BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

ಭಟ್ ಅವರನ್ನು ಗೆಲ್ಲಿಸಲೇಬೇಕಾದ ಅನಿವಾರ್ಯತೆ ನನ್ನಂತಹ ಅದೆಷ್ಟೋ ಕಾರ್ಯಕರ್ತರಿಗಿದೆ...

Team Udayavani, May 30, 2024, 7:37 PM IST

1-qwewqew

ಉಡುಪಿ: ‘ಬಿಜೆಪಿ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದು ಸ್ವೀಕಾರಾರ್ಹ ಮತ್ತು ಸ್ವಾಗತಾರ್ಹ’ ಎಂದು ಮಹೇಶ್ ಠಾಕೂರ್ ಗುರುವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

‘ಕಳೆದ 23 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯನಾಗಿ ಕೆ. ರಘುಪತಿ ಭಟ್ ಆವರ ಮೂಲಕವೇ ರಾಜಕೀಯ ಪ್ರವೇಶಿಸಿದವನು. ಈ ತನಕವೂ ಮೇರು ಧುರೀಣರೂ, ಪ್ರಾತಃ ಸ್ಮರಣೀಯರೂ ಆದ ಡಾ. ವಿ.ಎಸ್. ಆಚಾರ್ಯರೂ ಸೇರಿದಂತೆ ಪಕ್ಷದ ಅನೇಕ ನಾಯಕರ ಮಾರ್ಗದರ್ಶನ,ಪ್ರೋತ್ಸಾಹದಿಂದ ಮೂರು ಬಾರಿ ನಗರಸಭಾ ಸದಸ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ನಗರಾಧ್ಯಕ್ಷ ಹಾಗೂ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಜವಾಬ್ದಾರಿಗಳನ್ನು ನೀಡಿದ್ದಕ್ಕೆ ಅತ್ಯಂತ ಅಭಾರಿಯಾಗಿದ್ದೇನೆ. ನನಗೆ ಪಕ್ಷ ಮತ್ತು ಮುಖಂಡರ ಶಿಫಾರಸ್ಸಿನಂತೆ ನೀಡಿದ ಎಲ್ಲ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಶಿರಸಾ ವಹಿಸಿ ನಿರ್ವಹಿಸಿರುವ ಬಗ್ಗೆ ನನಗೆ ಅತೀವ ಸಂತೃಪ್ತಿ ಇದೆ. ಇದೀಗ ಪಕ್ಷ ತೆಗೆದುಕೊಂಡು ನಿರ್ಣಯದಂತೆ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ಜಿಲ್ಲಾ ಉಪಾಧ್ಯಕ್ಷ ಸ್ಥಾನದಿಂದ ವಜಾ ಮಾಡಿರುವುದನ್ನೂ ಅಷ್ಟೇ ವಿನಯವಾಗಿ ಸ್ವಾಗತಿಸುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

