Udupi: ಇಂದಿನಿಂದ ವಿಶ್ವ ಬಂಟರ ಸಮ್ಮೇಳನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ
Team Udayavani, Oct 28, 2023, 12:06 AM IST
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೇತೃತ್ವದ ವಿಶ್ವ ಬಂಟರ ಸಮ್ಮೇಳನಕ್ಕೆ ಇಂದು (ಅ. 28) ಚಾಲನೆ ಸಿಗಲಿದೆ. ದಿನ ಪೂರ್ತಿ ವಿವಿಧ ಕ್ರೀಡಾಕೂಟಗಳು ನಡೆಯಲಿವೆ. ಅ. 29ರಂದು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮ್ಮೇಳನದ ಮೆರುಗು ಹೆಚ್ಚಿಸಲಿವೆ.
ಶನಿವಾರ ಬೆಳಗ್ಗೆ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ “ಕ್ರೀಡಾ ಸಂಗಮ’ ಆರಂಭವಾಗಲಿದೆ. ಟ್ರ್ಯಾಕ್, ಕಬಡ್ಡಿ ಪಂದ್ಯಾಟಕ್ಕೆ ಕ್ರೀಡಾಂ ಗಣ ಸಜ್ಜುಗೊಂಡಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 1 ಗಂಟೆಗೆ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ ನೀಡುವರು.
ಕ್ರೀಡಾಕೂಟ ಚಾಲನೆಗೂ ಮುನ್ನ ಬೆಳಗ್ಗೆ 9ಕ್ಕೆ ನಗರದ ಬೋರ್ಡ್ ಹೈಸ್ಕೂಲ್‌ನಿಂದ ಬೃಹತ್ ಸಾಲಂಕೃತ ಮೆರವಣಿಗೆ ಆರಂಭಗೊಂಡು ಕೆ.ಎಂ. ಮಾರ್ಗದ ಮೂಲಕ ಹಳೆ ಡಯಾನ ವೃತ್ತ ಮಾರ್ಗವಾಗಿ ಅಜ್ಜರಕಾಡು ಮೈದಾನದವರೆಗೆ ಸಾಗಲಿದೆ. 100ಕ್ಕೂ ಅಧಿಕ ಬಂಟರ ಸಂಘದ ಸಾವಿರಾರು ಮಂದಿ ಪಾಲ್ಗೊಳ್ಳುವರು.
ಜನಪದ ಕಲಾತಂಡಗಳು, ಉಡುಪಿಯ ಕಡೆಗೋಲು ಕೃಷ್ಣ, ಕಟೀಲು ದುರ್ಗಾ ಪರಮೇಶ್ವರಿ ಸಹಿತ ವಿವಿಧ ಸ್ತಬ್ಧ ಚಿತ್ರಗಳು, ಕಂಬಳದ ಕೋಣಗಳುಹುಲಿ ವೇಷ, ಕೀಲುಕುದುರೆ ಗೊಂಬೆಗಳು ಇತ್ಯಾದಿ ಮೆರವಣಿಗೆಗೆ ಕಳೆ ತುಂಬಲಿವೆ. ಬಳಿಕ ಅಜ್ಜರಕಾಡು ಮೈದಾನದಲ್ಲಿ ಬಂಟರ ಸಂಘಗಳ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಲಿದೆ.
ಪ್ರೊ ಕಬಡ್ಡಿ
ಕ್ರೀಡೋತ್ಸವದಲ್ಲಿ ವಿಶೇಷವಾಗಿ ಮಧ್ಯಾಹ್ನ 3ರಿಂದ ರಾತ್ರಿ 11ರ ವರೆಗೆ ಪ್ರೊ ಕಬಡ್ಡಿ ಮಾದರಿಯಲ್ಲಿ 8 ತಂಡಗಳ ಪಂದ್ಯಾಟ ನಡೆಯಲಿದೆ. ಎಲ್ಲ ವಯೋಮಾನದವರಿಗೆಆ್ಯತ್ಲೆಟಿಕ್ ಜತೆಗೆ ವಾಲಿಬಾಲ್, ಹಗ್ಗ ಜಗ್ಗಾಟ, ತ್ರೋಬಾಲ… ಮತ್ತಿತರ ಪಂದ್ಯಗಳಿವೆ. 2 ಸಾವಿರಕ್ಕೂ ಅಧಿಕ ಕ್ರೀಡಾಳುಗಳು ಭಾಗವಹಿಸುವರು.
ವಾಹನ ನಿಲುಗಡೆ
ಅಜ್ಜರಕಾಡು ವಿವೇಕಾನಂದ ಸರಕಾರಿ ಶಾಲೆ ಮತ್ತು ಸೈಂಟ್ ಸಿಸಿಲಿ ಶಾಲೆಯ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಸಾಂಸ್ಕೃತಿಕ ವೈಭವಕ್ಕೆ ಗುತ್ತಿನ ಮನೆ ವೇದಿಕೆ
ಅ. 29ರಂದು ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದ ಆವರಣದಲ್ಲಿ ತೆರೆದ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ ಜರಗಲಿದೆ. 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವರು. ಗುತ್ತಿನ ಮನೆ ಹೋಲುವ ಬೃಹತ್ ವೇದಿಕೆ ನಿರ್ಮಿಸಿದ್ದು. ಗುತ್ತಿನ ಮನೆಯ ಕಲಾಸ್ಪರ್ಶ ಸಮ್ಮೇಳನಕ್ಕೆ ಮೆರುಗು ನೀಡಲಿದೆ. ಕುಂದಾಪುರ, ಸುಳ್ಯ, ಉತ್ತರ ಕನ್ನಡ ಜಿಲ್ಲೆಯ 250 ವರ್ಷ ಹಿಂದಿನ ಗುತ್ತಿನ ಮನೆಗಳ ಕಂಬಗಳನ್ನು ಇದಕ್ಕೆ ಬಳಸಿರುವುದು ವಿಶೇಷ.
ಊಟೋಪಚಾರ
ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಸಸ್ಯಾಹಾರಿ, ಮಾಂಸಹಾರಿ ಭೋಜನ, ಸಂಜೆ ಉಪಾ ಹಾರ, ರಾತ್ರಿ ಭೋಜನ ವ್ಯವಸ್ಥೆ ಮಾಡಲಾಗಿದೆ. ನೂರಾರು ಬಾಣಸಿ ಗರು ಶುಕ್ರವಾರದಿಂದಲೇ ಅಡುಗೆ ತಯಾರಿಯಲ್ಲಿದ್ದಾರೆ. ಕುಡಿಯುವ ನೀರು, ಸುಲಭ ಶೌಚಾಲಯ ಸಹಿತ ಅಗತ್ಯ ಮೂಲಸೌಕರ್ಯವನ್ನು ಅಜ್ಜರಕಾಡು ಮೈದಾನದಲ್ಲಿ ರೂಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.