ಬೈಂದೂರು ಶಾಸಕರಿಂದ ವಿವಿಧ ಕಿಂಡಿ ಅಣೆಕಟ್ಟು ಕಾಮಗಾರಿ ವೀಕ್ಷಣೆ
Team Udayavani, Jul 14, 2019, 5:28 AM IST
ಕೊಲ್ಲೂರು: ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಶನಿವಾರ ಜಡ್ಕಲ್ ಕಿಂಡಿ ಅಣೆಕಟ್ಟು, ಮುದೂರು ಸಮೀಪದ ಕಿಂಡಿ ಅಣೆಕಟ್ಟು, ಕೊಲ್ಲೂರಿನ ಕಿಂಡಿ ಅಣೆಕಟ್ಟು, ಬಿಜೂರಿನ ಕಿಂಡಿ ಅಣೆಕಟ್ಟು ನಿರ್ಮಾಣ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು.
ಜಡ್ಕಲ್ ಗ್ರಾಮದ ಕಾನಕಿ ಎಂಬಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಮಂಜೂರಾದ 4.40 ಕೋ. ರೂ. ವೆಚ್ಚದ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು ರೈತರ ಕೃಷಿಗೆ ಅನುಕೂಲದೊಂದಿಗೆ ಸೇತೆವೆಯಿಂದ ಜನರಿಗೆ ಪ್ರಯೋಜನವಾಗಲಿದೆ. ಮುಂದಿನ ದಿನಗಳಲ್ಲಿ ಸಂಪರ್ಕ ರಸ್ತೆಗೆ ಅನುದಾನ ನೀಡಿ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಮಾಡಲಾಗುವುದು. ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಸ್ಥಳೀಯ ಜಿ.ಪಂ. ಸದಸ್ಯ ಶಂಕರ ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷ ಅನಂತ್ ಮೂರ್ತಿ ಭಟ್, ಗ್ರಾ.ಪಂ. ಸದಸ್ಯ ನಾರಾಯಣ ಶೆಟ್ಟಿ, ನಾರಾಯಣ ಶೆಟ್ಟಿ ಹೊಸೂರು, ತಂಗಪ್ಪನ್, ಶ್ರೀನಿವಾಸ ಆಚಾರ್, ನಾಗರಾಜ ಶೆಟ್ಟಿ ನಾರ್ಕಳಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.