Yakshagana; 2023ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಬನ್ನಂಜೆ ಸಂಜೀವ ಸುವರ್ಣ ಆಯ್ಕೆ
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ
Team Udayavani, Sep 14, 2024, 2:25 PM IST
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ (Karnataka Yakshagana Academy) 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಬಡಗುತಿಟ್ಟು ಯಕ್ಷಗಾನ ಕಲಾವಿದರು ಹಾಗೂ ಯಕ್ಷ ಕಲಾಕೇಂದ್ರದ ಗುರುಗಳಾದ ಬನ್ನಂಜೆ ಸಂಜೀವ ಸುವರ್ಣ (Bannanje Sanjeeva Suvarna) ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ ತಲ್ಲೂರು ಶಿವರಾಮ್ ಶೆಟ್ಟಿ ಅವರು ಶನಿವಾರ (ಸೆ.14) ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನವೆಂಬರ್ ತಿಂಗಳಿನಲ್ಲಿ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಇದೇ ಗೌರವ ಪ್ರಶಸ್ತಿ ಹಾಗೂ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ, ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ ಮಾಡಲಾದ ಹೆಸರುಗಳನ್ನು ಪ್ರಕಟಿಸಿದರು.
ಬಡಗುತಿಟ್ಟು ಯಕ್ಷಗಾನ ಕಲಾವಿದರು ಹಾಗೂ ಯಕ್ಷ ಕಲಾಕೇಂದ್ರದ ಗುರುಗಳಾದ ಗುರು ಸುವರ್ಣ ಎಂದೇ ಖ್ಯಾತರಾದ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿಗೆ ನೀಡಲಾಗುವುದು. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಿಗೆ ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು ಎಂದು ವಿವರಿಸಿದರು.
ಇತರ ಪ್ರಶಸ್ತಿಗಳ ವಿವರ
ಗೌರವ ಪ್ರಶಸ್ತಿ
ದಿನೇಶ್ ಅಮ್ಮಣ್ಣಾಯ, ನಾರಾಯಣಪ್ಪ.ಎ.ಆರ್, ಎಂ.ಜಬ್ಬಾರ್ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪಗೌಡ ಸಜಿಪ
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ
ರಘುನಾಥ ಶೆಟ್ಟಿ ಬಾಯಾರು, ದಿವಾಕರ ದಾಸ ಕಾವಳಕಟ್ಟೆ, ಸುಬ್ರಾಯ ಪಾಟಾಳಿ ಸಂಪಾಜೆ, ನರಾಡಿ ಭೋಜರಾಜ ಶೆಟ್ಟಿ, ಸದಾನಂದ ಪ್ರಭು, ಹೊಳೆಮಗೆ ನಾಗಪ್ಪ ಮರಕಾಲ, ಶಿರಳಗಿ ತಿಮ್ಮಪ್ಪ ಹೆಗಡೆ, ಬಾಬು ಕುಲಾಲ್ ಹಳ್ಳಾಡಿ, ಶಿವಯ್ಯ, ಜೀಯಪ್ಪ.
ದತ್ತಿನಿಧಿ ಪ್ರಶಸ್ತಿ
ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿಗೆ ಶ್ರೀ ಗೋಪಾಲಕೃಷ್ಣ ಶಂಕರ ಭಟ್ ಜೋಗಿಮನೆ
2022ನೇ ಸಾಲಿನ ಪುಸ್ತಕ ಬಹುಮಾನ
ವಿದ್ವಾನ್ ಗಣಪತಿ ಭಟ್, ಡಾ.ಮನೋರಮಾ.ಬಿ.ಎನ್
2023ನೇ ಸಾಲಿನ ಪುಸ್ತಕ ಬಹುಮಾನ
ಡಾ.ಸತೀಶ್.ಜಿ.ನಾಯ್ಕ, ಹೆಚ್.ಸುಜಯೀಂದ್ರ ಹಂದೆ, ಕೋಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.