ಬ್ರೋಕರ್‌ಗಳ ಹಾವಳಿಗೆ ಗ್ರಾಮಸ್ಥರ ಆಕ್ರೋಶ

Team Udayavani, Aug 23, 2017, 7:40 AM IST

ber]sad.jpg

ಕೋಟೇಶ್ವರ: ಕುಂದಾಪುರ ತಾಲೂಕು ಕಚೇರಿಯಲ್ಲಿ ಗೋಪಾಡಿ ಗ್ರಾ.ಪಂ. ನ  19 ನಿವಾಸಿಗಳಿಗೆ 94-ಸಿ ಅಡಿ ಹಕ್ಕುಪತ್ರ ನೀಡಲಾಗಿದ್ದರೂ ಈವರೆಗೆ ಆರ್‌ಟಿಸಿ ಲಭಿಸದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿ ತಾಲೂಕು ಕಚೇರಿಯಲ್ಲಿ ಬ್ರೋಕರ್‌ಗಳ ಹಾವಳಿಯಿಂದಾಗಿ ಜನಸಾಮಾನ್ಯರು ಬವಣಿಸುವಂತಾಗಿದೆ ಎಂಬ ಆರೋಪವು ಕೇಳಿಬಂತು.

ಆರ್‌ಟಿಸಿ ವಿಳಂಬ
ಇಲ್ಲಿನ ನಿವಾಸಿ ರಾಜು ಬೆಟ್ಟಿನ್‌ ಅವರು ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವಿಸಿ ತಾಲೂಕು ಕಚೇರಿಯಲ್ಲಿ ಬ್ರೋಕರ್‌ಗಳ ಹಾವಳಿ ಹೆಚ್ಚುತ್ತಿದ್ದು ದೆ„ನಂದಿನ ಕಡತಗಳ ವಿಲೇವಾರಿಗೆ ಅವರ ಮಾತಿಗೆ ಹೆಚ್ಚಿನ ಬೆಲೆ ನೀಡುತ್ತಿರುವುದು ಸಾಮಾನ್ಯ ಜನರಿಗೆ ಆರ್‌ಟಿಸಿ ದೊರಕುವುದರಲ್ಲಿ ವಿಳಂಬವಾಗುತ್ತದೆ ಎಂದರಲ್ಲದೇ ಗೋಪಾಡಿ ಗ್ರಾ.ಪಂ.ನ ಗ್ರಾಮಲೆಕ್ಕಿಗ ಡೇನಿಯಲ್‌ ಅವರನ್ನು ತರಾಟೆಗೆ ತೆಗೆದುಕೊಂಡಾಗ ಹಕ್ಕುಪತ್ರ ನೀಡಲಾಗಿದ್ದರೂ ಆರ್‌ಟಿಸಿ ದೊರೆಯದ ಬಗ್ಗೆ ಈಗಾಗಲೇ ಇಲಾಖೆಯ ಸಂಬಂಧಪಟ್ಟ ಅದಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಈ ಭಾಗದ ಜನರ ತೊಂದರೆಯನ್ನು ಪತ್ರ ಮುಖೇನ ತಾಲೂಕು ಕಚೇರಿಯ ಗಮನಕ್ಕೆ ತರಲಾಗಿದೆ ಎಂದರು. 

ವಿದ್ಯುತ್‌ ಕಣ್ಣುಮುಚ್ಚಾಲೆ
ಗೋಪಾಡಿ, ಮೂಡುಗೋಪಾಡಿ ಪರಿಸರದಲ್ಲಿ ಪದೇ ಪದೇ ವಿದ್ಯುತ್‌ ಕಣ್ಣುಮುಚ್ಚಾಲೆ ಆಗುತ್ತಿರುವ ಬಗ್ಗೆ ಮೆಸ್ಕಾಂ ಅದಿಕಾರಿಗಳ ಗಮನಕ್ಕೆ ತಂದಾಗ ಮೆಸ್ಕಾಂ ಎಸ್‌ಒ ಸುರೇಶ್‌ ಬಾಬು ಅವರು ಮಾತನಾಡಿ ತಾಂತ್ರಿಕ ಕಾರಣಗಳಿಂದ ಕೆಲವೊಂದು ಸಂದರ್ಭಗಳಲ್ಲಿ ವಿದ್ಯುತ್‌ ಬಳಕೆದಾರರಿಗೆ ಕಿರಿಕಿರಿ ಉಂಟಾಗುತ್ತಿರುವುದು ಸಹಜ. ಇದಕ್ಕೊಂದು ಪರಿಹಾರ ಕಂಡುಕೊಳ್ಳುವಲ್ಲಿ ಇಲಾಖೆ ಬದ್ಧವಾಗಿದೆ ಎಂದರು. ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾದಿಕಾರಿ ಹಾಗೂ ಗೋಪಾಡಿ ಗ್ರಾ.ಪಂ. ನ ನೊಡೆಲ್‌ ಅದಿಕಾರಿ ಆಗಿರುವ ತುಳಸಿ ಅವರು ಮತನಾಡಿ ಕಂಡಕಂಡಲ್ಲಿ ಅರಣ್ಯ ನಾಶವಾಗುತ್ತಿರುವುದರಿಂದ ಮಳೆಗಾಲದಲ್ಲಿ ನೀರಿನ ಕೊರತೆ ಕಂಡುಬರುತ್ತಿದೆ. ನೀರಿನ ಕೊರತೆಯನ್ನು ನಿಭಾಯಿಸುವಲ್ಲಿ ಗಿಡ ಮರಗಳನ್ನು ಬೆಳೆಸುವುದರಲ್ಲಿ ಪ್ರತಿಯೋರ್ವ ಗ್ರಾಮವಾಸಿಯು ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಬೇಕೆಂದರು.

