“ಮಾತೃಪೂರ್ಣ’ ಯೋಜನೆ ಯಶಸ್ಸಾಗುವುದೆ?


Team Udayavani, Oct 5, 2017, 2:57 PM IST

05-STTAE-7.jpg

ಉಡುಪಿ: ಗರ್ಭಿಣಿಯರು, ಬಾಣಂತಿಯರು, ಚಿಕ್ಕಮಕ್ಕಳಿಗೆ ಪೌಷ್ಟಿಕಾಂಶ ಇರುವ ಆಹಾರ ಪೂರೈಸುವ “ಮಾತೃಪೂರ್ಣ’ ಯೋಜನೆ ಅ. 2ರಂದು ರಾಜ್ಯಾದ್ಯಂತ ಆರಂಭಗೊಂಡಿದೆ. ಇದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಯಶಸ್ವಿಯಾಗಲು ಸಾಧ್ಯವೆ? ಕರಾವಳಿಗೆ ಸೂಕ್ತವಲ್ಲ ಅಂಗನವಾಡಿ ಕೇಂದ್ರಗಳ ಮೂಲಕ ಎಲ್ಲ ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ವನ್ನು ಪೂರೈಸಬೇಕು ಎಂಬ ಯೋಜನೆಯನ್ನು ಬೆಂಗಳೂರೋ? ದಿಲ್ಲಿಯಲ್ಲಿಯೋ ಕುಳಿತು ರೂಪಿಸಬಹುದು. ಆದರೆ ಇದು ಎಷ್ಟರಮಟ್ಟಿಗೆ ಸಾಧ್ಯ? 

ಹಂಚಿ ತಿನ್ನುವ ಸಂಸ್ಕೃತಿಯಿಂದ ಬಾಣಂತಿ, ಗರ್ಭಿಣಿಯರಿಗೆ ಕೊಟ್ಟ ಆಹಾರ ಪೂರ್ತಿ ತಲುಪುತ್ತಿಲ್ಲ ಎಂಬ ವಾದವನ್ನು ಒಪ್ಪಬಹುದಾದರೂ ಹೊಸ ಯೋಜನೆ ಯಶಸ್ಸಾಗುವುದು ಸಂಶಯ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆಗಳು ಚದುರಿಕೊಂಡು ಇವೆ. ಇಂತಹ ಕಡೆ ಯೋಜನೆ ಕಷ್ಟಸಾಧ್ಯ ಎನ್ನುತ್ತಾರೆ ಉಡುಪಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಸದಾನಂದ ನಾಯಕ್‌.

