Karnataka Government ಯುವನಿಧಿ ಯೋಜನೆ : ಪೋಸ್ಟರ್ ಬಿಡುಗಡೆ
Team Udayavani, Dec 27, 2023, 12:31 AM IST
ಮಣಿಪಾಲ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. 2023 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾದ ಸರಕಾರಿ, ಖಾಸಗಿ ಹಾಗೂ ಸೊÌದ್ಯೋಗ ಹೊಂದದೇ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ, ರಾಜ್ಯದಲ್ಲಿ ವಾಸವಾಗಿರುವವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬಹುದಾಗಿದೆ ಎಂದರು.
ಜಿ.ಪಂ. ಸಿಇಒ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿಜಿ.ಎಸ್, ವಾರ್ತಾಧಿಕಾರಿ ಮಂಜುನಾಥ್ ಬಿ., ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಅರುಣ್, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಿಬಂದಿ ಪೃಥ್ವಿರಾಜ್ ಉಪಸ್ಥಿತರಿದ್ದರು.
ಮಂಗಳೂರು:ರಾಜ್ಯ ಸರಕಾರದ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಯುವ ನಿಧಿ ಯೋಜನೆಯ ಪ್ರಚಾರಕ್ಕಾಗಿ ಕರಪತ್ರಗಳು ಮತ್ತು ಭಿತ್ತಿಪತ್ರಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮತ್ತು ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ| ಆನಂದ್ ಕೆ. ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜಾ, ಉದ್ಯೋಗ ವಿನಿಮಯ ಅಧಿಕಾರಿ ಎಚ್ಚರಪ್ಪ ಬಡಿಗೇರ್, ಸಹಾಯಕ ನಿರ್ದೇಶಕರಾದ ಸತ್ಯಲತಾ, ಸಹಾಯಕ ಸಾಂಖ್ಯಿಕ ಅಧಿಕಾರಿಯವರಾದ ವಿಜಯಲಕ್ಷ್ಮೀ, ನಗರ ಅಭಿಯಾನ ವ್ಯವಸ್ಥಾಪಕರಾದ ಅಚ್ಯುತ ನಾಯ್ಕ… ಮೂಡುಬಗೆ, ಎನ್. ಚಿತ್ತರಂಜನ್ ದಾಸ್ ಉಪಸ್ಥಿತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.