ಟೋಲ್ ಗೇಟ್ ವಿರಹಿತಗೊಳಿಸುವವರೆಗೆ ವಿರಮಿಸೆವು: ವಿನಯ ಕುಮಾರ್ ಸೊರಕೆ
ಸರಕಾರಕ್ಕೆ ಹೋರಾಟ ಇನ್ನಷ್ಟು ತೀವ್ರಗೊಳಿಸುವ ಎಚ್ಚರ ನೀಡಿದ ಪ್ರತಿಭಟನಾಕಾರರು
Team Udayavani, Nov 12, 2022, 6:20 PM IST
ಕಾಪು : ಅಕ್ರಮ, ಅವೈಜ್ಞಾನಿಕ ಮತ್ತು ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಟೋಲ್ ಸಂಗ್ರಹಣಾ ಕೇಂದ್ರವನ್ನು ವಿರಹಿತಗೊಳಿಸುವವರೆಗೆ ವಿರಮಿಸಲಾರೆವು. ಈ ನಿಟ್ಟಿನಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರ ಗೊಳಿಸಲಾಗುವುದೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಇತರ ಸಮಾನ ಮನಸ್ಕ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಶನಿವಾರ ಕಾಪು ಪೇಟೆಯಲ್ಲಿ ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವ ನಿಟ್ಟಿನಲ್ಲಿ ಟೋಲ್ ವಿರೋಧಿ ಹೋರಾಟ ಸಮಿತಿಯ ನಿರ್ಣಯದಂತೆ ಉಭಯ ಜಿಲ್ಲೆಗಳ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿರುವ ಧರಣಿ ಕಾರ್ಯಕ್ರಮದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಏಳು ವರ್ಷಗಳ ಹಿಂದೆ ಸುರತ್ಕಲ್ ನಲ್ಲಿ ಟೋಲ್ ಗೇಟ್ ನಿರ್ಮಾಣ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಹೆಜಮಾಡಿ ಟೋಲ್ ಗೇಟ್ ಪ್ರಾರಂಭವಾದರೆ ಇದನ್ನು ಮುಚ್ಚುತ್ತೇವೆ ಎಂದು ಹೇಳಿ ಇದೀಗ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಟೋಲ್ ಗೇಟ್ ಮೂಲಕ ಉಭಯ ಜಿಲ್ಲೆಯ ಸಂಸದರು ಮತ್ತು ಶಾಸಕರು ತಮ್ಮ ಖಜಾನೆ ತುಂಬಿಸಿಕೊಳ್ಳುತ್ತಿದ್ದಾರೆ.
ಉಡುಪಿ – ಮಂಗಳೂರು ನಡುವೆ ಸಂಚರಿಸುವ ಉಡುಪಿಯ ಜನರು ಎರಡು ಕಡೆ ಟೋಲ್ ಪಾವತಿಸಬೇಕಾಗಿರುವುದು ಖಂಡನೀಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ತಾಗಿಕೊಂಡಿರುವ ಕಾಪು ಕ್ಷೇತ್ರದ ಜನತೆಯ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಶೇಖರ್ ಹೆಜಮಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ನಾಗೇಶ್ ಉದ್ಯಾವರ, ಎಂ.