Udupi; ನಾಗರ ಪಂಚಮಿಗೆ ಸರಕಾರಿ ರಜೆ ಸಿಎಂಗೆ ಯಶ್‌ಪಾಲ್ ಸುವರ್ಣ ಮನವಿ
Team Udayavani, Aug 10, 2024, 12:43 AM IST
ಉಡುಪಿ: ಕರಾವಳಿಯ ಜನರಿಗೆ ಅತ್ಯಂತ ಭಾವನಾತ್ಮಕವಾದ ಶ್ರದ್ಧಾ ಭಕ್ತಿಯಿಂದ ಆಚರಿಸಲ್ಪಡುವ ನಾಗರ ಪಂಚಮಿ ಹಬ್ಬಕ್ಕೆ ರಾಜ್ಯ ಸರಕಾರ ಮುಂದಿನ ವರ್ಷದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ನಾಗರ ಪಂಚಮಿ ಹಬ್ಬಕ್ಕೆ ಕರಾವಳಿ ಜಿಲ್ಲೆ ಯಲ್ಲಿ ವಿಶೇಷ ಮಾನ್ಯತೆಯಿದ್ದು, ಪ್ರತಿ ಮನೆಗಳಿಂದಲೂ ಭಕ್ತರು ನಾಗ ಬನಗಳಲ್ಲಿ ಅತ್ಯಂತ ಭಕ್ತಿಯಿಂದ ತನು ಎರೆದು, ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಳ್ಳುತ್ತಿದ್ದಾರೆ. ಮಕ್ಕಳನ್ನು ಈ ಹಬ್ಬದಲ್ಲಿ ಭಾಗಿಯಾಗಲು ಪೋಷಕರು ಇಚ್ಛಿಸಿದರೂ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲದ ಕಾರಣ ಭಾಗವಹಿಸಲು ಸಾಧ್ಯವಾಗದೆ ನಿರಾಶರಾಗುತ್ತಿದ್ದಾರೆ.
ನಾಗರ ಪಂಚಮಿಗೆ ರಜೆ ನೀಡುವ ಬಗ್ಗೆ ಕರಾವಳಿ ಜಿಲ್ಲೆ ಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಕರಾವಳಿ ಜಿಲ್ಲೆ ಯ ಧಾರ್ಮಿಕ ಭಾವನೆಗಳಿಗೆ ಗೌರವ ನೀಡಿ ಮುಂದಿನ ವರ್ಷದಿಂದ ಈ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.