ಉದಯ್‌ಪುರ ಘಟನೆ: ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು; ವೆರೋನಿಕಾ ಕರ್ನೆಲಿಯೊ
Team Udayavani, Jun 29, 2022, 2:51 PM IST
ಉಡುಪಿ: ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ರಾಜಸ್ಥಾನದ ಉದಯ್‌ಪುರದಲ್ಲಿ ಯುವಕನೊಬ್ಬನ ಬರ್ಬರ ಹತ್ಯೆಯಾಗಿರುವುದು ಅಮಾನವೀಯ ಹಾಗೂ ಕ್ರೂರತೆಯ ಪರಮಾವಧಿಯಾಗಿದ್ದು ನಾಗರಿಕ ಸಮಾಜ ಇಂತಹ ವರ್ತನೆಯನ್ನು ಸಹಿಸಲಾಗದು ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಘಟನೆಯನ್ನು ಖಂಡಿಸಿದ್ದಾರೆ.
ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಯಾವುದೇ ಸಮುದಾಯ ಮಾಡಿದ್ದರೂ ಕೂಡ ಸಹಿಸಲು ಸಾಧ್ಯವಿಲ್ಲ. ಉದಯಪುರದ ಹತ್ಯೆಯನ್ನು ‘ಭಯಾನಕ ಮತ್ತು ಭೀಕರ’ ಆಗಿದ್ದು ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕೆಂದರು.
ಇದನ್ನೂ ಓದಿ: ಪುರಸಭಾ ಮಾಜಿ ಅಧ್ಯಕ್ಷೆ ಪತಿಗೆ ಚಾಕುವಿನಿಂದ ಬೆದರಿಸಿ ಚಿನ್ನದ ಸರ,ಮೊಬೈಲ್ ಕಸಿದು ಪರಾರಿ
ಭಾರತದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡಲು ಬಯಸುವವರು ನಮ್ಮ ದೇಶ ಮತ್ತು ಸಮಾಜಕ್ಕೆ ಮಾರಕ. ಸುಸಂಸ್ಕೃತ ಸಮಾಜದಲ್ಲಿ ಇಂತಹ ಕ್ರೂರ ಕೃತ್ಯಗಳಿಗೆ ಸ್ಥಳವಿಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಕೂಡ ಇಂತಹ ಕೃತ್ಯಗಳನ್ನು ಬೆಂಬಲಿಸುವುದಿಲ್ಲ ಎಂದರು.
ಧಾರ್ಮಿಕ ಮೂಲಭೂತವಾದವು ಯಾವುದೇ ಸಮುದಾಯವನ್ನು ಕುರುಡನನ್ನಾಗಿ ಮಾಡುವುದಲ್ಲದೆ ಅವರ ಆಲೋಚನಾ ಶಕ್ತಿಯನ್ನು ಕಸಿದುಕೊಳ್ಳುತ್ತದೆ. ಒಂದು ಮತಾಂಧತೆಯು ಮತ್ತೊಂದು ಮತಾಂಧತೆಯನ್ನು ಪೋಷಿಸುತ್ತದೆ. ಈ ಅಪರಾಧದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಹಿಂಸಾಚಾರವನ್ನು ವಿರೋಧಿಸುವುದು ನಮ್ಮ ಪಕ್ಷದ ಸ್ಥಿರ ನಿಲುವು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳುವಂತಿಲ್ಲ. ರಾಜ್ಯ ಸರ್ಕಾರವು ಸಾಧ್ಯವಾದಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.