ಉಡುಪಿಯ ಈ ಬಸ್‌ ಚಾಲಕ ‘ಜಲಜಾಗೃತಿ’ ಉಪನ್ಯಾಸಕ


Team Udayavani, Apr 27, 2017, 1:07 AM IST

Jala-25-4.jpg

ಉಡುಪಿ: ನಾವೆಲ್ಲ ಇಂದಿಗೆ ಬದುಕಲು ಹಪಹಪಿಸುತ್ತಿದ್ದರೆ, ಕಾಲೇಜು ಬಸ್‌ ಚಾಲಕರೊಬ್ಬರು ನೆಮ್ಮದಿಯ ನಾಳೆಗಾಗಿ ನೀರು ಉಳಿಸುವ ಪಾಠ ಮಾಡುತ್ತಿದ್ದಾರೆ. ನಾವು ಇನ್ನಷ್ಟು ಮತ್ತಷ್ಟು ಆಳ ಭೂಮಿಯನ್ನು ಕೊರೆದು ಅಂತರ್ಜಲವನ್ನು ಖಾಲಿ ಮಾಡುತ್ತಿದ್ದರೆ, ಅವರು ಹೇಗೆ ಮರುಪೂರಣ ಮಾಡಿ ಅಂತರ್ಜಲ ಮಟ್ಟ ಸುಧಾರಿಸುವುದು ಎಂದು ಯೋಚಿಸುತ್ತಿದ್ದಾರೆ. ಉಡುಪಿಯ ಕಲ್ಯಾಣಪುರದ ಯುವಕ ಜೋಸೆಫ್ ಜಿ. ಎಂ. ರೆಬೆಲ್ಲೊ. ವೃತ್ತಿಯಲ್ಲಿ ಬಂಟಕಲ್ಲು ಎಂಜಿನಿಯರಿಂಗ್‌ ಕಾಲೇಜಿನ ಬಸ್‌ ಚಾಲಕ. ಇವರು ಬೆಳಗ್ಗೆ 9.30ಕ್ಕೆ ಕೆಲಸ ಮುಗಿಸಿದ ಬಳಿಕ ನೀರಿನ ಬಗ್ಗೆ ಜಾಗೃತಿ ಮೂಡಿಸುವುದರಲ್ಲಿ ತೊಡಗಿಕೊಳ್ಳುತ್ತಾ ಸಂಜೆ ಮತ್ತೆ 4ರಿಂದ 5 ಗಂಟೆವರೆಗೆ ಚಾಲಕ ವೃತ್ತಿ ಮಾಡುತ್ತಾರೆ. ಐದು ವರ್ಷಗಳಿಂದ ಪ್ರಕೃತಿಯ ಬಗ್ಗೆ ಒಂದಲ್ಲ ಒಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ನಮ್ಮ ನಾಳೆಗಾಗಿಯೇ ಇವರು ದುಡಿಯುತ್ತಿದ್ದಾರೆ. ಉಡುಪಿ ಜಿಲ್ಲೆಯಷ್ಟೇ ಅಲ್ಲ. ಇತರೆಡೆಗಳಲ್ಲಿಯೂ ವನ ಮಹೋತ್ಸವ, ಜಲ ಸಂರಕ್ಷಣ ಜಾಗೃತಿ ಕಾರ್ಯಕ್ರಮ, ಸ್ವಚ್ಛತೆಯ ಬಗ್ಗೆ ಅರಿವು, ಘನ ತ್ಯಾಜ್ಯ, ದ್ರವ ತ್ಯಾಜ್ಯ ಮತ್ತು ವಿಶೇಷವಾಗಿ ಪ್ಲಾಸ್ಟಿಕ್‌ ತ್ಯಾಜ್ಯದ ವಿಲೇವಾರಿಯ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

150ಕ್ಕೂ ಹೆಚ್ಚಿನ ಕಡೆ ಜಲಜಾಗೃತಿ
ಈಗ ತೆರೆದ ಬಾವಿಗೆ, ನಿರ್ಜೀವ ಹಾಗೂ ನೀರಿರುವ ಕೊಳವೆ ಬಾವಿಗಳಿಗೆ ಮಳೆ ನೀರು ಇಳಿಸುವ ವಿಧಾನಗಳನ್ನು ತಿಳಿಸುತ್ತಿದ್ದಾರೆ. ‘ಜಲ ಜಾಗೃತಿ’ ಎನ್ನುವ ಶೀರ್ಷಿಕೆಯಡಿ ಒಂದು ವರ್ಷದಲ್ಲಿ ಸುಮಾರು 150ಕ್ಕೂ ಹೆಚ್ಚಿನ ಕಡೆಗಳಲ್ಲಿ 8ನೇ ತರಗತಿಯಿಂದ ಹಿಡಿದು ಪಿಯುಸಿ, ಪದವಿ, ಎಂಎಸ್‌ಡಬ್ಲ್ಯೂ, ನರ್ಸಿಂಗ್‌, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ, ಸ್ವಸಹಾಯ ಸಂಘಗಳಿಗೆ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಗೆ, ಗ್ರಾ. ಪಂ. ಗಳ ಸಭೆಗಳಲ್ಲಿ, ಪೊಲೀಸ್‌ ಸಿಬಂದಿಗೆ, ವಸತಿ ಸಮುಚ್ಚಯ ಇನ್ನಿತರ ಕಡೆ ನೀರಪಾಠ ಮಾಡಿದ್ದಾರೆ. ನಿಸರ್ಗದಿಂದ ಉಚಿತವಾಗಿ  ಸಿಗುತ್ತಿರುವ ಮಳೆ ನೀರನ್ನು ವ್ಯರ್ಥವಾಗಿ ಹರಿಯಲು ಬಿಡದೆ ಸದ್ಬಳಕೆ ಮಾಡಿಕೊಳ್ಳುವ ಕುರಿತು ಪವರ್‌ ಪಾಯಿಂಟ್‌ ಮೂಲಕ ಮಾಹಿತಿ ಕಾರ್ಯಾಗಾರ ನಡೆಸುತ್ತಿದ್ದಾರೆ.

