
‘ಕೇಳುಗರ ಒಲವು -ಅರಿವು ಸಂಗೀತಕ್ಕೆ ಪ್ರೇರಕ ‘
Team Udayavani, Dec 25, 2018, 2:58 PM IST

ಉಡುಪಿ: ಕೇಳುಗರ ಒಲವು ಮತ್ತು ಅರಿವು ಸಂಗೀತಕ್ಕೆ ಪ್ರೇರಕ ಎಂದು ಹಿರಿಯ ವಿದ್ವಾಂಸರಾದ ಡಾ| ನೀರ್ಕಜೆ ತಿರುಮಲೇಶ್ವರ ಭಟ್ ಹೇಳಿದರು. ಅವರು ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ 41ನೇ ವಾದಿರಾಜ ಕನಕದಾಸ ಸಂಗೀತೋತ್ಸವದ ಸಮಾರೋಪ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಹಲವು ಭಾಗಗಳಿಂದ ಬಂದು ಭಾಗವಹಿಸಿ ಒಂದು ಸಂಗೀತದ ವಾತಾವರಣ ಉಂಟು ಮಾಡಿದ್ದಕ್ಕೆ ಎಲ್ಲ ಹಿರಿ-ಕಿರಿಯ ಕಲಾವಿದರನ್ನು ಡಾ| ಭಟ್ ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ| ಉದಯಶಂಕರ್ ಮಾತನಾಡಿದರು.
ಕನಕದಾಸ ಅಧ್ಯಯನ ಸಂಶೋಧನ ಪೀಠದ ಸಂಯೋಜನಾಧಿಕಾರಿ ಪ್ರೊ| ವರದೇಶ್ ಹಿರೇಗಂಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಗೀತಾಸಕ್ತರ ಸೇರುವಿಕೆಯಿಂದ ಈ ಸಂಗೀತ ಕಾರ್ಯಕ್ರಮ ‘ಊರಿನ ಹಬ್ಬ’ವಾಗುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಸರಿಗಮ ಭಾರತಿ ಸಂಗೀತ ವಿದ್ಯಾಲಯದ ನಿರ್ದೇಶಕ ಉಮಾ ಉದಯಶಂಕರ್ ವಂದಿಸಿ, ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.