“ವಿ.ಸಭಾ ಚುನಾವಣೆ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ’
Team Udayavani, Jul 27, 2017, 7:30 AM IST
ಕಾರ್ಕಳ: ಜನರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಜನಪರ ಸಾಧನೆಯ ಅರಿವಾಗುತ್ತಿದೆ. ಆ ನೆಲೆಯಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ಜನತೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಎನ್. ಕೋಟ್ಯಾನ್ ಹೇಳಿದ್ದಾರೆ.ಅವರು ಹಿರ್ಗಾನ ಗ್ರಾ. ಪಂ.ವ್ಯಾಪ್ತಿಯಲ್ಲಿ ಕಾರ್ಯಕರ್ತರಿಗೆ ಆಯೋ ಜಿಸಿದ ಚೆ„ತನ್ಯಧಾರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ರೈತರ ಸಾಲಮನ್ನಾ, ಆಶ್ರಯಮನೆ ಸಾಲ ಮನ್ನಾ, ಶೆ„ಕ್ಷಣಿಕ ಸಾಲ ಮನ್ನಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ, ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಭೆ„ಠಕ್, ನಗರ ಹಾಗೂ ಗ್ರಾಮಾಂತರಗಳಿಗೆ 94ಸಿ ಮತ್ತು 94 ಸಿಸಿ ಮನೆ ನಿವೇಶನ ಹಂಚಿಕೆಗೆ ಮರುಚಾಲನೆಯೇ ಮೊದಲಾದ ಬಿಜೆಪಿಯ ರಾಜಕಾರಣಿಗಳು ಊಹಿಸಲು ಅಸಾಧ್ಯವಾದ ಕಾಂಗ್ರೆಸ್ ಪಕ್ಷದ ಅಗಾಧ ಸಾಧನೆಗಳನ್ನು ಇಲ್ಲಿನ ಕೆಲವು ಕೈಲಾಗದ ಮಂದಿ ತಮ್ಮದೇ ಸಾಧನೆ ಎಂದು ಬಿಂಬಿಸಲು ಹೊರಟಿರುವುದು ವಿಷಾದನೀಯ ಎಂದರು.
ಈ ಬಗ್ಗೆ ಜನರಲ್ಲಿ ಜಾಗƒತಿಯನ್ನು ಮೂಡಿಸುವುದು ಬೂತ್ ಮಟ್ಟದ ಕಾರ್ಯಕರ್ತರ ಆದ್ಯ ಕರ್ತವ್ಯವಾಗಿದ್ದು ಆ ನೆಲೆಯಲ್ಲಿ ಪಕ್ಷವು ಈ ಚೆ„ತನ್ಯಧಾರಾ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದವರು ಹೇಳಿದರು.
ವಕ್ತಾರ ಬಿಪಿನಚಂದ್ರ ಪಾಲ್ ಮಾತನಾಡಿ, ಪಕ್ಷದ ಚೆ„ತನ್ಯಧಾರಾ ಕಾರ್ಯಕ್ರಮ ನಮ್ಮ ಪಕ್ಷದ ವಿಜಯ ಧಾರೆಯಾಗಬೇಕು, ಈ ವಿಜಯ ಮಾಲೆಯನ್ನು ಸಾಧಿಸುವವರೆಗೆ ಕಾರ್ಯ ಕರ್ತರು ಸಿದ್ಧರಾಗಬೇಕು ಎಂದರು.
ಸಭೆಯಲ್ಲಿ ಕ್ಷೇತ್ರದ ಶಾಸಕರು, ಜಿ.ಪಂ.ಸದಸ್ಯರು, ತಾ.ಪ.ಸದಸ್ಯರೂ ಸೇರಿ ಬಿಜೆಪಿ ಜನಪ್ರತಿನಿಧಿಗಳು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್‌ಗಳಿಗೆ ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ನೀತಿಯ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸಿರಿಯಣ್ಣ ಶೆಟ್ಟಿ, ಉಪಾಧ್ಯಕ್ಷೆ ಲೀಲಾವತಿ ನಾಯಕ್, ಹಾಗೂ ಗ್ರಾ.ಪಂ. ಸದಸ್ಯರುಗಳಾದ ಚೇತನ್ ಶೆಟ್ಟಿ, ಜಗದೀಶ ಶೆಟ್ಟಿ ಅಜೆಕಾರು, ಸದಾಶಿವ ದೇವಾಡಿಗ ಉಪಸ್ಥಿತರಿದ್ದರು. ಹಿರ್ಗಾನ ಗ್ರಾ. ಪಂ. ಅಧ್ಯಕ್ಷ ಸಂತೋಷ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ವಾಸು ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.