ವೆಂಟೆಡ್ ಡ್ಯಾಮ್ ಕಾಮಗಾರಿ ಪೂರ್ಣ: ಸಂಚಾರಕ್ಕೆ ಮುಕ್ತ
Team Udayavani, Jul 13, 2019, 5:49 AM IST
ಬೈಂದೂರು: ಸುಮನಾವತಿ ನದಿಗೆ ಅಡ್ಡಲಾಗಿ ಬಿಜೂರು ಹಾಗೂ ತಗ್ಗರ್ಸೆ ಗ್ರಾಮದ ಕೃಷಿಕರಿಗೆ ಅನುಕೂಲವಾಗುವಂತೆ ಬಿಜೂರು ಅರೆಕಲ್ಲು ಬಳಿ ನಿರ್ಮಿಸಿದ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದೆ. ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ.
ಈ ಭಾಗದಲ್ಲಿ ಕಳೆದ 30-35 ವರ್ಷದ ಹಿಂದೆ ನಿರ್ಮಿಸಿದ ಕಿಂಡಿ ಅಣೆಕಟ್ಟು (ಕಾಲು ಸಂಕ) ಇತ್ತೀಚಿನ ವರ್ಷಗಳಲ್ಲಿ ತೀರಾ ದುಃಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ನದಿಯಲ್ಲಿ ಹಿನ್ನೀರ ಸಂಗ್ರಹ ಕಡಿಮೆಯಾಗಿ, ಇದನ್ನು ಅವಲಂಬಿಸಿರುವ ಬಿಜೂರು ಹಾಗೂ ತಗ್ಗರ್ಸೆ ಗ್ರಾಮದ ಕೃಷಿಕರು ಸಂಕಷ್ಟಕ್ಕೀಡಾಗಿದ್ದರು. ಹೀಗಾಗಿ ಈ ಭಾಗದಲ್ಲಿ ಸುಸಜ್ಜಿತ ಕಿಂಡಿ ಅಣೆಕಟ್ಟನ್ನು ನಿರ್ಮಿಸಿಕೊಡುವಂತೆ ಎರಡು ಗ್ರಾಮದ ಗ್ರಾಮಸ್ಥರು ಹಿಂದಿನ ಶಾಸಕರಿಗೆ ಮನವಿ ನೀಡಿದ್ದರು. ಬೇಡಿಕೆಗೆ ಸ್ಪಂದಿಸಿದ ಅಂದಿನ ಶಾಸಕ ಕೆ. ಗೋಪಾಲ ಪೂಜಾರಿಯವರು ಸಣ್ಣ ನೀರಾವರಿ ಇಲಾಖೆಯಿಂದ ನೂತನ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿದ್ದರು. 6.60 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ವೆಂಟೆಡ್ ಡ್ಯಾಮ್, ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.
ಕಿಂಡಿ ಅಣೆಕಟ್ಟು
94 ಮೀ. ಉದ್ದ ಹಾಗೂ 5.5 ಮೀ ಅಗಲವಿದೆ. ಕಿಂಡಿ ಅಣೆಕಟ್ಟು, ಕಾಲು ಸಂಕದ ಮಾದರಿಯಲ್ಲಿರುವ ಕಾರಣ ವಾಹನಗಳು ಸಂಚರಿಸುತ್ತಿರಲಿಲ್ಲ, ಇದ ರಿಂದಾಗಿ ತಗ್ಗರ್ಸೆ ಉದ್ದಾಬೆಟ್ಟು ಭಾಗದ ನಿವಾಸಿಗಳು ತಮ್ಮ ವಾಹನಗಳನ್ನು ಬಿಜೂರಿನ ಅರೆಕಲ್ಲು ಬಳಿ ನಿಲ್ಲಿಸಿ ಅಲ್ಲಿಂದ ನಡೆದುಕೊಂಡು ತೆರಳುತ್ತಿದ್ದರು. ಅಲ್ಲದೇ ಮಳೆಗಾಲದಲ್ಲಿ ಈ ಕಿಂಡಿ ಅಣೆಕಟ್ಟಿನ ಸಂಚರಿಸುವಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದರು. ಈ ಕುರಿತು ಸೇತುವೆ ಅಪಾಯದ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು.
ಹೊಸ ಕಿಂಡಿ ಅಣೆಕಟ್ಟು ಸುಸಜ್ಜಿತವಾಗಿರುವು ದಲ್ಲದೇ, 5.5 ಮೀ. ಅಗಲವಿರುವುದರಿಂದ ವಾಹನ ಸಂಚಾರಕ್ಕೂ ಅನುಕೂಲವಾಗಿದೆ. ಇದಕ್ಕೆ ಮೆಕ್ಯಾನಿಕಲ್ ಕ್ರೆಸ್ಟ್‌ಗೇಟ್ ಅಳವಡಿಸಲಾಗುತ್ತಿದೆ. ಕಿಂಡಿ ಅಣೆಕಟ್ಟಿನ ಬಳಿ ನದಿದಂಡೆ ಕುಸಿಯದಂತೆ ನದಿಯ ಎರಡು ಮಗ್ಗುಲ್ಲಲ್ಲಿ ಸುಮಾರು 100 ಮೀ. ಉದ್ದದವರೆಗೆ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.