Breaking news:ಉಡುಪಿ ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ|ಹೊಸ ಆದೇಶದಲ್ಲಿ ಏನಿದೆ ?
Team Udayavani, Sep 2, 2021, 5:37 PM IST
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಿದ ಹಿನ್ನೆಲೆ ಇಂದು (ಸೆ.2) ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ.
ಹೊಸ ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ಪ್ರತಿ ಶುಕ್ರವಾರ ರಾತ್ರಿ 9.00 ರಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ . ಹಾಗೂ ಜಿಲ್ಲೆಯಾದ್ಯಂತ ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹೊಸ ಮಾರ್ಗಸೂಚಿಯಲ್ಲಿ ಏನಿದೆ ?
- ಪಬ್ ಗಳಿಗೆ ಅನುಮತಿ ಇರುವುದಿಲ್ಲ
- ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ.
- ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.
- ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆಗಳು ಹಾಗೂ ಸಮಾರಂಭಗಳು ಮತ್ತು ಸಾರ್ವಜನಿಕರು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.
- ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ಸಭಾಂಗಣದ ಸಾಮರ್ಥ್ಯದ ಶೇ 50 ರಷ್ಠು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
- ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.
- ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 400 ಪಾಸ್‌ಗಳನ್ನು ನೀಡಬೇಕು.
- ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
- ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.
6.ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
7.ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ SOP ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಗೊಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಆದರೆ, ಸದರಿ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳು, ದೇವಾಲಯ ಉತ್ಸವಗಳು/ಹಬ್ಬಗಳು ,ಮೆರವಣಿಗೆಗಳು ಮತ್ತು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.
8.ಕೋವಿಡ್-19 ಮಾರ್ಗ ಸೂಚಿಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ ಅನುಮತಿಸಲಾಗಿದೆ.
9.ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ ಸ್ಥಳಗಳಲ್ಲಿ, ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.
- ಸಿನೆಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳಲ್ಲಿ ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ COVID ಸೂಕ್ತ ಮಾರ್ಗಸೂಚಿ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ.
- ಕೋವಿಡ್ ಮಾರ್ಗಸೂಚಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಿನಾಂಕ: 12-11-2020 ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು “ ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಈ ಪೈಕಿ ಜಲ ಕ್ರೀಡೆ/ಜಲ ಸಂಬಂಧಿತ ಸಾಹಸ ಚಟುವಟಿಕೆ (water sports/water related adventure activities) ಗಳಿಗೆ ಅನುಮತಿ ಇರುವುದಿಲ್ಲ.
- ವಿದ್ಯಾಭ್ಯಾಸದ ಸಲುವಾಗಿ ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ನರ್ಸಿಂಗ್, ಮೆಡಿಕಲ್, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್ ಒಳಗೊಂಡಂತೆ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರವೇಶಿಸುವ ಪೂರ್ವದಲ್ಲಿ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ -19 RTPCR ನೆಗೆಟಿವ್ ವರದಿಯನ್ನು ಹೊಂದಿರುವುದು. ಮತ್ತು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಒಳಪಡುವುದು ಹಾಗೂ ಕೊನೆಯ ದಿನ RTPCR ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವುದು.
- ಉಡುಪಿ ಜಿಲೆಯಲ್ಲಿ ಉದ್ಯೋಗ ಹೊಂದಿದ್ದು, ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ಅಥವಾ ಉಡುಪಿಗೆ ಪ್ರವೇಶಿಸುವ ಹಿಂದಿನ 7 ದಿನಗಳಲ್ಲಿ ಕೇರಳ ರಾಜ್ಯಕ್ಕೆ ಭೇಟಿ ನೀಡಿದ ಎಲ್ಲಾ ಉದ್ಯೋಗಿಗಳಿಗೆ ಮೇಲಿನ 12ನೇ ವಾಕ್ಯವೃಂದದ ಮಾರ್ಗಸೂಚಿಗಳು ಅನ್ವಯವಾಗುತ್ತದೆ. ಇವುಗಳನ್ನು ಜ್ಯಾರಿಗೊಳಿಸುವುದು ಆಯಾ ಆಡಳಿತ ಮಂಡಳಿಗಳು / ಉದ್ಯೋಗದಾತರ ಜವಾಬ್ದಾರಿಯಾಗಿರುತ್ತದೆ.ನೈಟ್ ಕರ್ಫ್ಯೂ ಗೆ ಮಾರ್ಗಸೂಚಿಗಳು :1) ರಾತ್ರಿ 9.00 ರಿಂದ ಮುಂಜಾನೆ 05.00 ರ ನಡುವೆ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
2) ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು – ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಿದೆ.
3) ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಧೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ / ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚರಿಸಬಹುದಾಗಿದೆ.
4) ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನೆ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸುವುದು (work from home)
5) ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸವುದು. ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.
6) ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರೆ ಸರಕು ಸಾಗಾಟ ವಾಹನಗಳು , ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಿದೆ.
7) ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ .ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ,ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.