ಪಿ.ಮೊಯಿದಿನಬ್ಬ, ಜಿತೇಂದ್ರ ಫುರ್ಟಾಡೋ, ವಿಲ್ಸನ್ ರಾಡ್ರಿಗಸ್, ಗೀತಾ ವಾಗ್ಲೆ, ಸಂತೋಷ್ ಶೆಟ್ಟಿ ಕೊಡಿಬೆಟ್ಟು ಮತ್ತಿತರರು ಧರಣಿಯನ್ನುದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ : ಬೈಂದೂರು ವಿಧಾನ ಸಭಾ ಕ್ಷೇತ್ರ ಅಭಿವೃದ್ಧಿಯ ಹರಿಕಾರ; ಬೈಂದೂರಿನ ಕನಸು ಸಾಕಾರ
ಪಕ್ಷದ ಮುಖಂಡರಾದ ಶಾಂತಲತಾ ಶೆಟ್ಟಿ, ಪ್ರಭಾ ಬಿ.ಶೆಟ್ಟಿ, ಮೊಹಮ್ಮದ್ ಸಾದಿಕ್, ವಿನಯ್ ಬಲ್ಲಾಳ್, ವೈ. ಸುಕುಮಾರ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ರಮೀಜ್ ಹುಸೈನ್, ಶರ್ಪುದ್ದೀನ್ ಶೇಖ್, ಆಶ್ವಿನಿ ಬಂಗೇರ, ಫರ್ಜಾನ ಸಂಜಯ್, ಶೋಭಾ ಬಂಗೇರ, ರಾಧಿಕಾ ಸುವರ್ಣ, ವಿದ್ಯಾಲತಾ, ಸತೀಶ್ಚಂದ್ರ ಮೂಳೂರು, ಮೊಹಮ್ಮದ್ ಆಸಿಫ್, ವೈ.ಸುಧೀರ್, ಮಹೇಶ್ ಶೆಟ್ಟಿ ಕುರ್ಕಾಲು, ಇಂದಿರಾ ಆಚಾರ್ಯ, ಜ್ಯೋತಿ ಗಣೇಶ್ ಉಚ್ಚಿಲ, ಕಿಶೋರ್ ಅಂಬಾಡಿ, ರತನ್ ಶೆಟ್ಟಿ, ಗ್ರೇಸಿ ಕಾರ್ಡೋಜ, ರಹಿಮಾನ್ ಕಣ್ಣಂಗಾರ್, ವಿಲ್ಸನ್ ರಾಡ್ರಿಗಸ್, ನವೀನ್ ಎನ್. ಶೆಟ್ಟಿ, ಸುನಿಲ್ ಡಿ.ಬಂಗೇರ, ಕೆ.ಎಚ್. ಉಸ್ಮಾನ್, ರಾಜೇಶ್ ಕುಲಾಲ್, ರೋಹನ್ ಕುತ್ಯಾರ್, ಸುಭಾಸ್ ಹೆಜಮಾಡಿ, ಮಧ್ವರಾಜ್ ಬಂಗೇರ, ರಾಜೇಶ್ ಮೆಂಡನ್, ಲವ ಕರ್ಕೇರ, ಹರೀಶ್ ನಾಯಕ್, ಇಮ್ರಾನ್ ಮಜೂರ್, ಗೋಪಾಲ ಪೂಜಾರಿ ಫಲಿಮಾರು, ರಾಜೇಶ್ ಶೆಟ್ಟಿ ಪಾಂಗಳ, ಆಶಾ ಕಟಪಾಡಿ, ಅರುಣಾ ಕುಮಾರಿ, ಬಾಲಚಂದ್ರ ಎರ್ಮಾಳ್, ಕಿಶೋರ್ ಎರ್ಮಾಳ್, ಮೆಲ್ವಿನ್ ಡಿಸೋಜ, ಶ್ರೀಕರ್ ಅಂಚನ್, ಸುಧೀರ್ ಕರ್ಕೇರ, ಕರುಣಾಕರ್ ಪಡುಬಿದ್ರಿ, ಕೇಶವ್ ಸಾಲ್ಯಾನ್, ನಯೀಮ್ ಕಟಪಾಡಿ, ಮುಬೀನಾ, ರೀನಾ ಡಿ ಸೋಜ, ದೀಪ್ತಿ ಮನೋಜ್, ನಾಗಭೂಷಣ್ ಮಜೂರು , ಪ್ರಶಾಂತ್ ಕುಮಾರ್ ಹಿರಿಯಡಕ ಮತ್ತು ವಿವಿಧ ಮುಂಚೂಣಿ ಘಟಕ/ಸಮಿತಿಗಳ ಪದಾಧಿಕಾರಿಗಳು, ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಹೋರಾಟ ಸಮಿತಿಯ ಸಹ-ಸಂಚಾಲಕ ಶೇಖರ್ ಹೆಜಮಾಡಿ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಕಾಪು ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.