ಉಡುಪಿ: ಕೊವ್ಯಾಕ್ಸಿನ್, ಕೊವಿಶೀಲ್ಡ್ ಮುನ್ನೆಚ್ಚರಿಕೆ ಲಸಿಕೆ ಮೇಳ
Team Udayavani, Jan 18, 2023, 6:40 AM IST
ಉಡುಪಿ: ಸಂಭಾವ್ಯ ಕೋವಿಡ್-19 ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜ. 18ರಂದು ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕೆ ಮೇಳವನ್ನು ಆಯೋಜಿಸಲಾಗಿದೆ.
ಕೊವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2ನೇ ಡೋಸ್ ಕೊವಿಶೀಲ್ಡ್ ಲಸಿಕೆ, ಕೊವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು 2ನೇ ಡೋಸ್ ಕೊವ್ಯಾಕ್ಸಿನ್ ಪಡೆಯಬಹುದಾಗಿದೆ.
2ನೇ ಡೋಸ್ ಕೊವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆ ಪಡೆದು 26 ವಾರ (6 ತಿಂಗಳು) ಪೂರೈಸಿದವರಿಗೆ ಕೋವಿಡ್ ಮುನ್ನೆಚ್ಚರಿಕೆ ಲಸಿಕೆ ಡೋಸ್ (ಬೂಸ್ಟರ್ ಡೋಸ್) ನೀಡಲಾಗುವುದು.
ಕೊವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕೆಯು ಮಧ್ಯಾಹ್ನ 12ರ ಅನಂತರ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ಸಾರ್ವಜನಿಕರು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ, ಲಸಿಕೆ ಇರುವುದನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗದಿಪಡಿಸಿಕೊಂಡು ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.