ಕಣಂಜಾರು-ಗುಡ್ಡೆಯಂಗಡಿ ರಸ್ತೆ ದುರಸ್ತಿ ಯಾವಾಗ?
Team Udayavani, Mar 26, 2018, 6:55 AM IST
ಕಾರ್ಕಳ: ಕಣಂಜಾರು-ಗುಡ್ಡೆಯಂಗಡಿ ಸಂಪರ್ಕ ಕೊಂಡಿಯಾಗಿರುವ ನೀರೆ ಕಣಜಾರು ಪಂಚಾಯತ್ ವ್ಯಾಪ್ತಿಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರ ಸಾಧ್ಯವಾಗದ ಸ್ಥಿತಿಯಲ್ಲಿದೆ. ಈ ಭಾಗದ ರಸ್ತೆಯ ದುರಸ್ತಿ ಕಾರ್ಯಕ್ಕೆ ಹಲವು ಬಾರಿ ಮನವಿ ಮಾಡಿದರೂ ದುರಸ್ತಿ ಕಾರ್ಯ ನಡೆದಿಲ್ಲ.
ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ರಸ್ತೆಯಲ್ಲಿ ಹೊಂಡಗುಂಡಿಗಳು ತುಂಬಿದ್ದು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಆ ಭಾಗದ ನೂರಾರು ವಿದ್ಯಾರ್ಥಿಗಳು, ಉದ್ಯೋಗಸ್ಥರು ಇದೇ ರಸ್ತೆಯನ್ನು ಅವಲಂಬಿಸಬೇಕಾಗಿದೆ. ಆದರೆ ಈ ರಸ್ತೆಯ ಅಭಿವೃದ್ಧಿಗಾಗಿ ಮಾತ್ರ ಜನತೆ ಚಾತಕ ಪಕ್ಷಿಯಂತೆ ಕಾಯುವ ಹಾಗಾಗಿದೆ.
ರಸ್ತೆ ನಿರ್ಮಾಣಕ್ಕೆ ರಾಜಕೀಯ ದ್ವೇಷ ಕಾರಣವೋ ಅಥವಾ ಗ್ರಾಮದ ನಿರ್ಲಕ್ಷ್ಯವೋ ಎನ್ನುವುದು ಗ್ರಾಮಸ್ಥರಿಗೆ ತೋಚದಾಗಿದೆ. ಮಳೆಗಾಲದಲ್ಲಂತೂ ಪಾದಚಾರಿಗಳೂ ಈ ರಸ್ತೆಯಲ್ಲಿ ನಡೆದಾಡುವುದು ಕಷ್ಟವಾಗಿದೆ. ಹೀಗಾಗಿ ಜನಪ್ರತಿನಿಧಿಗಳು ಇನ್ನು ಮುಂದೆಯಾದರೂ ಈ ರಸ್ತೆಯ ಅಭಿವೃದ್ಧಿಗೆ ಗಮನ ಹರಿಸಬೇಕು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎನ್ನುವುದು ಗ್ರಾಮಸ್ಥರ ಆಶಯ.
– ಗ್ರಾಮಸ್ಥರು ಕಣಂಜಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.