ಗಡಿ ಭದ್ರತಾ ಪಡೆಯಲ್ಲಿ ಅವಕಾಶ ಪಡೆದ ಬೈಂದೂರಿನ ಯುವತಿ
Team Udayavani, Apr 1, 2021, 3:33 PM IST
ಬೈಂದೂರು: ದೇಶದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್‌ಎಫ್) ಸೇವೆ ಸಲ್ಲಿಸಲು ಬೈಂದೂರು ಭಾಗದ ಯುವತಿಯೊಬ್ಬರು ಅವಕಾಶ ಪಡೆದಿದ್ದಾರೆ. ಬೈಂದೂರು ತಾಲೂಕಿನ ಯಳಜಿತ್ ಗ್ರಾಮದ ಹುಣ್ಸೆಮಕ್ಕಿ ನಿವಾಸಿ ವಿದ್ಯಾ ಗೌಡ ಪ್ರಸಕ್ತ ಸಾಲಿನಲ್ಲಿ ಸೇನೆಗೆ ಸೇರಿರುವ ಇವರು ಉಡುಪಿ ಜಿಲ್ಲೆಯ ಏಕೈಕ ಅಭ್ಯರ್ಥಿಯಾಗಿದ್ದಾರೆ.
ಎ. 1ರಿಂದ ತರಬೇತಿಗೆ ಹಾಜರಾಗಲಿದ್ದಾರೆ. ಇವರು ಕಾಲೇಜು ದಿನಗಳಲ್ಲಿ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಉತ್ತಮ ಸಾಧನೆಗೈದಿದ್ದಾರೆ. ವಿವಿಧ ವಿಭಾಗಗಳಲ್ಲಿ ಚಾಂಪಿಯನ್ ಕೂಡ ಆಗಿದ್ದಾರೆ. ನೆಟ್‌ಬಾಲ್‌ನಲ್ಲಿ ಐದು ಬಾರಿ ರಾಜ್ಯಮಟ್ಟ, ಒಂದು ಬಾರಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಭಾವುಕ ವಿದಾಯ: 132 ವರ್ಷಗಳ ಕಾಲ ಸುದೀರ್ಘ ಸೇವೆ ನೀಡಿ ಇತಿಹಾಸದ ಪುಟ ಸೇರಿದ ಮಿಲಿಟರಿ ಡೈರಿ
ಆ್ಯತ್ಲೆಟಿಕ್ಸ್‌ನಲ್ಲಿ 6 ಬಾರಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ. ಪೋಲ್ ವಾಲ್ಟ್ ನಲ್ಲಿ ಕಂಚಿನ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ, ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ ಕ್ರೀಡಾ ಇಲಾಖೆ ನೀಡುವ ಚೈತ್ರದ ಚಿಗುರು ರಾಜ್ಯ ಪ್ರಶಸ್ತಿ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.