ಕಡಲ್ಕೊರೆತ ಪ್ರದೇಶಕ್ಕೆ ಶಾಸಕ, ತಹಶೀಲ್ದಾರ್ ಭೇಟಿ
Team Udayavani, Jun 15, 2019, 5:57 AM IST
ಕೋಟ: ಮಣೂರು-ಪಡುಕರೆ ಕಡಲಕಿನಾರೆಯ ಲಿಲ್ಲಿ ತೋಟದಲ್ಲಿ ಕಡಲ್ಕೊರೆತ ಸಮಸ್ಯೆ ತೀವ್ರಗೊಂಡಿದ್ದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಡಯಾಸ್ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕರಿಂದ ಪರಿಶೀಲನೆ
ಸಮಸ್ಯೆಯ ಕುರಿತು ಸ್ಥಳೀಯ ಗ್ರಾ.ಪಂ. ಸದಸ್ಯ ಭುಜಂಗ ಗುರಿಕಾರ ಅವರು ಶಾಸಕರ ಗಮನಕ್ಕೆ ತಂದಿದ್ದು, ಅದರಂತೆ ಶಾಸಕರು ಜೂ.12ರಂದು ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಅನಂತರ ಜೂ.13ರಂದು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರು, ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಸಮಸ್ಯೆ ಕುರಿತು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಕ್ರಮಕೈಗೊಳ್ಳುವುದಾಗಿ ಈ ಸಂದರ್ಭ ಭರವಸೆ ನೀಡಿದರು.
ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಬೋರಯ್ಯ, ಕೋಟ ನಾಡ ಕಚೇರಿಯ ಉಪತಹಶೀಲ್ದಾರ್ ಚಂದ್ರಹಾಸ್ ಬಂಗೇರ, ಗ್ರಾಮಲೆಕ್ಕಿಗ ಚೆಲುವರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.