‘ನೀರಿನ ಅಭಾವ ತಲೆದೋರಿರುವುದು ಆತಂಕಕಾರಿ’
Team Udayavani, Jun 21, 2019, 11:31 AM IST
ಪರಿಸರ ಉತ್ಸವದಲ್ಲಿ ಗಿಡಗಳ ವಿತರಣೆ ಮಾಡಲಾಯಿತು.
ಕಾರ್ಕಳ, ಜೂ. 20: ನೀರು ಪೂರೈಕೆ, ಪರಿಸರ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಸಮಾಜದ ಬಹುದೊಡ್ಡ ಸವಾಲುಗಳಾಗಿದ್ದು, ಇವುಗಳಿಗೆ ಪರಿಹಾರ ಕಂಡು ಕೊಳ್ಳು ವಲ್ಲಿ ಸರಕಾರದ ಜವಬ್ದಾರಿಗಿಂತ ನಮ್ಮ ಕರ್ತವ್ಯವೇ ಹೆಚ್ಚಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಅವರು ಅಭಿಪ್ರಾಯಪಟ್ಟರು.
ಜೂ. 20ರಂದು ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಅರಣ್ಯ ಇಲಾಖೆ ಕಾರ್ಕಳ, ತಾಲೂಕು ಪಂಚಾಯತ್, ಪುರಸಭೆ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಪರಿಸರ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮೃದ್ಧ ಕಾರ್ಕಳದ ಕಲ್ಪನೆ:
ಕಳೆದ ಮೂರು ವರ್ಷಗಳಿಂದ ಪರಿಸರ ಉತ್ಸವದ ಹೆಸರಿನಲ್ಲಿ ತಾಲೂಕಿನಾದ್ಯಂತ ಗಿಡ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ಸ್ವಚ್ಛ, ಸಮೃದ್ಧ, ಹಸಿರು ಕಾರ್ಕಳದ ಕಲ್ಪನೆಯನ್ನು ಸಾಕಾರಗೊಳಿಸುತ್ತ ಸಾಗುತ್ತಿದ್ದೇವೆ. ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶವಾಗಿದ್ದರೂ ಈ ವರ್ಷ ಕಾರ್ಕಳದಲ್ಲಿ ನೀರಿನ ಅಭಾವ ತಲೆದೋರಿರುವುದು ಆತಂಕಕಾರಿ ವಿಚಾರ. ಭವಿಷ್ಯದಲ್ಲಿ ಇಂತಹ ಸಮಸ್ಯೆ ಬರಬಾರದು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಹೆಜ್ಜೆಯಿಟ್ಟಿದ್ದು, ಗ್ರಾಮ ಪಂಚಾಯತ್, ವಿವಿಧ ಸಂಘ-ಸಂಸ್ಥೆ, ವಿದ್ಯಾರ್ಥಿಗಳ ಸೇರಿದಂತೆ ಸರ್ವರ ಸಹಕಾರದೊಂದಿಗೆ ಗಿಡ ನೆಡಲಾಗುತ್ತಿದೆ ಎಂದು ಶಾಸಕರು ಹೇಳಿದರು.
ವಿದ್ಯಾರ್ಥಿಗಳಲ್ಲಿ ಕಾಳಜಿ ಮೂಡಿಸುತ್ತಿದೆ:
ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಕಾರ್ಕಳದಲ್ಲಿ ಈಗಾಗಲೇ ಹಲವಾರು ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದೆ. ಕೆರೆಗಳ ಹೂಳೆತ್ತುವ ಕಾರ್ಯವೂ ನಡೆ ಯುತ್ತಿದೆ. ಶಾಸಕರ ನೇತೃತ್ವದಲ್ಲಿ ಪರಿಸರ ಉತ್ಸವದಂತ ವಿನೂತನ ಕಾರ್ಯಕ್ರಮದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತಾದ ಕಾಳಜಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವೆಂದರು.
ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ದಿನೇಶ್, ಹೆಬ್ರಿ ತಹಶೀಲ್ದಾರ್ ಮಹೇಶ್ಚಂದ್ರ, ಎಪಿಎಂಸಿ ಅಧ್ಯಕ್ಷ ಜಯವರ್ಮ ಜೈನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್. ಕೋಟ್ಯಾನ್, ಸುಮಿತ್ ಶೆಟ್ಟಿ, ರೇಷ್ಮಾ ಉದಯ್ ಕುಮಾರ್, ದಿವ್ಯಾ ಗಿರೀಶ್ ಅಮೀನ್, ಜ್ಯೋತಿ ಹರೀಶ್, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮೇ| ಹರ್ಷ ಸ್ವಾಗತಿಸಿ, ಯೋಗೀಶ್ ಕಿಣಿ ಪ್ರಾರ್ಥಿಸಿದರು. ನಲ್ಲೂರು ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. ನಲ್ಲೂರು ಶಾಲಾ ಶಿಕ್ಷಕ ನಾಗೇಶ್ ನಿರೂಪಿಸಿ, ಕುಕ್ಕುಂದೂರು ಗ್ರಾ.ಪಂ. ಉಪಾಧ್ಯಕ್ಷ ರಾಜೇಶ್ ರಾವ್ ವಂದಿಸಿದರು.
ಸಾಲು ಮರದ ತಿಮ್ಮಕ್ಕ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು. ತಾಲೂಕಿನ ಬಹುತೇಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡಗಳನ್ನು ಪಡೆದಿರುವುದು ವಿಶೇಷವಾಗಿತ್ತು.
ಸುಮಾರು 10 ಸಾವಿರ ಗಿಡಗಳನ್ನು ತಾಲೂಕಿನ 34 ಗ್ರಾಮ ಪಂಚಾಯತ್‌ಗಳಿಗೆ ನೀಡಲಾಗಿದೆ. ಗಿಡ ಪಡೆಯುವ ಉತ್ಸಾಹ ಬೆಳೆಸುವಲ್ಲೂ ಇರಬೇಕೆನ್ನುವ ನಿಟ್ಟಿನಲ್ಲಿ ಉತ್ತಮವಾಗಿ ಗಿಡ ಬೆಳೆಸಿದ ಗ್ರಾಮ ಪಂಚಾಯತ್ ಅನ್ನು ಗುರುತಿಸಿ ಬಹುಮಾನ ನೀಡಲಾಗುವುದು ಎಂದು ಶಾಸಕರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.