ನಡೆಯುವುದು ಸಾಧ್ಯವೆ?
ಕರಾವಳಿ, ಮಲೆನಾಡು ಭಾಗಗಳಲ್ಲಿ ಬಾಣಂತಿಯರು, ಗರ್ಭಿಣಿಯರ ಮನೆಗೂ ಅಂಗನವಾಡಿಕೇಂದ್ರಕ್ಕೂ 2- 3 ಕಿ.ಮೀ. ದೂರ ಇವೆ. ಇಷ್ಟು ದೂರ ನಡೆದುಕೊಂಡು ಹೋಗುವುದು ಎಷ್ಟರ ಮಟ್ಟಿಗೆ ಸಾಧ್ಯ? ರಿಕ್ಷಾದಲ್ಲಿ ಹೋಗುವುದು ಲಾಭದಾಯಕವಲ್ಲ. ಇಂತಹ ಫ‌ಲಾನುಭವಿಗಳಿಗೆ ಮುಂಬೈಯಲ್ಲಿದ್ದಂತೆ ಡಬ್ಟಾವಾಲರ ಮೂಲಕ ಆಹಾರ ಪೂರೈಸಬೇಕೆಂದು ಉಡುಪಿ ಜಿಲ್ಲಾಧಿಕಾರಿಯವರು ಚಿಂತನೆ ಹರಿಬಿಟ್ಟಿದ್ದಾರೆ. ಮತ್ತೆ ಈ ಆಹಾರ ಹಂಚಿ ತಿನ್ನುವ ಸಂಸ್ಕೃತಿಯಿಂದ ಫ‌ಲಾನುಭವಿಗೇ ತಲುಪುವುದು ಶತಃಸಿದ್ಧ ಎಂದು ಹೇಳುವಂತಿಲ್ಲ. ಗರ್ಭಿಣಿಯರು, ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ನಡೆದುಕೊಂಡು ಬಂದು ಅವರು ಸಿದ್ಧಪಡಿಸಿಕೊಟ್ಟ ಆಹಾರವನ್ನು ತಿಂದು ಹೋಗುವುದೂ ಸಂಶಯವೇ ಸರಿ. ಅಂಗನವಾಡಿ ಕೇಂದ್ರಗಳಿಗೆ ಪಾತ್ರೆಗಳನ್ನು ಖರೀದಿಸಲು ಯೋಜನೆ ರೂಪಿಸಲಾಗಿದೆ. ಉತ್ತಮ ಆಹಾರ ಸಿಗಬೇಕೆಂಬ ಈ ಯೋಜನೆಯ ಆಹಾರವನ್ನು ಬೇಯಿಸುವುದು ಅತಿ ಕೆಟ್ಟ ಲೋಹದ ಪಾತ್ರೆಗಳಲ್ಲಿ. ಈ ಅಗ್ಗದ ಪಾತ್ರೆಗಳಲ್ಲಿ ಬೇಯಿಸಿದ ಆಹಾರ ಪದಾರ್ಥಗಳು ಎಷ್ಟು ಆರೋಗ್ಯದಾಯಿ ಎಂಬ ಬಗ್ಗೆ ಪೌಷ್ಟಿಕಾಂಶ ತಜ್ಞರು ಮತ್ತೆ ಅಧ್ಯಯನ ನಡೆಸುವುದು ಸೂಕ್ತ. 

ಒತ್ತಡದಿಂದ ನಡೆಯುತ್ತಿದೆ
ಎಲ್ಲ ಅಂಗನವಾಡಿಗಳಲ್ಲಿ ಆಹಾರ ಬೇಯಿಸಲು ಪಾತ್ರೆಗಳ ಪೂರೈಕೆ ಆಗಿಲ್ಲ. ಇದನ್ನು ಬೇಯಿಸಿ ಕೊಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಕೊಡುವ ಪ್ರಸ್ತಾವವೇನೂ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಬಾಣಂತಿಯರು, ಗರ್ಭಿಣಿಯರು ಅಂಗನವಾಡಿಗಳಿಗೆ ಬಂದರೆ ಅಗತ್ಯವಾದ ಶೌಚಾಲಯದ  ವ್ಯವಸ್ಥೆ ಇಲ್ಲ. ಮಳೆ ಬಂದರೆ ರಕ್ಷಣೆಯೂ ಇಲ್ಲ. 10-20 ಜನರು ಬಂದರೆ ಕುಳಿತುಕೊಳ್ಳಲು ಜಾಗವಿಲ್ಲ. ಇದು ರಾಜ್ಯ ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ಉಪನಿರ್ದೇಶಕರು, ಸಿಡಿಪಿಒ, ವಲಯದ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಹೀಗೆ ಮೇಲಿನಿಂದ ಕೆಳಗೆ
ಕೆಳಗೆ ಬಂದಂತೆ ಒತ್ತಡ ಹೇರಿ ಕೆಲಸ ನಡೆಸುತ್ತಿದ್ದಾರೆ. ಅ. 2ರಂದು ಉದ್ಘಾಟನೆಯಾದ ಬಳಿಕ ಸಮೀಕ್ಷೆ ಮಾಡಿ ನೋಡಿದರೆ ತಿಳಿಯುತ್ತದೆ. 
ಪ್ರಾಣೇಶ್‌ ಹೆಜಮಾಡಿ, ಬಾಲವಿಕಾಸ ಸಮನ್ವಯ ಸಮಿತಿ ಅಧ್ಯಕ್ಷ, ಹೆಜಮಾಡಿ ಕೇಂದ್ರ

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.