ಮತದಾನ ಜಾಗೃತಿ ವೇಳಾಪಟ್ಟಿ: ಸಿಇಒ ಸೂಚನೆ

Team Udayavani, Mar 14, 2019, 1:00 AM IST

rupesh.jpg

ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಎಲ್ಲ ಇಲಾಖೆಯವರು ತಾವು ಮುಂದಿನ ದಿನಗಳಲ್ಲಿ ನಡೆಸುವ ಕಾರ್ಯಕ್ರಮದ ವೇಳಾಪಟ್ಟಿ ತಯಾರಿಸಿ ಗುರುವಾರ ಸ್ವೀಪ್‌ ಸಮಿತಿಗೆ ನೀಡುವಂತೆ ಜಿ.ಪಂ. ಸಿಇಒ, ಜಿಲ್ಲಾ ಸ್ವೀಪ್‌ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್‌ ಹೇಳಿದರು.
ಅವರು ಬುಧವಾರ ಜಿ.ಪಂ.ನಲ್ಲಿ ಸ್ವೀಪ್‌ ಸಮಿತಿಯ ವತಿಯಿಂದ ಕೈಗೊಳ್ಳಬೇಕಾದ ಮತದಾನ ಜಾಗೃತಿ ಕಾರ್ಯಕ್ರಮ ಕುರಿತ ಸಭೆಯಲ್ಲಿ ಮಾತನಾಡಿದರು.

ಮತದಾನದ ಜಾಗೃತಿ ನೀಡುವ ಸಲುವಾಗಿ ಎಲ್ಲ ಇಲಾಖೆಗಳು ಕಾರ್ಯಪ್ರವೃತ್ತರಾಗಬೇಕಿದ್ದು, ಇಲಾಖೆಯ ಅಧಿಕಾರಿಗಳು ನಡೆಸಬೇಕೆಂದಿರುವ ಕಾರ್ಯಕ್ರಮಗಳ ಯೋಜನೆಯನ್ನು ಹಾಕಿಕೊಳ್ಳುವಂತೆ ಸೂಚನೆ ನೀಡಿದರು.
ಯಾವುದೇ ಕಾರ್ಯಕ್ರಮ ನಡೆಸುವಾಗ ನೀತಿ ಸಂಹಿತೆಯ ಚೌಕಟ್ಟಿನಲ್ಲೇ ನಡೆಸಬೇಕು ಹಾಗೂ ರ್ಯಾಲಿ ಮುಂತಾದ ಕಾರ್ಯಕ್ರಮಗಳನ್ನು ನಡೆಸುವಾಗ ಪಕ್ಷವನ್ನು ಸೂಚಿಸುವ ಚಿಹ್ನೆ ಅಥವಾ ಸ್ಟಿಕ್ಕರ್‌ ಮುಚ್ಚುವಂತೆ ನೆಹರೂ ಯುವ ಕೇಂದ್ರದ ಜಿಲ್ಲಾ ಕೋ-ಆರ್ಡಿನೇಟರ್‌ಗೆ ಸೂಚಿಸಿದರು.

 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಿದ್ದು, ಅವರಿಗೆ ಮತದಾನದ ಕುರಿತು ಜಾಗೃತಿ ಅಗತ್ಯವಾಗಿದೆ. ಆದರೆ ಪ್ರಸ್ತುತ ಪರೀಕ್ಷೆ ನಡೆಯುತ್ತಿರುವ ಕಾರಣ ಅಸಾಧ್ಯ. ವಿದ್ಯಾರ್ಥಿಗಳಿಗೆ ವಾಟ್ಸ್‌ಆ್ಯಪ್‌ ಮೂಲಕ ಮಾಹಿತಿ ನೀಡುವುದು, ವಿದ್ಯಾರ್ಥಿಗಳ ಪೋಷಕರಿಗೆ ಅರಿವು ಕಾರ್ಯಕ್ರಮ, ಇವಿಎಂ ಮತ ಯಂತ್ರದ ಕುರಿತು ಮಾಹಿತಿ ಪ್ರಾತ್ಯಕ್ಷಿಕೆ ನಡೆಸಬಹುದು ಎಂದು ಪದವಿಪೂರ್ವ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. 

ಮೀನುಗಾರ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಬೇಕು ಹಾಗೂ ಮತದಾನದ ದಿನವನ್ನು ತಿಳಿಸಬೇಕು. ಮೀನುಗಾರಿಕೆಗೆ ತೆರಳುವವರು ಹಿಂದಿರುಗಲು 10ರಿಂದ 15 ದಿನಗಳಾಗುತ್ತವೆ. ಆದ ಕಾರಣ ಮತದಾನದ ದಿನಾಂಕವನ್ನು ತಿಳಿಸಿ ಆ ದಿನದಂದು ಮತ ಚಲಾಯಿಸಲು ಪ್ರೇರೇಪಿಸಬೇಕು ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾಕರಿಗೆ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಿ, ಮತದಾನದ ಪ್ರತಿಜ್ಞಾ ವಿಧಿ ಬೋಧಿಸಬೇಕು ಹಾಗೂ ಸಖೀ ಬೂತ್‌ಗಳ ಪರಿಶೀಲನೆ ನಡೆಸಿ ಸಜ್ಜುಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.