ಹೊದ್ರಾಳಿ-ಅಮಾವಾಸ್ಯೆ ಕಡು ರಸ್ತೆ ದುಸ್ಥಿತಿಗೆ ಪರಿಹಾರ ಎಂದು?

ರಸ್ತೆ ದುರಸ್ತಿ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ ತಾಂತ್ರಿಕ ಮಂಜೂರಾತಿ

Team Udayavani, Feb 6, 2020, 5:35 AM IST

0502KLRE1-B

ಕೋಟೇಶ್ವರ: ಇಲ್ಲಿನ ಕೋಟಿಲಿಂಗೇಶ್ವರ ದೇಗುಲದ ಹಿಂಭಾಗದಿಂದ ಸಾಗುವ ಹೊದ್ರಾಳಿ-ಅಮವಾಸ್ಯೆ ಕಡು ರಸ್ತೆಯ ಮಾರ್ಗವಾಗಿ ಸಾಗಲು ವಾಹನ ಚಾಲಕರು ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ.

ಲೋಕೋಪಯೋಗಿ ಇಲಾಖೆ ಯಿಂದ ತಾಂತ್ರಿಕ ಮಂಜೂರಾತಿ ಆದರೂ ಕಳೆದ 3 ತಿಂಗಳಿನಿಂದ ರಸ್ತೆ ಡಾಮರೀಕರಣ ಕಾಮಗಾರಿ ಇನ್ನೇನು ಆರಂಭಗೊಳ್ಳಬಹುದೆಂಬ ಗ್ರಾಮಸ್ಥರ ನಿರೀಕ್ಷೆ ಈವರೆಗೆ ಈಡೇರಲಿಲ್ಲ , ರಿûಾ ಚಾಲಕ ಮಾಲಕರು ಬಾಡಿಗೆಗೆ ಈ ಮಾರ್ಗವಾಗಿ ತೆರಳಲು ಮುಜುಗರ ಉಂಟಾಗುವಂತಹ ಭಾರೀ ಹೊಂಡಗಳಿಂದ ಕೂಡಿರುವ ಈ ರಸ್ತೆ ಇದೀಗ ಧೂಳುಮಯವಾಗಿ ಆಸುಪಾಸಿನ ನಿವಾಸಿಗಳಿಗೆ ರಸ್ತೆಯಲ್ಲಿ ಸಂಚರಿಸಲು ಕಷ್ಟಸಾಧ್ಯವಾಗಿದೆ.

ಅನುದಾನ ಬಿಡುಗಡೆ
ರಸ್ತೆ ವಿಸ್ತರೀಕರಣದೊಡನೆ ಕಾಂಕ್ರಿಟೀಕರಣದೊಡನೆ ರಸ್ತೆ ನಿರ್ಮಾಣ ಕಾಮಗಾರಿಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಶಿಫಾರಸಿನಂತೆ 70 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಆದರೆ ರಸ್ತೆ ವಿಸ್ತರೀಕರಣಕ್ಕೆ ಕೆಲವೊಂದು ಕಡೆ ಎದುರಾದ ಸಮಸ್ಯೆ ಕಾಮಗಾರಿಯ ವಿಳಂಬಕ್ಕೆ ಹೇತು ಎನ್ನಲಾಗಿದೆ. ಸ್ಥಳೀಯರು ಕರಾವಳಿಯ ಸಂಪರ್ಕ ರಸ್ತೆ ತ್ರಿಮೂರ್ತಿ ಸರ್ಕಲ್‌ವರೆಗೆ ಸಂಪೂರ್ಣ ಡಾಮರೀಕರಣ ರಸ್ತೆಯೇ ಲೇಸು ಎಂಬ ಅಭಿಪ್ರಾಯ ಹೊಂದಿದ್ದು ಜನಾಭಿಪ್ರಾಯವನ್ನು ಕ್ರೋಢೀಕರಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಲಿದೆ.

