ಸೆ. 1-15: ಶಾಲೆಯೆಡೆಗೆ ಗೊಂಬೆ ನಡಿಗೆ


Team Udayavani, Aug 31, 2017, 6:40 AM IST

2908kde5.jpg

ಕುಂದಾಪುರ: ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್‌ ಮೆಮೋರಿಯಲ್‌ ಯಕ್ಷಗಾನ ಗೊಂಬೆ ಯಾಟ ಟ್ರಸ್ಟ್‌ (ರಿ.), ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಹಾಗೂ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯು ನಾಗರಾಜ್‌ ಭಟ್‌ ಮಲ್ಪೆ ಇವರ ಪ್ರಾಯೋಜಕತ್ವದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಗಡಿನಾಡ ತಿರುಗಾಟ ಶಾಲೆಯೆಡೆಗೆ ಗೊಂಬೆ ನಡಿಗೆ ವಿಶಿಷ್ಟ  ಪ್ರಯತ್ನಕ್ಕೆ ಮುಂದಾಗಿದೆ. ಗೊಂಬೆಯಾಟ ಟ್ರಸ್ಟ್‌ ಅಸ್ತಿತ್ವ  ಕಂಡು 22 ವರ್ಷಗಳ ಸವಿನೆನಪಲ್ಲಿ ಸೆ. 1ರಿಂದ 15ರ ವರೆಗೆ ಕುಮಟಾ, ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮಂಗಳೂರು, ಕಾಸರಗೋಡು ತಾ|ನ ಗೊಂಬೆಯಾಟ ಪ್ರಾತ್ಯಕ್ಷಿಕೆ ನಡೆಯಲಿದೆ.

ಪರಂಪರೆ ಉಳಿವಿಗೆ ಹೋರಾಟ
ಸುಮಾರು 350 ವರ್ಷಗಳ 6 ನೇ ತಲಾಂತರದ ವಿಶಿಷ್ಟ, ವಿಶೇಷ ಕಲಾ ಪರಂಪರೆಯ ಉಳಿವಿಗಾಗಿ ಹಗಲಿರುಳೆನ್ನದೆ ಹೋರಾಟ ಮಾಡುತ್ತಾ  ಬಂದಿರುವ ಸಂಸ್ಥೆಯು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡದಲ್ಲಿ  ಕಳೆದ 3 ವರ್ಷಗಳಿಂದ ನಿರಂತರ ತಿಂಗಳ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನಡೆಸಿಕೊಂಡು ಬರುತ್ತಿದೆ. ಸರಕಾರದ ಯಾವುದೇ ಧನ ಸಹಾಯ ಪಡೆಯದೆ ಹೋರಾಡುತ್ತಿರುವುದು ಈ ತಂಡದ ವಿಶೇಷವೆನ್ನಬಹುದು.

