Udupi: ಕೆಎಸ್ಸಾರ್ಟಿಸಿ ಬಸ್ನಿಂದ ರಸ್ತೆಗೆ ಬಿದ್ದು ಮಹಿಳೆ ಗಾಯ: ಪ್ರಕರಣ ದಾಖಲು
Team Udayavani, Nov 30, 2024, 8:01 PM IST
ಉಡುಪಿ: ಕೆಎಸ್ಸಾರ್ಟಿಸಿ ಬಸ್ ಚಾಲಕ ಬಸ್ ನಿಲ್ಲಿಸಲು ಬ್ರೇಕ್ ಹಾಕಿದ ವೇಳೆ ಪ್ರಯಾಣಿಕ ಮಹಿಳೆಯೊಬ್ಬರು ಇಳಿಯುವ ಪ್ರಯತ್ನದಲ್ಲಿ ಬಸ್ನ ಬಾಗಿಲಿನ ಮೆಟ್ಟಿಲಿನಿಂದ ಕೆಳಗೆ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಎದುರು ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಯಾಣಿಕರನ್ನು ಇಳಿಸಲೆಂದು ಬಸ್ ನಿಲ್ಲಿಸಿದ್ದು, ಬಸ್ ನಿಧಾನ ಹಂತದಲ್ಲಿದ್ದಾಗ ಬಸ್ನ ಪ್ರಯಾಣಿಕ ಪವಿತ್ರಾ ಬಸವರಾಜ್ ಹಾಲಪ್ಪನವರ್ ಎಂಬ ಮಹಿಳೆ ಇಳಿಯಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ಬಸ್ ಮುಂದಕ್ಕೆ ಚಲಿಸಿದೆ. ಪರಿಣಾಮ ಮಹಿಳೆ ರಸ್ತೆಗೆ ಬಿದ್ದು ಗಾಯಗೊಂಡರು. ಗಾಯಾಳು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ನಿರ್ವಾಹಕ ರವೀಂದ್ರ ಅವರು ಮಹಿಳೆ ಬಸ್ನಿಂದ ಇಳಿಯುವುದನ್ನು ಸರಿಯಾಗಿ ಗಮನಿಸದೇ ಇದ್ದ ಕಾರಣ ಬಸ್ ಚಾಲಕ ಲಕ್ಷ್ಮಣ್ ಬಸ್ ದುಡುಕುತನ ಮತ್ತು ನಿರ್ಲಕ್ಷತನದಿಂದ ಒಮ್ಮಲೇ ಮುಂದಕ್ಕೆ ಚಲಾಯಿಸಿದ ಪರಿಣಾಮ ಘಟನೆ ನಡೆದಿದ್ದಾಗಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.