ಹದಗೆಟ್ಟ ಕರಾವಳಿ ಮುಖ್ಯ ರಸ್ತೆ
ಬೀಜಾಡಿ-ಗೋಪಾಡಿ ಸಂಪರ್ಕ ಕೊಂಡಿಯಾಗಿರುವ ಕರಾವಳಿಯ ಮುಖ್ಯ ರಸ್ತೆಯ ಬೀಜಾಡಿ ತಿರುವಿನ ಅನೇಕ ಕಡೆ ಭಾರೀ ಹೊಂಡಗಳಿದ್ದು ನಿತ್ಯ ಪ್ರಯಾಣಿಕರ ಗೋಳು ಹೇಳ ತೀರದು. ದ್ವಿಚಕ್ರ ವಾಹನಗಳಲ್ಲಿ ಈ ಮಾರ್ಗವಾಗಿ ರಾತ್ರಿ ಸಂಚರಿಸುವವರಿಗೆ ಹೊಂಡದ ಪರಿಕಲ್ಪನೆ ಇಲ್ಲದಿದ್ದಲ್ಲಿ ಅಪಘಾತ ಕಟ್ಟಿಟ್ಟ$ ಬುತ್ತಿ. ಶಾಲಾ ಕಾಲೇಜು ವಾಹನ ಸಹಿತ ವಿವಿಧ ಉದ್ಯಮದಲ್ಲಿರುವವರು, ಮೀನುಗಾರರು, ಕಾರ್ಮಿಕರು, ಅಲ್ಲದೇ ಕರಾವಳಿಯ ಕೋಟದಿಂದ -ಕೋಡಿ ತನಕ ಅನೇಕ ಮಂದಿ ಇದೇ ಮಾರ್ಗವನ್ನು ಅವಲಂಬಿಸಿದ್ದಾರೆ. ಈ ಮಾರ್ಗವು ದುರಸ್ತಿಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಂಡಗಳೆದ್ದು ರಸ್ತೆ ರಾಡಿಯಾಗಲಿದೆ.

ಡಾಮರೀಕರಣದ ಅಗತ್ಯ ಇದೆ
ನಿತ್ಯ ಪ್ರಯಾಣಿಕರ ಸಂಚಾರಕ್ಕೆ ಯೋಗ್ಯವಾದ ರಸ್ತೆ ನಿರ್ಮಾಣ ಕಾಮಗಾರಿ ಅತೀ ಶೀಘ್ರದಲ್ಲೇ ನಡೆಯಬೇಕು, ಬೀಜಾಡಿ ರಸ್ತೆಯ ಸಂಪೂರ್ಣ ಡಾಮರೀಕರಣದ ಅಗತ್ಯ ಇದೆ.
– ಸುರೇಶ್‌ ಚಾತ್ರಬೆಟ್ಟು,ಬೀಜಾಡಿ

ಕಾಮಗಾರಿ ನಡೆಯಲಿದೆ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಶಿಫಾರಸ್ಸಿನಂತೆ ಕುಂದಾಪುರ ಕೋಡಿಯಿಂದ- ಕೋಡಿ ಕನ್ಯಾಣದವರೆಗೆ ಆಯ್ದ ಪ್ರದೇಶಗಳಲ್ಲಿ ಕಾಂಕ್ರೀಟಿಕರಣ ಹಾಗೂ ಮಿಕ್ಕುಳಿದ ಪ್ರದೇಶಗಳಲ್ಲಿ ಡಾಮರೀಕರಣ ಕಾಮಗಾರಿ ನಡೆಯಲಿದೆ. ಕೋಡಿಯಲ್ಲಿ ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು ಉಳಿದ ಭಾಗಗಳಲ್ಲಿ ಕೂಡ ಕಾಮಗಾರಿ ನಡೆಯಲಿದ್ದು, ಲೋಕೋಪಯೋಗಿ ಇಲಾಖೆ ನೇತೃತ್ವ ವಹಿಸಿದೆ.
-ಶ್ರೀಲತಾ ಎಸ್‌.ಶೆಟ್ಟಿ,
ಜಿಲ್ಲಾ ಪಂಚಾಯತ್‌ ಸದಸ್ಯೆ, ಬೀಜಾಡಿ

ಟಾಪ್ ನ್ಯೂಸ್

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Two more children test positive for HMP virus: Number of cases in the country rises to 7

HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌: ದೇಶದಲ್ಲಿ 7ಕ್ಕೇರಿದ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.