ತ್ಯಾಜ್ಯ ನಿರ್ವಹಣೆ; ಮೊದಲಿಗರಾಗೋಣ: ದಿನಕರ ಬಾಬು

Team Udayavani, Jul 8, 2017, 2:15 AM IST

Tyajya-7-7.jpg

ಉಡುಪಿ: ಜಿಲ್ಲೆಯು ಕಳೆದ ವರ್ಷ ರಾಷ್ಟ್ರಮಟ್ಟದಲ್ಲಿ ನಡೆದ ಸಮರ್ಪಕ ತ್ಯಾಜ್ಯ ವಿಲೇವಾರಿ ಕುರಿತ ಸಮೀಕ್ಷೆಯಲ್ಲಿ 7ನೇ ಸ್ಥಾನವನ್ನು ಗಳಿಸಿದ್ದು, ದಕ್ಷಿಣ ಭಾರತದಲ್ಲಿ ಪ್ರಥಮ ಸ್ಥಾನ ಪಡೆದಿತ್ತು, ಈ ಬಾರಿಯ ಸಮೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹಿಂದಿಗಿಂತಲೂ ಉತ್ತಮ ಸ್ಥಾನ ಪಡೆಯಲು ಪ್ರತಿಯೊಬ್ಬರ, ಇಲಾಖೆಗಳ, ಸಂಘ – ಸಂಸ್ಥೆಗಳ ಸಹಕಾರ ಅಗತ್ಯವಿದೆ ಎಂದು  ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಪಿಡಿಒಗಳು, ವೈದ್ಯರು, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಘನ ಮತ್ತು ದ್ರವ ತ್ಯಾಜ್ಯ ನಿರ್ವ ಹಣೆ ಕುರಿತ ಸಮಾಲೋಚನ ಸಭೆ, ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ದಿನನಿತ್ಯದ ಬದುಕಿನಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವುದರ ಮೂಲಕ ತ್ಯಾಜ್ಯ ವಿಲೇವಾರಿ ಸುಲಭವಾಗಲಿದೆ ಎಂದರು. ಹಸಿರು ಶಿಷ್ಟಾಚಾರಗಳ ಭಿತ್ತಿಪತ್ರವನ್ನು ಅವರು ಬಿಡುಗಡೆಗೊಳಿಸಿದರು.

ಪ್ಲಾಸ್ಟಿಕ್‌ ಬಳಕೆ ಬೇಡ
ಎಲ್ಲ ಗ್ರಾ.ಪಂ.ಗಳಲ್ಲಿ ತ್ಯಾಜ್ಯ ವಿಲೇವಾರಿ ಸವಾಲಿನ ಕೆಲಸ ಆಗಿದೆ. ಮನೆಯಲ್ಲಿನ ಕಸವನ್ನು ಪೈಪ್‌ ಕಾಂಪೋಸ್ಟ್‌ ಮೂಲಕ ವಿಲೇವಾರಿ ಮಾಡುವಂತೆ ಹಾಗೂ ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಮೂಲಕ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡಲು ಸಾಧ್ಯವಾಗಲಿದೆ. ಕಸವನ್ನು ಮೂಲದಲ್ಲೇ ವಿಂಗಡಿಸುವುದರಿಂದ ವಿಲೇವಾರಿ ಸುಲಭವಾಗಲಿದೆ ಎಂದು ದಿನಕರ ಬಾಬು ಹೇಳಿದರು.

ಗ್ರಾಮಪಂಚಾಯತ್‌ಗಳಲ್ಲಿ ವಾರದ ಒಂದು ದಿನ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಸಂಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ ಅಧ್ಯಕ್ಷರು, ತಮ್ಮ ಕ್ಷೇತ್ರ ವ್ಯಾಪ್ತಿಯ ಯುವಕ ಮಂಡಲದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧ ಮಾಡಿ, ಸ್ಟೀಲ್‌ ಮತ್ತು ಇತರ ಪರಿಸರ ಸ್ನೇಹಿವಸ್ತುಗಳ ಬಳಕೆಯಿಂದ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸಲಾಗಿತ್ತು. ಇದನ್ನು ಎಲ್ಲ ಸಂಘ – ಸಂಸ್ಥೆಗಳೂ ಅನುಸರಿಸುವಂತೆ ತಿಳಿಸಿದರು. ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಕುರಿತು ಅರಿವು ಮೂಡಿಸುವಂತೆ ತಿಳಿಸಿದರು.

ತ್ಯಾಜ್ಯವಲ್ಲ – ಸಂಪನ್ಮೂಲ
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮಾತನಾಡಿ, ಘನ ಮತ್ತು ದ್ರವ ತ್ಯಾಜ್ಯಗಳು ತ್ಯಾಜ್ಯವಲ್ಲ. ಅದನ್ನು ಸಮರ್ಪಕರೀತಿಯಲ್ಲಿ ಮರು ಬಳಕೆ ಮಾಡಿದರೆ ಅದು ಸಂಪನ್ಮೂಲವಾಗಲಿದೆ. ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ. ತ್ಯಾಜ್ಯ ಎಂಬುದು ಸುಮಾರು 20 ವರ್ಷಗಳಿಂದ ಮಾತ್ರ ಕೇಳಿಬರುತ್ತಿದೆ, ನಮ್ಮ ಪೂರ್ವಜರು ತ್ಯಾಜ್ಯವನ್ನು ಸಮರ್ಪಕವಾಗಿ ಮರುಬಳಕೆ ಮಾಡುತ್ತಿದ್ದುದರಿಂದ ತ್ಯಾಜ್ಯದ ಸಮಸ್ಯೆ ಇಲ್ಲವಾಗಿತ್ತು. ಆದರೆ ನಾವು ಆಧುನಿಕರಾಗಿ ಪ್ಲಾಸ್ಟಿಕ್‌ ಬಳಕೆ ಜಾಸ್ತಿ ಮಾಡುತ್ತಿರುವುದರಿಂದ ತ್ಯಾಜ್ಯ ಸಮಸ್ಯೆ ಉಂಟಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆ ತ್ಯಾಜ್ಯ ನಿರ್ವಹಣೆಗೆ ಸವಾಲಾಗಿದೆ. ಇದರ ನಿವಾರಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕಾರ್ಯ ಕ್ಷೇತ್ರದಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಹಸಿರು ಶಿಷ್ಟಾಚಾರ ಜಾರಿಗೆ ತರುವಂತೆ ತಿಳಿಸಿದರು. ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ನಾಗೇಶ್‌ ರಾಯ್ಕರ್‌ ಉಪಸ್ಥಿತರಿದ್ದರು. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.