ವಂಡ್ಸೆ ಹೋಬಳಿಯನ್ನು ಸನಿಹದ ಕುಂದಾಪುರದಲ್ಲೇ ಉಳಿಸಲು ಬೇಡಿಕೆ


Team Udayavani, Mar 18, 2017, 5:11 PM IST

17032017KLR-E-4(A).jpg

ಕೊಲ್ಲೂರು:   ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆಯ ಗುಮ್ಮ ಮತ್ತೆ ಈ ಭಾಗ ದಲ್ಲಿ ಆವರಿಸುವ ಆತಂಕದಲ್ಲಿರುವ ವಂಡ್ಸೆ ನಿವಾಸಿಗಳಿಗೆ ಬೈಂದೂರು ಹೊಸ ತಾಲೂಕಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ಆ ಬಗ್ಗೆ ಖುಷಿಗೊಂಡಿದ್ದರೂ ತಾ| ವ್ಯಾಪ್ತಿಯ ಸೀಮಾರೇಖೆಯ ವಿಚಾರದಲ್ಲಿ ಬಹಳಷ್ಟು ವಿರೋಧವು ಕಂಡುಬಂದಿದ್ದು ವಂಡ್ಸೆ ಹೋಬಳಿಯನ್ನು ಕುಂದಾಪುರ ತಾಲೂಕಿನಲ್ಲಿ ಸೇರ್ಪಡೆಗೊಳಿಸಬೇಕೆಂಬ ಬೇಡಿಕೆ ಆ ಭಾಗದ ಜನರಲ್ಲಿ ಆರಂಭಗೊಂಡಿದ್ದು ಅವೈಜ್ಞಾನಿಕ ಮಾದರಿಯಲ್ಲಿ ಸೀಮಾರೇಖೆಯ ಗುರುತಿಸುವಿಕೆ ಮಾಡಿದಲ್ಲಿ ಉಗ್ರ ಹೋರಾಟ ನಡೆಸ ಬೇಕಾದೀತು ಎಂಬ ಕೂಗು ಕೇಳಿ ಬರುತ್ತಿದೆ.

ವಂಡ್ಸೆ ಗ್ರಾ.ಪಂ. ವ್ಯಾಪ್ತಿ ಸಮೇತ ಚಿತ್ತೂರು, ಇಡೂರು, ಆಲೂರು, ಕೆರಾಡಿ, ಬೆಳ್ಳಾಲ ಸಮೇತ ನೂಜಾಡಿ ಕುಂದಬಾರಂದಾಡಿ ಮುಂತಾದ ಗ್ರಾಮಗಳನ್ನು ಕುಂದಾಪುರ ವ್ಯಾಪ್ತಿಗೆ ಸೇರಿಸಬೇಕೆಂಬ ಜನರ ಒತ್ತಡವು ಆರಂಭಗೊಂಡಿದೆ. 2003-2004, 2008-2013 ವರೆಗೆ ವಂಡ್ಸೆ ಹೋಬಳಿ ಪ್ರತ್ಯೇಕಿಸಬೇಕೆಂಬ ಅಲ್ಲಿನ ನಿವಾಸಿಗಳ ಒತ್ತಡವು ಶಾಸಕ ಗೋಪಾಲ ಪೂಜಾರಿಯವರಿಗೆ ನಿರ್ದಿಷ್ಟ ನಿಲುವನ್ನು ಹೊಂದಲು ಸಾಧ್ಯವಾಗದ ಪರಿಸ್ಥಿತಿಗೆ ತಂದೊಡ್ಡಿದೆ. 

