲಾ  ಬಿಜೆಪಿ ಒಬಿಸಿ ಅಧ್ಯಕ್ಷ ರಾಜೇಶ್‌ ಕಾವೇರಿ, ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ  ಆನುವಂಶಿಕ ಧರ್ಮದರ್ಶಿ ಕೆ. ರಮಣ ಉಪಾಧ್ಯಾಯ, ಮೆನೇಜರ್‌ ಆನಂದರಾಮ್‌ ಉರಾಳ,  ಹಾಗೂ ಆನುವಂಶಿಕ ಪರ್ಯಾಯ ಅರ್ಚಕರಾದ ಕೆ. ಕೃಷ್ಣರಾಜ ಉಪಾಧ್ಯಾಯ ಮತ್ತು ಕೆ. ರವಿರಾಜ ಉಪಾಧ್ಯಾಯ,  ಜಿ.ಪಂ.ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಗಣಪತಿ ಟಿ. ಶ್ರೀಯಾನ್‌,  ಕುಂಭಾಶಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀವಾಣಿ ಅಡಿಗ, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸುರೇಶ್‌ ಶೆಟ್ಟಿ ಕಾಡೂರು, ಬಿಜೆಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಉಡುಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷ  ಪ್ರವೀಣ ಕುಮಾರ್‌ ಶೆಟ್ಟಿ, ಕೆದೂರು ಗ್ರಾ.ಪಂ. ಅಧ್ಯಕ್ಷ ಸಂಪತ್‌ ಕುಮಾರ್‌ ಶೆಟ್ಟಿ ಶಾನಾಡಿ, ರವೀಂದ್ರ ದೊಡ್ಮನೆ, ಕಮಲಾಕ್ಷ ಪೈ ಕುಂಭಾಶಿ, ಗೋಪಾಡಿ ಸುರೇಶ್‌ ಶೆಟ್ಟಿ, ಮಹೇಶ್‌ ಪೂಜಾರಿ ಹಾಗೂ  ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ರಾಜ್ಯದಲ್ಲಿ  ಬಿಜೆಪಿಗೆ ಒಳ್ಳೆಯ ಟ್ರೆಂಡ್‌
ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಪ್ರತಿಷ್ಠೆಯ ಕಣವಾಗಿದ್ದ ರಾಜ್ಯದ ಜನತೆಯ ಕುತೂಹಲಕ್ಕೆ ಕಾರಣವಾಗಿದ್ದ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ  ಕಾಂಗ್ರೆಸ್‌ ಜಯಭೇರಿ ಬಾರಿಸಿರುವುದು ಉಪಚುನಾವಣೆಗೆ ಮಾತ್ರ ಸೀಮಿತವೇ ಹೊರತು ಬಿಜೆಪಿ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರದು. ಮುಖ್ಯಮಂತ್ರಿಗಳು ಬಹಳ ಪ್ರತಿಷ್ಠೆಯನ್ನಾಗಿ ಮಾಡಿ ಕೊಂಡು  ದೊಡ್ಡ ಪ್ರಮಾಣದಿಂದ ಆಡಳಿತ ಪಕ್ಷದಿಂದ ಹಣ ಹೊಳೆ ಹರಿದಿದೆ ಹಣದ ಪ್ರಭಾವದ ಮುಂದೆ ನಮ್ಮ ಶಕ್ತಿ ಸಾಲಲಿಲ್ಲ ಅಂತ ಅನಿಸುತ್ತಿದೆ. ಈ ತಾತ್ಕಾಲಿಕ  ಹಿನ್ನಡೆಯನ್ನೇ ಗೆಲುವಿಗೆ ದೊಡ್ಡ ಅಸ್ತ್ರವನ್ನಾಗಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲವರ್ಧಿಸುತ್ತೇವೆ. ರಾಜ್ಯ ಸರಕಾರದ ವಿರುದ್ಧದ ಅಲೆ ರಾಜ್ಯದ ಜನತೆಯಲ್ಲಿದೆ. ಮುಂದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವ ಅಭಿಪ್ರಾಯ ರಾಜ್ಯದ ಜನತೆಯದ್ದು, ಆದ್ದರಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಒಳ್ಳೆಯ ಟ್ರೆಂಡ್‌ ಇದೆ . ಸೋಲು -ಗೆಲುವು ಸಹಜ ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಾರ್ಟಿಯನ್ನು ಮತ್ತಷ್ಟು ಬಲಪಡಿಸುತ್ತೇವೆ.
– ಜಗದೀಶ ಶೆಟ್ಟರ್‌

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.