ಮಾ. 23-25: ಅಖೀಲ ಭಾರತ ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನ
Team Udayavani, Mar 20, 2018, 10:30 AM IST
ಕುಂದಾಪುರ: ಕರ್ನಾಟಕ ಸಾಂಸ್ಕೃತಿಕ ಕಲಾ ಪ್ರತಿಷ್ಠಾನ ಬೆಂಗಳೂರು ಹಾಗೂ ಕುಂದಾಪುರದ ಭಂಡಾರ್‌ಕಾರ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಾ. 23ರಿಂದ 25ರವರೆಗೆ ಭಂಡಾರ್‌ಕಾರ್ ಕಾಲೇಜಿನಲ್ಲಿ 13ನೇ ಅಖೀಲ ಭಾರತ ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಡಾ| ಎನ್.ಪಿ. ನಾರಾಯಣ ಶೆಟ್ಟಿ ಅವರು, 3 ದಿನ ನಡೆಯುವ ಸಮ್ಮೇಳನವನ್ನು ಬಡಗು, ತೆಂಕು ಸಹಿತ ರಾಜ್ಯಾದ್ಯಂತ ಇರುವ ಬೇರೆ ಬೇರೆ ಪ್ರಕಾರಗಳ ಯಕ್ಷಗಾನವನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಆಯೋಜಿಸಲಾಗಿದೆ ಎಂದರು.
ಮಾ. 23ರಂದು ಸಮ್ಮೇಳನವನ್ನು ಸಾಣೇಹಳ್ಳಿಯ ಡಾ| ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಲಿದ್ದು, ಸಮ್ಮೇಳನಾಧ್ಯಕ್ಷ ಕಂದಾವರ ರಘುರಾಮ ಶೆಟ್ಟಿ, ಶಾಸಕರಾದ ಗೋಪಾಲ ಪೂಜಾರಿ, ಪ್ರತಾಪ್‌ಚಂದ್ರ ಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ಮಾ. 24ರಂದು ಎಡನೀರು ಶ್ರೀ, ಕೆಪಿಎಸ್‌ಸಿ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್, ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಳ್ಳಲಿದ್ದಾರೆ. ಮಾ. 25ರ ಸಮಾರೋಪ ಸಮಾರಂಭದಲ್ಲಿ ಮಣಿಪಾಲ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್. ಸಾಮಗ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಮೇಶ್ ಚಿಂಬಾಲ್ಕರ್, ಪತ್ರಕರ್ತ ಯು.ಎಸ್. ಶೆಣೈ, ಉಪಾಧ್ಯಕ್ಷ ವಿಶ್ವನಾಥ ಕರಬ, ಸಹ ಕಾರ್ಯದರ್ಶಿ ರಾಜಾರಾಮ ಭಟ್, ಸುಮಲತಾ ಉಪಸ್ಥಿತರಿದ್ದರು.
ಯಕ್ಷ ಸಾಧಕರಿಗೆ ಸಮ್ಮಾನ
ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕರಾದ ಗೋವಿಂದ ನಾಯಕ್ (ತೆಂಕು), ಕೆ. ಸದಾನಂದ ಐತಾಳ (ಬಡಗು), ರವೀಂದ್ರ ತಲಕಾಡು (ಮೂಡಲಪಾಯ- ಮೈಸೂರು), ಎಚ್.ಸಿ. ಶಿವಬುದ್ಧಿ (ಗೊಂಬೆಯಾಟ), ಆನಂದ ಸಿದ್ದವೀರಪ್ಪ ಮಗುದಂ (ಶ್ರೀಕೃಷ್ಣ ಪಾರಿಜಾತ), ಬಸವರಾಜ ಬಾ. ಮದೀಹಳ್ಳಿ (ಸಣ್ಣಾಟ), ವೀರಭದ್ರಪ್ಪ ಶಿವಪುತ್ರಪ್ಪ ಹರ್ತಿ (ದೊಡ್ಡಾಟ- ಗೋಕಾಕ), ನೀಲಪ್ಪ ಹೊನ್ನಪ್ಪ ಜೋಗಿ (ಬಯಲಾಟ), ಸುರೇಂದ್ರ ಪಣಿಯೂರು (ಸಂಘಟನೆ), ಕರ್ಗಲ್ಲು ವಿಶ್ವೇಶ್ವರ ಭಟ್ (ಜೀವಮಾನ ಸಾಧನೆ) ಅವರನ್ನು ಸಮ್ಮಾನಿಸಿ, ಗೌರವಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.