22 ಶಾಲೆಗಳಲ್ಲಿ  ಪ್ರಾತ್ಯಕ್ಷಿಕೆ  
ಸೆ. 1ರಂದು ಶ್ರೀ ಮೂಕಾಂಬಿಕಾ ಪ್ರೌಢ ಶಾಲೆ, ಮಾವಿನಕಟ್ಟೆಯಲ್ಲಿ ಶಾಲೆಯೆಡೆಗೆ ಗೊಂಬೆ ನಡಿಗೆ ಉದ್ಘಾಟನೆಗೊಳ್ಳಲಿದೆ. ಅನಂತರ ಸೆ. 4ರಿಂದ 15ರ ವರೆಗೆ ಸರಸ್ವತಿ ಪದವಿ ಪೂರ್ವ ಕಾಲೇಜು ಕುಮಟಾ, ಶ್ರೀ ಮಾರುತಿ ರೆಸಿಡೆನ್ಶಿಯಲ್‌ ಸ್ಕೂಲ್‌, ಗೇರುಸೊಪ್ಪೆ, ಎಸ್‌.ಡಿ.ಎಂ. ಕಾಲೇಜು ಹೊನ್ನಾವರ, ದ ನ್ಯೂ ಇಂಗ್ಲಿಷ್‌ ಪ.ಪೂ. ಕಾಲೇಜು, ಅಯೋಧ್ಯಾನಗರ, ಭಟ್ಕಳ, ಎಸ್‌.ಎಂ.ಎಸ್‌. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್‌.ಇ) ಬ್ರಹ್ಮಾವರ, ಮಿಲಾಗ್ರಿಸ್‌ ಆಂಗ್ಲ ಮಾಧ್ಯಮ ಶಾಲೆ, ಕಲ್ಯಾಣಪುರ,  ಮುಕುಂದ ಕೃಪಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಡುಪಿ, ಮಾಧವ ಕೃಪ ಇಂಗ್ಲಿಷ್‌ ನರ್ಸರಿ ಮತ್ತು ಹೈಯರ್‌ ಪ್ರೈಮರಿ ಸ್ಕೂಲ್‌, ಮಣಿಪಾಲ, ಗುರುಕುಲ ಪಬ್ಲಿಕ್‌ ಸ್ಕೂಲ್‌ ವಕ್ವಾಡಿ, ಸ. ಪ.ಪೂ. ಕಾಲೇಜು, (ಪ್ರೌಢ ಶಾಲಾ ವಿಭಾಗ) ಕುಂದಾಪುರ, ಶಾರದಾ ಕಾಲೇಜ್‌ ಬಸೂÅರು, ಶ್ರೀ ಸಿದ್ಧಿ ವಿನಾಯಕ ರೆಸಿಡೆನ್ಶಿಯಲ್‌ ಸ್ಕೂಲ್‌,  ಹಟ್ಟಿಯಂಗಡಿ, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ ವಂಡ್ಸೆ, ಶ್ರೀ ಮೂಕಾಂಬಿಕಾ ಪ.ಪೂ. ಕಾಲೇಜು ಕೊಲ್ಲೂರು,  ಗ್ರೆಗರಿ ಪ್ರೌಢ ಶಾಲೆ ನಾಡ- ಪಡುಕೋಣೆ, ಸರಕಾರಿ ಪ್ರೌಢ ಶಾಲೆ ಹಕ್ಲಾಡಿ, ಶ್ರೀ ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸಂದೀಪನ್‌ ಆಂಗ್ಲ ಮಾಧ್ಯಮ ಶಾಲೆ ಖಂಬದಕೋಣೆ, ಗೋವಿಂದದಾಸ್‌ ಕಾಲೇಜು ಸುರತ್ಕಲ್‌, ಕೆನರಾ ಹೈಸ್ಕೂಲ್‌ ಮಂಗಳೂರು, ಎಚ್‌.ಎಚ್‌. ಎಸ್‌. ಐ. ಬಿ. ಸ್ವಾಮೀಜಿಸ್‌ ಹೈಯರ್‌ ಸೆಕೆಂಡರಿ ಸ್ಕೂಲ್‌ ಎಡನೀರು ಕಾಸರಗೋಡಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. 

ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಕಲೆಗಳ ಬಗ್ಗೆ  ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡುವ ಯಾವುದೇ ಅವಕಾಶ ಕಲ್ಪಿಸದೇ ಇರುವುದರಿಂದ  ಮಕ್ಕಳಿಗೆ  ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಅವರಲ್ಲಿ ಈ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ  ಉಪ್ಪಿನಕುದ್ರು ಬೊಂಬೆಯಾಟ ತಂಡ ಶಾಲೆಯಡೆಗೆ ಬೊಂಬೆ ನಡಿಗೆ ಎನ್ನುವ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಮ್ಮ  ತಂಡ ಈಗಾಗಲೇ ವಿದೇಶಗಳ ನೆಲದಲ್ಲಿ ಈ ರೀತಿಯ ಪ್ರಯೋಗಳನ್ನು  ಮಾಡಿ ಯಶಸ್ವಿಯಾಗಿದ್ದು ಶಿಕ್ಷಣದ ಜೊತೆಗೆ ಕನ್ನಡ ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯದಲ್ಲಿ ತೊಡಗಿಕೊಂಡಿದೆ.
-ಭಾಸ್ಕರ ಕೊಗ್ಗ ಕಾಮತ್‌, ಸಂಚಾಲಕರು, ಉಪ್ಪಿನಕುದ್ರು ಗೊಂಬೆಯಾಟ ಸಂಸ್ಥೆ

– ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.