ಹೋಬಳಿಯ ಜನರ ಒಮ್ಮತದ ಅಭಿಪ್ರಾಯದಂತೆ ಸೇರ್ಪಡೆಯ ಕಾರ್ಯ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿರುವ ಗೋಪಾಲ ಪೂಜಾರಿ ಅವರು ಹೊಸದಾಗಿ ರೂಪುಗೊಳ್ಳಲಿರುವ  ಬೈಂದೂರು ತಾಲೂಕಿನ ಗಡಿ ಪ್ರದೇಶದ ಜನರ ಅಭಿಪ್ರಾಯವನ್ನು  ಕ್ರೋಡೀಕರಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುತ್ತಾರೆ. ಕರಾವಳಿಯ ಜಿಲ್ಲೆಗಳಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಹೊಸ 3 ತಾಲೂಕುಗಳು ಅದರಲ್ಲೂ ಮುಖ್ಯವಾಗಿ ಬೈಂದೂರು, ಬ್ರಹ್ಮಾವರ ಹಾಗೂ ಕಾಪು ಘೋಷಣೆಯಾಗಿದ್ದು ಅದರೊಡನೆ ಅಲ್ಲಿನ ಪ್ರತಿಯೊಂದು ಗ್ರಾಮದ ನಿವಾಸಿಗಳಿಗೆ ಎಟಕುವ ದೂರ ವ್ಯಾಪ್ತಿಗೆ ಅನುಕೂಲವಾಗುವ ಪ್ರದೇಶದಲ್ಲಿ ಕಂದಾಯ ಅರಣ್ಯ ಹಾಗೂ ಇನ್ನಿತರ ಇಲಾಖೆಗಳ ಕಚೇರಿಯನ್ನು ಆರಂಭಿಸದಿದ್ದಲ್ಲಿ ನೂರಾರು ಕಿ.ಮೀ. ದೂರ ಸುತ್ತಿ ಬಳಸಿ ವಾಹನಗಳನ್ನು ಅವಲಂಬಿಸಿ ಸಾಗುವುದು. ಆ ಪ್ರದೇಶದ ಜನರಿಗೆ ಕಿರಿಕಿರಿಯಾಗುವುದರಲ್ಲಿ ಎರಡು ಮಾತಿಲ್ಲ. ಘೋಷಣೆಯಾಗಿರುವ ಹೊಸ ತಾಲೂಕುಗಳು ಅನುಷ್ಠಾನವಾಗುತ್ತದೋ ಅಥವಾ ಮೊದಲಿನಂತೆ ಘೋಷಣೆಗೆ ಮಾತ್ರ ಸೀಮಿತವಾಗಿ ಉಳಿಯುವುದೋ ಎಂಬಿತ್ಯಾದಿ ಪ್ರಶ್ನೆಗಳು ಸಾರ್ವಜನಿಕರಲ್ಲಿ ಮೂಡಿಬಂದಿದ್ದು ಇಲ್ಲಿನ ಮೂಲಭೂತ ವ್ಯವಸ್ಥೆಗಳನ್ನು ಒದಗಿಸುವಲ್ಲಿ ಸರಕಾರ ಯಾವ ಮಟ್ಟದಲ್ಲಿ ಸ್ಪಂದಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಈಗಾಗಲೇ ಕಾರ್ಯಗತವಾಗಿರುವ ಅನೇಕ ನೂತನ ಗ್ರಾ.ಪಂ. ಗಳಿಗೆ ಸ್ವಂತ ಕಟ್ಟಡದ ಕೊರತೆಯಿಂದ ನಲುಗುತ್ತಿರುವ ಈ ದಿಸೆಯಲ್ಲಿ ಇಡೀ ವಿಧಾನಸಭಾ ಕ್ಷೇತ್ರದ ಅದೀನದಲ್ಲಿ ಬರುವ ಹೊಸ ತಾ|ಗಳ ಆಡಳಿತ ವ್ಯವಸ್ಥೆಯಲ್ಲಿನ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವೇ ಅನ್ನುವುದು ಪ್ರಶ್ನಾರ್ಥಕವಾಗಿಯೇ ಉಳಿದಿದೆ.

ವಂಡ್ಸೆ ಗ್ರಾಮವನ್ನು ಕುಂದಾಪುರ ತಾಲೂಕಿನಲ್ಲೇ ಉಳಿಸಿದಲ್ಲಿ ಆ ಭಾಗದ ಜನರಿಗೆ ಹೆಚ್ಚಿನ ಸೌಕರ್ಯ ಕಲ್ಪಿಸಿದಂತಾಗುವುದು.
– ಡಾ| ಅತುಲ್‌ ಕುಮಾರ್‌ ಶೆಟ್ಟಿ

ಹೊಸ ತಾಲೂಕುಗಳ ರಚನೆಯಿಂದಾಗಿ ಅಲ್ಲಿನ ನಿವಾಸಿಗಳಿಗೆ ಹೆಚ್ಚಿನ ಅನುಕೂಲ ಲಭಿಸುವುದಾದರೂ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಗಡಿಭಾಗ ದಲ್ಲಿ ವಾಸವಾಗಿರುವವರಿಗೆ ಅಲ್ಲಿಗೆ ಸಮೀಪವಿರುವ ತಾಲೂಕನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುವುದರೊಡನೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ಜಿಲ್ಲಾಡಳಿತವು ಹೆಚ್ಚಿನ ಆದ್ಯತೆ ನೀಡಬೇಕು.
– ಉದಯ ಕುಮಾರ್‌ ಶೆಟ್ಟಿ, ಅಧ್ಯಕ್ಷರು, ವಂಡ್ಸೆ ಗ್ರಾ.ಪಂ.

ಹೊಸ ತಾಲೂಕು ರಚನೆಯಾಗುತ್ತಿರುವುದು ಸ್ವಾಗತಾರ್ಹವಾದರೂ  ಗಡಿಭಾಗದ ನಿವಾಸಿಗಳಿಗೆ ಅವರ ಅನುಕೂಲತೆಗೆ ತಕ್ಕಂತೆ ತಾಲೂಕು ನಿರ್ಧರಿಸುವ ಅವಕಾಶ ನೀಡಬೇಕು. ಎಲ್ಲ ವರ್ಗದ ಜನರ ಅಭಿಪ್ರಾಯ ಕ್ರೋಡೀಕರಿಸಿ ಸೌಕರ್ಯ ಒದಗಿಸಬೇಕು.
– ಬಿ.ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಮುಖಂಡರು

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.