ಜು.13 ರಿಂದ ಸ್ವರ್ಣವಲ್ಲೀ ಶ್ರೀಗಳ 32 ನೇ ಚಾತುರ್ಮಾಸ್ಯ
Team Udayavani, Jul 2, 2022, 8:03 PM IST
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ 32 ನೇ ಚಾತುರ್ಮಾಸ್ಯ ವೃತ ಸಂಕಲ್ಪವನ್ನು ಆಷಾಢ ಪೂರ್ಣಿಮೆ ಜು.13 ರಿಂದ ಉತ್ತರ ಕನ್ನಡದ ಶಿರಸಿ ಸಮೀಪದ ಸ್ವರ್ಣವಲ್ಲೀ ಮಠದಲ್ಲಿ ಕೈಗೊಳ್ಳಲಿದ್ದಾರೆ.
ಅಂದು ಶ್ರೀಗಳು ವ್ಯಾಸ ಪೂಜೆ ಸಲ್ಲಿಸಿ ವೃತ ಸಂಕಲ್ಪಿಸಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ ನಡೆಸಲಿದ್ದಾರೆ. ಮಧ್ಯಾಹ್ನ ೩ಕ್ಕೆ ನಡೆಯುವ ಧರ್ಮಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಪಾಲ್ಗೊಳ್ಳಲಿದ್ದು, ಇದೇ ವೇಳೆ ಸಹಕಾರಿ ರತ್ನ ಶಂಭುಲಿಂಗ ಹೆಗಡೆ ನಿಡಗೋಡ, ವೈದ್ಯ ಡಾ.ಕೃಷ್ಣಪ್ರಸಾದ ಉಡುಪಿ ಅವರನ್ನು ಗೌರವಿಸಲಾಗುತ್ತಿದೆ. ಶ್ರೀಗಳು ಸಾನ್ನಿಧ್ಯ ನೀಡಲಿದ್ದಾರೆ.
ಸೆ.೧೦ರ ತನಕ ನಡೆಯಲಿರುವ ಚಾತುರ್ಮಾಸ್ಯ ಅವಧಿಯಲ್ಲಿ ಮಹಾಭಾರತ ಪ್ರವಚನಗಳು, ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಶಿಷ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲುವಂತೆ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.