ಆ.25ರಂದು ಉಡುಪಿ ನಗರದಲ್ಲಿ ವಾಹನ ಸಂಚಾರ ಬದಲಾವಣೆ
ಉಡುಪಿ ಜಿಲ್ಲಾ ರಜತ ಮಹೋತ್ಸವ; ರಾಜ್ಯಪಾಲರು ಆಗಮಿಸುತ್ತಿರುವ ಹಿನ್ನೆಲೆ
Team Udayavani, Aug 24, 2022, 8:59 PM IST
ಉಡುಪಿ: ಜಿಲ್ಲಾ ರಜತ ಮಹೋತ್ಸವಕ್ಕೆ ಆ.25ರಂದು ರಾಜ್ಯಪಾಲರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
-ಅಜ್ಜರಕಾಡು ಮೈದಾನದ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ ಪುರಭವನದ ಪಕ್ಕದ ರಸ್ತೆಯಲ್ಲಿ ಪಾರ್ಕ್ ಮಾಡುವುದು.
-ಕುಂದಾಪುರ, ಮಲ್ಪೆ, ಕಾಪು, ಪಡುಬಿದ್ರಿ ಕಡೆಯಿಂದ ಬರುವಂತಹ ಸಾರ್ವಜನಿಕ ವಾಹನಗಳನ್ನು ಸೈಂಟ್ ಸಿಸಿಲಿ ಶಾಲೆಯ ಮೈದಾನದಲ್ಲಿ ಪಾರ್ಕ್ ಮಾಡುವುದು.
-ಅಲೆವೂರು, ಮೂಡುಬೆಳ್ಳೆ, ಮಣಿಪಾಲ, ಕಾರ್ಕಳ ಕಡೆಗಳಿಂದ ಬರುವ ವಾಹನಗಳಿಗೆ ಮಿಷನ್ ಕಂಪೌಂಡ್ ಬಳಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನ ಮತ್ತು ಕ್ರಿಶ್ಚಿಯನ್ ಪಿಯು ಕಾಲೇಜಿನ ಮೈದಾನದಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.
-ಬೋರ್ಡ್ ಹೈಸ್ಕೂಲಿನಿಂದ ಹುತಾತ್ಮ ಸ್ಮಾರಕದವರೆಗೆ ಶಾಲಾ ಮಕ್ಕಳ ಮೆರವಣಿಗೆ ಇದ್ದು, ಮೆರವಣಿಗೆ ಆರಂಭಗೊಂಡು ಮುಕ್ತಾಯದವರೆಗೂ ಈ ಮಾರ್ಗದಲ್ಲಿ ಬಸ್ ಮಾರ್ಗ ಬದಲಾವಣೆ ಮಾಡಲಾಗುವುದು.
-ಜಿಲ್ಲೆಯ ಗ್ರಾ.ಪಂ.ಗಳಿಂದ ಬರುವಂತಹ ವಾಹನಗಳು ಸದಸ್ಯರನ್ನು ಪುರಭವನ ಹಾಗೂ ಜೋಡುಕಟ್ಟೆ ಬಳಿ ಇಳಿಸಿ, ತಮ್ಮ ವಾಹನಗಳನ್ನು ಜೋಡುಕಟ್ಟೆಯಿಂದ ಕಿನ್ನಿಮೂಲ್ಕಿವರೆಗೆ ರಸ್ತೆಯ ಎಡ ಮತ್ತು ಬಲ ಬದಿ ಪಾರ್ಕಿಂಗ್ ಮಾಡಬೇಕು.
-ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸೈಂಟ್ ಸಿಸಿಲಿ ಹಾಗೂ ಮಿಷನ್ ಕಾಂಪೌಂಡ್ ಬಳಿ ಇರುವ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.