ಮತದಾನ “ಶುದ್ಧೀಕರಣ’ಕ್ಕಿಳಿದ ವಿದ್ಯಾರ್ಥಿನಿಯರು

Team Udayavani, Mar 26, 2018, 7:15 AM IST

Voting-udupi.jpg

ಉಡುಪಿ: ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವುದು ಸುಲಭದ ಮಾತೇನಲ್ಲ. ಒಂದು ವೇಳೆ ಮತದಾರ ಹಣ, ಆಮಿಷಗಳಿಂದ ದೂರ ಇರುವ ನಿರ್ಧಾರ ಮಾಡಿದರೂ ರಾಜಕೀಯ ಮಂದಿ ಮತ್ತೆ ಮತ್ತೆ ಅತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚು. ಇಂತಹ ವ್ಯವಸ್ಥೆಯನ್ನು ಒಂದಿಷ್ಟಾದರೂ ಶುದ್ಧ ಮಾಡಬೇಕು ಎಂದು ಹೊರಟಿರುವ “ನಮ್ಮ ಭೂಮಿ’ ಸೇವಾ ಸಂಸ್ಥೆಯ ಜತೆಗೆ ಉಡುಪಿಯ ವಿದ್ಯಾರ್ಥಿನಿಯರೂ ಕೂಡ ಕೈಜೋಡಿಸಿ ತಮ್ಮ ಅಳಿಲ ಸೇವೆ ಸಲ್ಲಿಸುತ್ತಿದ್ದಾರೆ.”ನಮ್ಮ ಭೂಮಿ’ ಸಂಸ್ಥೆ ದುಡಿಯುವ ಮಕ್ಕಳಿಗಾಗಿ ಕೆಲಸ ಮಾಡುತ್ತಿರುವ ಜತೆ ಜತೆಗೆ ಗ್ರಾ.ಪಂ.ಹಕ್ಕೊತ್ತಾಯ ಆಂದೋಲನದಲ್ಲಿಯೂ ತೊಡಗಿಸಿಕೊಂಡಿದೆ. ಹಲವು ಚುನಾವಣೆಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿಯೂ ನಿರತವಾಗಿದೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಸಾಂಕೇತಿಕ ಉಪವಾಸ ಮಾಡುವ ಮೂಲಕ ಮತದಾರರನ್ನು ಜಾಗೃತಿಗೊಳಿಸಲು ಪ್ರಯತ್ನಿ ಸಿತ್ತು. ಈ ಬಾರಿ ಸ್ಟಿಕ್ಕರ್‌, ಬ್ಯಾಜ್‌, ಧ್ವಜ, ಬ್ಯಾನರ್‌ಗಳೊಂದಿಗೆ ಕ್ಷೇತ್ರಕ್ಕಿಳಿದಿದೆ. ಇದಕ್ಕೆ ಉಡುಪಿಯ ಎರಡು ಕಾಲೇಜುಗಳ ವಿದ್ಯಾರ್ಥಿನಿಯರು ಸಾಥ್‌ ನೀಡಿದ್ದಾರೆ. ಒಂದು ದಿನ ಉಡುಪಿಯ ಡಾ| ಜಿ. ಶಂಕರ್‌ ಬಾಲಕಿಯರ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮತ್ತೂಂದು ದಿನ ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡರು.

ಮನೆ ಮನೆ, ಅಂಗಡಿಗಳಿಗೆ ತೆರಳಿ ಸ್ಟಿಕ್ಕರ್‌ ಅಂಟಿಸಿದ್ದು ಮಾತ್ರವಲ್ಲ, ರಸ್ತೆಯಲ್ಲಿ ಕೈ ಅಡ್ಡ ಹಿಡಿದು ವಾಹನಗಳನ್ನು ನಿಲ್ಲಿಸಿ ಅದರ ಚಾಲಕರಿಗೂ ನೀಡಿದರು. “ನಾವು ಮತ್ತು ನಮ್ಮ ಮತ ಮಾರಾಟಕ್ಕಿಲ್ಲ’ ಎಂಬ ಘೋಷವಾಕ್ಯ ಮತ್ತು ಕಾಟೂìನ್‌ ಈ ಸ್ಟಿಕ್ಕರ್‌ನಲ್ಲಿದೆ.  ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಿದ್ಯಾರ್ಥಿಗಳ ಉತ್ಸಾಹ ಕಂಡ ಅನೇಕ ಮಂದಿ ವಾಹನ ಚಾಲಕರು ಬೇಡ ಎನ್ನದೆ ಸ್ಟಿಕ್ಕರ್‌ ಸ್ವೀಕರಿಸಿದರು. ವಲಸೆ ಕಾರ್ಮಿಕರ ಪ್ರದೇಶದಲ್ಲೂ ಜಾಗೃತಿ ಕಾರ್ಯಕ್ರಮ ನಡೆದಿದೆ.

ಇನ್ನೊಂದು ವಿಚಾರವೆಂದರೆ, ಸಾಮಾನ್ಯ ವಾಗಿ ರಾಜಕೀಯ ಪಕ್ಷಗಳು ಬೈಕ್‌ ರ್ಯಾಲಿ ನಡೆಸುತ್ತವೆ. ಆದರೆ “ನಮ್ಮ ಭೂಮಿ’ ಸಂಸ್ಥೆ ಮತದಾರರ ಜಾಗೃತಿಗಾಗಿಯೇ ಬೈಕ್‌ ರ್ಯಾಲಿ ಕೂಡ ನಡೆಸುವ ಯೋಜನೆ ಹಮ್ಮಿಕೊಂಡಿದೆ ಎನ್ನುತ್ತಾರೆ ಸಹಸಂಯೋಜಕ ಚೆನ್ನವೀರಪ್ಪ ಅವರು.ಚುನಾವಣ ಕಣ ರಂಗೇರುತ್ತಿರು ವಂತೆಯೇ ಮತದಾರರ ಜಾಗೃತಿಯೂ ಸಾಗುತ್ತಿದೆ. ಮತದಾರ ಜಾಗೃತನಾಗುವನೆ -ಕಾದುನೋಡಬೇಕಷ್ಟೆ …

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

11

Udupi: ಜಿಲ್ಲಾಧಿಕಾರಿ ಕಚೇರಿಯಲ್ಲೇ ನೆಟ್‌ವರ್ಕ್‌ ಸಮಸ್ಯೆ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.