ತೆರೆದ ಬಾವಿಗೆ ಮತ್ತು ಕೊಳವೆ ಬಾವಿಗೆ ಮಳೆ ನೀರನ್ನು ಇಂಗಿಸುವ ಘಟಕಗಳನ್ನು ಸ್ವತಃ ಇವರೇ ಮನೆಯಲ್ಲಿ ನಿರ್ಮಿಸಿದ್ದಾರೆ. ಅದೇ ರೀತಿ ಹೊಸದಾಗಿ ನಿರ್ಮಿಸುವವರಿಗೆ ಭೂಗರ್ಭ ಶಾಸ್ತ್ರಜ್ಞ, ಜಲ ತಜ್ಞರ ಸಲಹೆ ಪಡೆದು ಮಾರ್ಗದರ್ಶನ ನೀಡುತ್ತಿದ್ದಾರೆ. ಮನೆಯ ಛಾವಣಿಯಿಂದ ಮಳೆಗಾಲದಲ್ಲಿ ಬೀಳುವ ಮಳೆ ನೀರು, ನಮ್ಮ ಹಿತ್ತಲ ಆವರಣದಿಂದ ಚರಂಡಿಗೆ, ತೋಡು, ಹಳ್ಳ, ನದಿಯ ಮೂಲಕ ಸಮುದ್ರಕ್ಕೆ ಸೇರಿ ವ್ಯರ್ಥವಾಗುವ ಬದಲು ಈ ರೀತಿಯಾಗಿ ಸದುಪಯೋಗವಾಗಲಿ ಎನ್ನುವುದು ಅವರ ಅಭಿಲಾಷೆ.


ಭೂಮಿಯಲ್ಲಿ ನೀರು ಇಂಗಿಸಿ ಅಂತರ್ಜಲವನ್ನು ವೃದ್ಧಿಸಿ, ನೀರಿನ ಸಮಸ್ಯೆಗೆ ಸುಲಭ ಪರಿಹಾರದ ಪ್ರಕ್ರಿಯೆ ಈ ಕೂಡಲೇ ಆರಂಭಿಸದೆ ಹೋದಲ್ಲಿ ಮುಂದೆ ಅಂತರ್ಜಲ ಸಂಪತ್ತಿಗಾಗುವ ಬಹು ದೊಡ್ಡ ಅಪಾಯವನ್ನು  ನಾವು ಎದುರಿಸಬೇಕಾದೀತು. ನದಿ ಬತ್ತಿ ಹೋಗಿದೆ. ಬಾವಿಗಳಲ್ಲಿ ನೀರು ತಳಮಟ್ಟಕ್ಕಿಳಿದಿವೆ. ಎಷ್ಟು ಬೋರ್‌ವೆಲ್‌ ತೋಡಿದರೂ ನೀರು ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕೆಂದರೆ ಮಳೆ ನೀರನ್ನು ಇಂಗಿಸುವ, ಸುವ್ಯವಸ್ಥಿತ ರೀತಿಯಲ್ಲಿ ಜಲಮರುಪೂರಣ ಮಾಡಿ ಮಳೆ ನೀರನ್ನು ಭೂಮಿಗೆ ಸೇರುವಂತೆ ಮಾಡಿ ಅಂತರ್ಜಲ ಮಟ್ಟ ವೃದ್ಧಿಸುವತ್ತ ಗಮನಹರಿಸಬೇಕು ಎನ್ನುತ್ತಾರವರು.

ಎಲ್ಲರ ಜವಾಬ್ದಾರಿ 
ದೇವರು ಈ ಪ್ರಕೃತಿಗೆ ಅಗತ್ಯವಿರುವ ವಾತಾವರಣ, ಕಾಲ ಕಾಲಕ್ಕೆ ಮಳೆ, ಬೆಳೆ ಎಲ್ಲವನ್ನೂ ನೀಡುತ್ತಿದ್ದರೂ, ನಾವು ಅದನ್ನು ಸರಿಯಾಗಿ ನಿರ್ವಹಿಸದೆ ಸಮಸ್ಯೆಯನ್ನು ತಂದುಕೊಳ್ಳುತ್ತಿದ್ದೇವೆ. ಒಂದೆಡೆ ನೀರಿನ ದುರ್ಬಳಕೆ ಮಾಡುತ್ತಾ ಮತ್ತೂಂದೆಡೆ ಮಳೆಗಾಗಿ ದೇವರ ಪ್ರಾರ್ಥಿಸಿದರೆ ಏನು ಪ್ರಯೋಜನ. ಈ ಭೂಮಿ, ಈ ಸುಂದರ ಪ್ರಕೃತಿಯ ಆರೋಗ್ಯ, ವಾತಾವರಣದ ಆರೈಕೆ, ಜೀವಜಲವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ.
– ಜೋಸೆಫ್ ರೆಬೆಲ್ಲೊ, ಕಲ್ಯಾಣಪುರ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.