ಗರಿಷ್ಠ ಪ್ರಮಾಣದ ಮತದಾನಕ್ಕೆ ಪ್ರಯತ್ನ: ಸಿಇಒ ಪ್ರಸನ್ನ
Team Udayavani, Feb 16, 2023, 6:10 AM IST
ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ಮತದಾನಕ್ಕೆ ಬೇಕಾದ ಕ್ರಮವನ್ನು ಕೈಗೊಳ್ಳುವಂತೆ ಸ್ವೀಪ್ ಸಮಿತಿ ಜಿ.ಪಂ. ಸಿಇಒ ಪ್ರಸನ್ನ ಎಚ್. ಸೂಚಿಸಿದರು.
ಜಿ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಇಲಾಖೆಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಮತದಾನ ಜಾಗೃತಿ ಕಾರ್ಯಕಮ್ರಗಳನ್ನು ಜೋಡಿಸಿಕೊಂಡು, ವಿದ್ಯುನ್ಮಾನ ಮತಯಂತ್ರದ ಬಳಕೆ, ವಿವಿ ಪ್ಯಾಟ್ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವಂತೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಎಲ್ಲ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕೊರಗ ಸಮುದಾಯದ ಹಾಡಿಗಳಲ್ಲಿ ವಿಶೇಷವಾಗಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಗೊಂದು ಥೀಮ್
ಚುನಾವಣ ಆಯೋಗವು ಪ್ರತೀ ಜಿಲ್ಲೆಗೆ ಪ್ರತ್ಯೇಕ ಥೀಮ್ ಬಳಸಿ ಒಂದು ಮತಗಟ್ಟೆಯನ್ನು ನಿರ್ಮಿಸುವಂತೆ ತಿಳಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಯಕ್ಷಗಾನ ಅಥವಾ ಕಂಬಳವನ್ನು ಬಿಂಬಿಸುವ ರೀತಿಯಲ್ಲಿ ಮತಗಟ್ಟೆಯನ್ನು ಅಲಂಕರಿಸಲು ಮತ್ತು ಸ್ಥಳೀಯ ನೈಸರ್ಗಿಕ ಪರಿಕರಗಳನ್ನು ಬಳಸಿ ಚಪ್ಪರ ಹಾಕಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದರು.
ಅಧ್ಯಯನಕ್ಕೆ ಸೂಚನೆ
ಜಿಲ್ಲೆಯಲ್ಲಿ ಕಳೆದ ಬಾರಿ ಶೇ. 78.36 ಮತದಾನವಾಗಿದ್ದು, ಇದಕ್ಕಿಂತಲೂ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸ್ವೀಪ್ ಸಮಿತಿಯ ಸದಸ್ಯರು ಅಧ್ಯಯನ ನಡೆಸಿ, ಕಡಿಮೆ ಮತದಾನವಾಗಿರುವುದಕ್ಕೆ ಕಾರಣಗಳು ಮತ್ತು ಈ ಬಾರಿ ಅಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ನೀಡುವಂತೆ ಹಾಗೂ ಜಿಲ್ಲೆಯ ಎಲ್ಲ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸರಕಾರಿಮ ಖಾಸಗಿ ಜಾಹೀರಾತು ಫಲಕಗಳ ಸಮಗ್ರ ವಿವರಗಳನ್ನು ಸಂಗ್ರಹಿಸುವಂತೆ ಮತ್ತು ಚುನಾವಣೆ ಘೋಷಣೆಯಾದ 24 ಗಂಟೆಯ ಒಳಗೆ ಆ ಫಲಕಗಳಲ್ಲಿ ಸ್ವೀಪ್ ಕುರಿತು ಜಾಹೀರಾತು ಅಳವಡಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
1111 ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯ ಮೂಲಸೌಕರ್ಯಗಳು ಇರುವ ಬಗ್ಗೆ ಪರಿಶೀಲನೆ ನಡೆಸಿ, ಸ್ವೀಪ್ ಕಾರ್ಯಕ್ರಮಗಳು ವಿನೂತನ ಮತ್ತು ಆಕರ್ಷಕವಾಗಿರಬೇಕು. ಯುವ ಜನರನ್ನು ಮತದಾನ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವಂತೆ ಮಾಡಬೇಕು. ಪ್ರಜಾಪ್ರಭುತ್ವ ದೊಡ್ಡ ಹಬ್ಬ ಚುನಾವಣೆಯನ್ನು ಸಂಭ್ರಮದಿಂದ ಆಚರಿಸಲು ಬೇಕಾದ ಕ್ರಮ ತೆಗೆದುಕೊಳ್ಳಬೇಕು. ಎಲ್ಲ ಇಲಾಖೆಯವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡೆ°àಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಸ್ವೀಪ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಹತ್ತು ಜನ ಸಿಎಂ ರೇಸ್ ನಲ್ಲಿದ್ದು, ನಾನು ಕೂಡ ಒಬ್ಬ: ಡಾ. ಜಿ.ಪರಮೇಶ್ವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.