Waqf property: ಹಿಂದೂ- ಮುಸ್ಲಿಂ ತಳುಕು ಹಾಕುವುದು ಸಲ್ಲದು
Team Udayavani, Nov 2, 2024, 10:19 AM IST
ಉಡುಪಿ: ನಮ್ಮ ಸರಕಾರ ಯಾರನ್ನೂ ಒಕ್ಕಲೆಬ್ಬಿಸದು ಮತ್ತು ಯಾರಿಗೂ ಅನ್ಯಾಯ ಮಾಡದು. ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಇದನ್ನೇ ಕೇಂದ್ರವಾಗಿಸಿಕೊಂಡು ವಕ್ಫ್ ಸೊತ್ತು ರಾಷ್ಟ್ರೀಕರಣ ಮಾಡಬೇಕು ಅಥವಾ ಹಿಂದೂ, ಮುಸ್ಲಿಂ ವಿಚಾರ ತಳುಕು ಹಾಕುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದ ಅವರು, ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ – ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ . ಅದನ್ನು ಹೇಳಿಕೊಂಡೇ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ, ಡಾ| ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು.
ಬಿಯರ್ ದರ ಹೆಚ್ಚಿಸಿ ಮಹಿಳೆ ಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂಬ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರಿಗೆ ಮೊದಲು ಗೌರವ ಕೊಡಬೇಕು. ಆಮೇಲೆ ಬಿಯರ್ ಬಗ್ಗೆ ಮಾತನಾಡಿ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜಿಡಿಪಿ ಜಾಸ್ತಿಯಾಗಿದೆ. ಹಿರಿಯರಾಗಿರುವ ವಿಶ್ವನಾಥ್ ಮೊಸರಿನಲ್ಲಿ ಕಲ್ಲು ಹುಡುಕು ವುದನ್ನು ಬಿಡಲಿ. ಮಹಿಳೆಯರಿಗೆ ಉತ್ತೇಜನ ಕೊಡಲು ಯೋಜನೆ ಮಾಡಿದ್ದೇವೆ. ಈಗ ರಾಜ್ಯದಲ್ಲಿ ಮಹಿಳಾ ಸಬಲೀಕರಣ ನಡೆಯುತ್ತಿದೆ. ಬಸವಣ್ಣನ ನಾಡಿನಲ್ಲಿ ಮಹಿಳೆಯರನ್ನು ಸರಿಸಮನಾಗಿ ಕಾಣಬೇಕು ಎಂದರು.
ಶೀಘ್ರ ಜನತಾ ದರ್ಶನ
ಜಿಲ್ಲೆಯಲ್ಲಿ ಶೀಘ್ರವೇ ಜನತಾ ದರ್ಶನ ಮಾಡಲಿದ್ದೇವೆ. ಹಾಗೆಯೇ ನವೆಂಬರ್ ತಿಂಗಳಲ್ಲಿ ಕೆಡಿಪಿ ಸಭೆ ನಡೆಸಲಿದ್ದೇವೆ. ಜಿಲ್ಲೆಯಲ್ಲಿ ಧರ್ಮ ದಂಗಲ್‌ಗೆ ಅವಕಾಶ ನೀಡುವುದಿಲ್ಲ. ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ ಎಂದು ಸಚಿವರು ತಿಳಿಸಿದರು.
ಪ್ರಧಾನಮಂತ್ರಿಗಳು ಯಾವ ಹಿನ್ನೆಲೆಯಲ್ಲಿ ‘ನಗರ ನಕ್ಸಲರು’ ಎಂಬ ಪದ ಬಳಕೆ ಮಾಡಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಪಕ್ಷಾತೀತವಾಗಿ ನರೇಂದ್ರ ಮೋದಿಯವರು ನಮ್ಮ ಪ್ರಧಾನಿ. ಪ್ರಧಾನಿ ಮೇಲೆ ನಮಗೆ ಗೌರವ ಇದೆ. ಕಾಂಗ್ರೆಸ್ಸನ್ನು ಗುರಿಯಾಗಿಸಿ ಅವರು ನಗರ ನಕಲ್ಸರು ಎಂದಿದ್ದರೆ ಅದು ಅಸಾಂವಿಧಾನಿಕ ಮಾತಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.