Vishwakarma Jayanti; ಉಭಯ ಜಿಲ್ಲೆಗಳಲ್ಲಿ ವಿಶ್ವಕರ್ಮ ಜಯಂತಿ ಉದ್ಘಾಟನೆ


Team Udayavani, Sep 17, 2023, 11:41 PM IST

Vishwakarma Jayanti; ಉಭಯ ಜಿಲ್ಲೆಗಳಲ್ಲಿ ವಿಶ್ವಕರ್ಮ ಜಯಂತಿ ಉದ್ಘಾಟನೆ

ಸಂಘಟನೆಯಿಂದ ಒಗ್ಗಟ್ಟು :ಜಯಪ್ರಕಾಶ್‌ ಹೆಗ್ಡೆ
ಉಡುಪಿ: ಸಂಘಟನೆಯಿಂದ ನಮ್ಮ ಒಗ್ಗಟ್ಟು ಪ್ರದರ್ಶಿಸುವುದರೊಂದಿಗೆ ಬೇಡಿಕೆಗಳನ್ನು ವ್ಯಕ್ತಪಡಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿಶ್ವಕರ್ಮ ಸಮಾಜದವರು ಒಂದಾಗಬೇಕು. ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ತಿಳಿಸಿದರು.

ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೇತೃತ್ವದಲ್ಲಿ ರವಿವಾರ ನಡೆದ ದೇವಶಿಲ್ಪಿ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕ ಯಶ್‌ಪಾಲ್‌ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿದರು.

ಸಾಧಕರಿಗೆ ಸಮ್ಮಾನ
ಕಬ್ಬಿಣದ ಶಿಲ್ಪಿ ಕೃಷ್ಣಯ್ಯ ಆಚಾರ್ಯ, ಕಾಷ್ಠಶಿಲ್ಪಿ ರಂಜಾಳ ಸೀತಾರಾಮ ಆಚಾರ್ಯ, ಕಂಚು ಶಿಲ್ಪಿ ಬಿಳಿಯಾರು ವಿಟಲ ಆಚಾರ್ಯ, ಶಿಲಾ ಶಿಲ್ಪಿ ರಾಮಕೃಷ್ಣ ಆಚಾರ್ಯ ಹಾಗೂ ಸುವರ್ಣ ಶಿಲ್ಪಿ ಕೃಷ್ಣ ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು.

ವಿದ್ವಾನ್‌ ಚಂದ್ರಕಾಂತ ಪುರೋಹಿತ್‌ ಉಪನ್ಯಾಸ ನೀಡಿದರು. ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ವೆಂಕಟೇಶ ಆಚಾರ್ಯ, ದ.ಕ. ಮತ್ತು ಉಡುಪಿ ಜಿಲ್ಲೆ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಹರೀಶ್‌ ಆಚಾರ್ಯ, ಕೋಶಾಧಿಕಾರಿ ದಿವಾಕರ ಆಚಾರ್ಯ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಬಿ.ಎ. ಆಚಾರ್ಯ ಮಣಿಪಾಲ ನಿರ್ವಹಿಸಿದರು.

ದ.ಕ.ದಲ್ಲೂ ವಿಶ್ವಕರ್ಮ ಜಯಂತಿ ಆಚರಣೆ
ಮಂಗಳೂರು: ದ.ಕ. ಜಿಲ್ಲಾಡಳಿತ, ಜಿ. ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ರವಿವಾರ ಮಂಗಳೂರಿನಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಕೇಂದ್ರದ ಮೀನುಗಾರಿಕೆ ಸಚಿವ ಪರಷೋತ್ತಮ್‌ ರೂಪಾಲಾ ಉದ್ಘಾಟಿಸಿದರು.

ವಿಶ್ವಕರ್ಮ ಸಮುದಾಯವನ್ನು ಮೊದಲಬಾರಿಗೆ ಕೇಂದ್ರ ಸರಕಾರದೊಂದಿಗೆ ಜೋಡಿಸುವ “ಪಿಎಂ ವಿಶ್ವಕರ್ಮ’ ಯೋಜನೆಗೆ ಪ್ರಧಾನಿಮೋದಿಯವರು ವಿಶ್ವಕರ್ಮ ಜಯಂತಿಯಂದೇ ಚಾಲನೆ ನೀಡುತ್ತಿದ್ದಾರೆ. ಮಂಗಳೂರಿ
ನಲ್ಲಿ ಈ ಯೋಜನೆ ಉದ್ಘಾಟಿಸುವ ಮೊದಲು ವಿಶ್ವಕರ್ಮ ಜಯಂತಿಯಲ್ಲಿ ಪಾಲ್ಗೊಳ್ಳುವ ಮೂಲಕ ದೇವರ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದಂತಾಗಿದೆ ಎಂದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಮೇಯರ್‌ ಸುಧೀರ್‌ ಶೆಟ್ಟಿ, ಕಾರ್ಪೋರೆಟರ್‌ ಸಂಧ್ಯಾ ಮೋಹನ್‌, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್‌ ಜಿ. ಮುಂತಾದವರು ಉಪಸ್ಥಿತರಿದ್ದರು. ಜಿ. ಯಶವಂತ ಆಚಾರ್ಯ ಶ್ರೀ ವಿಶ್ವಕರ್ಮ ಜಯಂತಿ ಸಂದೇಶ ನೀಡಿದರು. ಸುಜೀರ್‌ ವಿನೋದ್‌ ಸ್ವಾಗತಿಸಿ ನಿರೂಪಿಸಿದರು. ಜಗದೀಶ್‌ ಸಿದ್ದಕಟ್ಟೆ ವಂದಿಸಿದರು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.