ಸರಕಾರದ ಆದೇಶ ಬಾರದಿದ್ದರೂ ಶಾಲೆಗಳಲ್ಲಿ ವಾಟರ್ ಬೆಲ್ ಅನುಷ್ಠಾನ
Team Udayavani, Dec 12, 2019, 5:32 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ 15 ದಿನಗಳೊಳಗೆ ವಾಟರ್ ಬೆಲ್ ಕಾರ್ಯಕ್ರಮ ಜಾರಿಗೊಳಿಸುವುದಾಗಿ ಹೇಳಿದ್ದ ಸರಕಾರ ತಿಂಗಳಾದರೂ ಆದೇಶ ಹೊರಡಿಸಿಲ್ಲ. ಆದರೆ ಮಕ್ಕಳ ಆರೋಗ್ಯವನ್ನು ಗಮನ ದಲ್ಲಿಟ್ಟು ದ.ಕ. ಜಿಲ್ಲೆಯ ಬಹುತೇಕ ಶಾಲೆ ಗಳಲ್ಲಿ ಸ್ವಯಂ ಸ್ಫೂರ್ತಿಯಿಂದ ಇದನ್ನು ಪಾಲಿಸಲಾಗುತ್ತಿದೆ.
ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲೆಂದೇ ದಿನಕ್ಕೆ ಮೂರು ಬಾರಿ ಗಂಟೆ ಬಾರಿಸುವ ಬಗ್ಗೆ ವ್ಯಕ್ತಿಯೋರ್ವರು ಟ್ವಿಟರ್‌ನಲ್ಲಿ ಬರೆದುಕೊಂಡದ್ದನ್ನು ಗಮನಿಸಿದ್ದ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್, ರಾಜ್ಯದ ಶಾಲೆಗಳಲ್ಲಿಯೂ ಮುಂದಿನ 15 ದಿನಗಳೊಳಗೆ ಇದನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದರು. ಆದರೆ ತಿಂಗಳಾದರೂ ಈ ಬಗ್ಗೆ ಸರಕಾರದಿಂದ ಆದೇಶ ಬಂದಿಲ್ಲ. ಆದರೆ ಸರಕಾರದ ಆದೇಶಕ್ಕೆ ಕಾಯದೆ ದಕ್ಷಿಣಕನ್ನಡ ಜಿಲ್ಲೆಯ ಬಹುತೇಕ ಸರಕಾರಿ ಶಾಲೆಗಳಲ್ಲಿ ಪ್ರತಿದಿನ ಮೂರು ಬಾರಿ ನೀರು ಕುಡಿಯುವುದಕ್ಕಾಗಿ ಗಂಟೆ ಬಾರಿಸುವ ಪರಿಪಾಠ ಒಂದು ತಿಂಗಳಿನಿಂದ ನಡೆದುಕೊಂಡು ಬರುತ್ತಿದೆ. ಸರಕಾರಿ ಮಾತ್ರವಲ್ಲದೆ, ಬೆಂದೂರು ಸೈಂಟ್ ಆ್ಯಗ್ನೆಸ್ ಶಾಲೆ, ಪುತ್ತೂರಿನ ಅಂಬಿಕಾ ಶಾಲೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳಲ್ಲಿಯೂ ಇದನ್ನು ಪಾಲಿಸಲಾಗುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವು ಶಾಲೆಗಳಲ್ಲಿ ಈ ಯೋಜನೆಯನ್ನು ಸ್ವಯಂಸ್ಫೂರ್ತಿಯಿಂದ ಜಾರಿಗೊಳಿಸಲಾಗಿದೆ.
ಜಾರಿಗೆ ಬಂದರೆ ಪಾಲನೆ
ವಾಟರ್‌ಬೆಲ್ ಮಾದರಿ ಯೋಜನೆಗೆ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ. ಆದೇಶ ಬಂದ ಅನಂತರ ಇದನ್ನು ಉಡುಪಿ ಜಿಲ್ಲೆಯಲ್ಲಿಯೂ ಜಾರಿಗೆ ತರಲಾಗುವುದು.
-ಶೇಷಶಯನ ಕಾರಿಂಜ, ಉಡುಪಿ ಡಿಡಿಪಿಐ
ವಾಟರ್ ಬೆಲ್ ಬಗ್ಗೆ ಸರಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಆದರೂ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಸ್ವಯಂಸ್ಫೂರ್ತಿಯಿಂದ ಇದನ್ನು ರೂಢಿಸಿಕೊಂಡಿದ್ದು, ದಿನದಲ್ಲಿ ಮೂರು ಹೊತ್ತು ಬೆಲ್ ಬಾರಿಸಿ ಮಕ್ಕಳಿಗೆ ನೀರು ಕುಡಿಯುವಂತೆ ಹೇಳಲಾಗುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದೊಂದು ಅತ್ಯುತ್ತಮ ಕಾರ್ಯಕ್ರಮ.
-ವಾಲ್ಟರ್ ಡಿಮೆಲ್ಲೊ, ದ.ಕ. ಡಿಡಿಪಿಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.