ಸೋಂದಾ, ಉಡುಪಿ: ವಾದಿರಾಜರ ಆರಾಧನೆ
Team Udayavani, Mar 16, 2017, 12:34 PM IST
ಉಡುಪಿ/ಶಿರಸಿ: ಶ್ರೀಕೃಷ್ಣಮಠದಲ್ಲಿ ಅನೇಕ ಬದಲಾವಣೆಗಳನ್ನು ತಂದ ಶ್ರೀ ವಾದಿರಾಜ ಗುರುಸಾರ್ವಭೌಮರ ಆರಾಧನೋತ್ಸವ ಬುಧವಾರ ಅವರ ಮೂಲ ವೃಂದಾವನವಿರುವ ಶಿರಸಿ ಸಮೀಪದ ಸೋಂದಾ ಕ್ಷೇತ್ರ ಮತ್ತು ಉಡುಪಿ ಶ್ರೀಕೃಷ್ಣ ಮಠದಲ್ಲಿ ಜರಗಿತು.
ಶ್ರೀಕೃಷ್ಣ ಮಠದಲ್ಲಿ ನಡೆದ ಸಮಾರಂಭದಲ್ಲಿ ವಾದಿರಾಜರ ಭಾವಚಿತ್ರದ ಮೆರವಣಿಗೆ ರಥಬೀದಿಯಲ್ಲಿ ನಡೆ ಯಿತು. ಬಳಿಕ ವಿದ್ವತ್ ಸಭೆಯಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು, ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪಾಲ್ಗೊಂಡು ವಾದಿರಾಜರ ಪ್ರತಿಭಾ ಸಂಪನ್ನತೆ, ತಪಸ್ಸು, ಗ್ರಂಥ ರಚನೆ ಮೊದಲಾದ ವಿಷಯಗಳ ಮೇಲೆ ಬೆಳಕು ಚೆಲ್ಲಿದರು.
ಸೋಂದಾ ಕ್ಷೇತ್ರದಲ್ಲಿ ಶ್ರೀಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಮೂಲ ವೃಂದಾವನಕ್ಕೆ ಪೂಜೆ ಸಲ್ಲಿಸಿದರು. ಬಳಿಕ ವಾದಿರಾಜ ರಿಗೆ ದೊರಕಿದ್ದ ಮುತ್ತಿನಕಿರೀಟ, ಛತ್ರಚಾಮರ, ಅವರು ಕೊನೆಯಲ್ಲಿ ಬಿಸುಟ ಕಾವಿಶಾಟಿಯನ್ನು ಭಕ್ತರು ವೀಕ್ಷಿಸಿದರು.
ಉದ್ಯಾವರದ ಶ್ರೀ ವರಾಹತೀರ್ಥ ಸಂಸ್ಥಾನದಲ್ಲಿ ಪಂಚವೃಂದಾವನಕ್ಕೆ ಅರ್ಚಕ ಅನಂತ ಆಚಾರ್ಯ ವಿಶೇಷ ಪೂಜೆ ಸಲ್ಲಿಸಿದರು. ವಾದಿರಾಜರ ಮೃತ್ತಿಕಾ ವೃಂದಾವನವಿರುವ ಸ್ಥಳಗಳಲ್ಲಿ ವಿಶೇಷ ಪೂಜೆ ಸಂಪನ್ನ ಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Udupi: ಕಲ್ಸಂಕ ಜಂಕ್ಷನ್; ಹಗಲು-ರಾತ್ರಿ ಟ್ರಾಫಿಕ್ ಕಿರಿಕಿರಿ
Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.