ಪ್ಲಾಸ್ಟಿಕ್‌ ಮುಕ್ತ ಗ್ರಾ.ಪಂ. 
ಗೋಪಾಡಿ ಗ್ರಾಮವನ್ನು ಸಂಪೂರ್ಣ ವಾಗಿ ಪ್ಲಾಸ್ಟಿಕ್‌ ಮುಕ್ತಗೊಳಿಸುವ ಬಗ್ಗೆ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಆ ಬಗ್ಗೆ ಗ್ರಾಮಸ್ಥರು ಕೈಜೋಡಿಸಬೇಕೆಂದು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಪುತ್ರನ್‌ ಮನವಿ ಮಾಡಿದರು.

ಸ್ವತ್ಛತಾ ಕಾರ್ಯಕ್ರಮದಡಿ ಘನ, ದ್ರವ್ಯ ತ್ಯಾಜ್ಯಗಳನ್ನು ಸಂಪನ್ಮೂಲವಾಗಿ ಬಳಸುವ ಎಸ್‌.ಎಲ್‌.ಎಂ.ಆರ್‌. ಯೋಜನೆಯ ಕರಪತ್ರವನ್ನು ಇದೇ ಸಂದರ್ಭ ಬಿಡುಗಡೆ ಗೊಳಿಸಲಾಯಿತು. 

ಈ ಯೋಜನೆಯಲ್ಲಿ ತರಬೇತಿ ಪಡೆದ ತಾ.ಪಂ. ಸದಸ್ಯೆ ಲೆ„ಲೆಟ್‌ ಬೆರೆಟ್ಟೋ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೇವಾನಿರತೆ ಸುಮಂಗಲ, ವಿಜಯಲಕ್ಷ್ಮೀ ಅವರ ನೇತƒತ್ವದಲ್ಲಿ ಗ್ರಾಮದ ಪ್ರತಿ ಮನೆಗಳಿಗೆ ಭೇಟಿ ನೀಡಿ ಸರ್ವೇ ನಡೆಸಿ ಆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸುವುದರೊಡನೆ ಅಕ್ಟೋಬರ್‌ ತಿಂಗಳೊಳಗಡೆ ಸ್ವತ್ಛ ಗ್ರಾಮಪಂಚಾಯತ್‌ ಆಗಿ ಗೋಪಾಡಿ ಗ್ರಾ.ಪಂ. ನ್ನು ರೂಪಿಸುವ ಬಗ್ಗೆ ತೀರ್ಮಾನ  ಕೈಗೊಳ್ಳಲಾಯಿತು.
ಸಭಾಧ್ಯಕ್ಷತೆಯನ್ನು ಗೋಪಾಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಪುತ್ರನ್‌ ವಹಿಸಿದ್ದರು. 

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್‌ ಸದಸ್ಯೆ ಶ್ರೀಲತಾ ಶೆಟ್ಟಿ, ತಾಲೂಕು ಪಂಚಾಯತ್‌ ಸದಸ್ಯೆ ವೈಲೆಟ್‌ ಬೆರೆಟ್ಟೋ , ಅರಣ್ಯಾಧಿಕಾರಿ ತುಳಸಿ, ಆರೋಗ್ಯಾದಿಕಾರಿ ಡಾ| ಶೋಭಾ ಅಲ್ಲದೇ ವಿವಿಧ ಇಲಾಖೆಯ ಅದಿಕಾರಿಗಳು, ಗೋಪಾಡಿ ಗ್ರಾ.ಪಂ. ಸರ್ವ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗಣೇಶ್‌ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.