ವಡಭಾಂಡ ಬಲರಾಮ ದೇವಸ್ಥಾನ; ಜೀರ್ಣೋದ್ಧಾರದಿಂದ ಭಕ್ತರ ಕನಸು ನನಸು: ಪಲಿಮಾರು ಶ್ರೀ

ಅಷ್ಟಬಂಧ ಬ್ರಹ್ಮಕಲಶ ಧಾರ್ಮಿಕ ಸಭೆ

Team Udayavani, Mar 26, 2024, 12:56 AM IST

ವಡಭಾಂಡ ಬಲರಾಮ ದೇವಸ್ಥಾನ; ಜೀರ್ಣೋದ್ಧಾರದಿಂದ ಭಕ್ತರ ಕನಸು ನನಸು: ಪಲಿಮಾರು ಶ್ರೀ

ಮಲ್ಪೆ: ಪ್ರಾಚೀನವಾದ ಹಾಗೂ ಮಧ್ವಾಚಾರ್ಯರಿಂದ ಪ್ರಾರಂಭಗೊಂಡ ಬಲರಾಮ ದೇವಸ್ಥಾನದ ಜೀರ್ಣೋದ್ಧಾರ ಭಕ್ತರ ಬಹುಕಾಲದ ಕನಸಾಗಿತ್ತು. ದೇವರು ಇಂದು ಆ ಭಕ್ತರ ಕನಸನ್ನು ನನಸು ಮಾಡಿದ್ದಾನೆ. ಒಳಗಿನಿಂದ ಬಲರಾಮನಿಗೆ ಆನಂದವಾದರೆ, ಹೊರಗಿನಿಂದ ಭಕ್ತರಿಗೆ ಆನಂದವಾಗುವ ಪರ್ವಕಾಲ ಇದಾಗಿದೆ ಎಂದು ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನುಡಿದರು.

ಸೋಮವಾರ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಹಳತು -ಹೊಸತುವಿನ ಸಮನ್ವಯ
ವಡಭಾಂಡ ದೇವಸ್ಥಾನ ಜೀಣೋದ್ಧಾರ ಆದರೂ ಇದು ಹಳತೋ ಹೊಸತೋ ಎಂಬ ಪ್ರಶ್ನೆ ಮೂಡುತ್ತದೆ. ನೋಡಿದರೆ ಹಳತು, ಆದರೆ ಇದು ಹೊಸತು. ಇದೀಗ ಹಳತು -ಹೊಸತನ್ನು ಸಮನ್ವಯ ಮಾಡಿದ ದೇವಸ್ಥಾನವಾಗಿದೆ. ಹಳೆಯ ಕಾಲದ ಕಲ್ಲುಗಳನ್ನು ಹಾಗೆಯೇ ಇರಿಸಿಕೊಂಡು ಸುಂದರವಾದ ದೇವಾಲಯವನ್ನು ಶಿಲ್ಪಿಗಳು ನಿರ್ಮಿಸಿ ಕೊಟ್ಟಿದ್ದಾರೆ. ಸಮುದ್ರದ ಅಲೆಗಳಂತೆ ದೇವಸ್ಥಾನಕ್ಕೆ ಜನರು ಅಲೆಗಳಂತೆ ನಿರಂತರವಾಗಿ ಬರುತ್ತಿರಲಿ. ಜನರ ಮನದಿಂಗಿತಗಳು ಈಡೇರುವಂತಾಗಲಿ ಎಂದು ಆಶಿಸಿದರು.

ಡಾ| ಉದಯ ಸರಳತ್ತಾಯ ಅವರು ಧಾರ್ಮಿಕ ಪ್ರವಚನ ನೀಡಿದರು.ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌, ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್‌, ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಕೃಷ್ಣನ್‌ ಎಚ್‌., ಎಜಿಎಂ ರಾಜಗೋಪಾಲ ಬಿ., ಬ್ಯಾಂಕಿನ ಪಿಆರ್‌ಒ ಮಾದವ, ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಶ್ರೀಶ ಭಟ್‌ ಕಡೆಕಾರು, ಅಧ್ಯಕ್ಷ ನಾಗರಾಜ ಮೂಲಿಗಾರ್‌, ಗೌರವ ಸಲಹೆಗಾರ ವಿಜಯೇಂದ್ರ ರಾವ್‌ ಉಪಸ್ಥಿತರಿದ್ದರು. ಧನಂಜಯ ಕಾಂಚನ್‌ ಸ್ವಾಗತಿಸಿದರು, ಕೊರ್ಲಹಳ್ಳಿ ವೆಂಕಟೇಶ್‌ ಆಚಾರ್ಯ ನಿರೂಪಿಸಿ, ವಂದಿಸಿದರು.

ಬ್ರಹ್ಮ ಕಲಶೋತ್ಸವ ಸಂಪನ್ನ
ವಡಭಾಂಡೇಶ್ವರ ಬಲರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್‌ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರಗಿತು.ಬೆಳಗ್ಗೆ 6-45ಕ್ಕೆ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಿತು. ಆ ಬಳಿಕ ನ್ಯಾಸಪೂಜೆ, ಪ್ರಸನ್ನಪೂಜೆ, ಮಹಾ ಮಂತ್ರಾಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.