‘ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಸಂದರ್ಭ ಪಕ್ಷದ ರಾಜ್ಯಮಟ್ಟದ ನಾಯಕರು ಕರಾವಳಿಯ ಪ್ರಬುದ್ಧ ಮತದಾರರ ಆಶಯಕ್ಕೆ ವಿರುದ್ಧ ವಾಗಿ ಕೈಗೊಂಡಿರುವ ತೀರ್ಮಾನ ಮತ್ತು ಮಾಜಿ ಶಾಸಕರೂ, ನಮ್ಮ ಮಾರ್ಗದರ್ಶಕರೂ, ಮೂರು ಬಾರಿ ಶಾಸಕರಾಗಿ ‘ನವ ಉಡುಪಿಯ ಅಭಿವೃದ್ಧಿಯ ಹರಿಕಾರ’ರೆಂದೇ ಜನಮನ್ನಣೆ ಪಡೆದ ಮಗುವಿನಂತಹ ಮನಸ್ಸುಳ್ಳ ಸದಾ ಅಭಿವೃದ್ಧಿಯ ಮಂತ್ರವನ್ನೇ ಜಪಿಸುವ ಕೆ. ರಘುಪತಿ ಭಟ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡದೇ ವಂಚಿಸಿರುವುದು ಅರಗಿಸಿಕೊಳ್ಳಲು ಕಷ್ಟಸಾಧ್ಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಭಟ್ ಅವರಿಗೆ ವಂಚನೆಯಾದಾಗ ಪಕ್ಷದ ಹಿತದೃಷ್ಟಿಯಿಂದ ಬಂಡಾಯ ಏಳದೇ ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸಿದ್ದೇವೆ. ಆದರೆ ಎರಡನೇ ಬಾರಿ ಪಕ್ಷದ ನಾಯಕರಿಂದ ಆಗಿರುವ ತೀವ್ರ ತಪ್ಪು ಅತ್ಯಂತ ವಿಷಾದನೀಯ’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ತೀರಾ ಆಘಾತಕಾರಿಯಾಗಿದೆ. ಇದಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳದೇ ಇದ್ದರೆ ಪಕ್ಷಕ್ಕೆೆ ದೊಡ್ಡ ಮಟ್ಟದ ಹಾನಿ ತಪ್ಪಿದ್ದಲ್ಲ. ಆದ್ದರಿಂದ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಪಕ್ಷದ ಒಳಿತಿಗಾಗಿ ಭಟ್ ಅವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿರುವ ಹಿನ್ನೆೆಲೆಯಲ್ಲಿ ಒತ್ತಡ, ಒತ್ತಾಯಕ್ಕೆ ಮಣಿದು ರಘುಪತಿ ಭಟ್ ಅವರು ಸ್ಪರ್ಧಿಸುತ್ತಿದ್ದಾರೆ. ಖಂಡಿತವಾಗಿಯೂ ಇದು ಪಕ್ಷದ ವಿರುದ್ಧವಲ್ಲ ಎನ್ನುವುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಭಟ್ ಅವರೊಡನೆ ನಿಂತು ಅವರನ್ನು ಗೆಲ್ಲಿಸಲೇ ಬೇಕಾದ ಅನಿವಾರ್ಯತೆ ನನ್ನಂತಹ ಅದೆಷ್ಟೋ ಕಾರ್ಯಕರ್ತರಿಗಿದೆ. ಈಗಲೂ ಹಾಗೂ ಚುನಾವಣೆಯಲ್ಲಿ ಗೆದ್ದ ಅನಂತರವೂ ಭಟ್ಟರೊಂದಿಗೆ ನಾವು ಮತ್ತೆ ಪಕ್ಷದವರೇ ಆಗಿದ್ದೇವೆ, ಆಗಿರುತ್ತೇವೆ’ ಎಂದು ಹೇಳಿದ್ದಾರೆ.

‘ಸದ್ಯದ ಪರಿಸ್ಥಿತಿಯಲ್ಲಿ ಕಠೋರ ವಾಸ್ತವವನ್ನು ಜಿಲ್ಲೆಯ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಇರುವುದರಿಂದ ಅವರ ತೀರ್ಮಾನವನ್ನು ಖಂಡಿತವಾಗಿಯೂ ಪ್ರಶ್ನಿಸುವುದಿಲ್ಲ. ಇದು ತಾತ್ಕಾಲಿಕವೂ ಆಗಿದೆ. ರಘುಪತಿ ಭಟ್ ಅವರ ವಿಜಯದೊಂದಿಗೆ ಕರಾವಳಿಯ ಸುಶಿಕ್ಷಿತರಿಗೆ ನ್ಯಾಯ ಒದಗಿಸಿದ ಬಳಿಕ ನಾಯಕರಿಗೆ ಜ್ಞಾನೋದಯವಾಗುವುದು ನಿಶ್ಚಿತ. ಆದ್ದರಿಂದ ಎಲ್ಲವೂ ಸುಖಾಂತ್ಯವಾಗಿ ಪಕ್ಷಕ್ಕೆ ರಾಜ್ಯದಲ್ಲಿ ಭವಿಷ್ಯವನ್ನು ಸುದೃಢಗೊಳಿಸುವ ನಿಟ್ಟಿನಿಲ್ಲಿ ಭಟ್ ಅವರು ಕೈಗೊಂಡ ತೀರ್ಮಾನವನ್ನು ಸಮ್ಮತಿಸಿ ಅವರೊಂದಿಗೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಪಕ್ಷ ನನ್ನ ಮೇಲೆ ಕೈಗೊಂಡ ತೀರ್ಮಾನವನ್ನು ಯಾವುದೇ ಮುನಿಸಿಲ್ಲದೆ ಮನಸಾರೆ ಒಪ್ಪಿ ಸ್ವೀಕರಿಸುತ್ತೇನೆ’ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.