ಉಪ್ಪಿನ ಸತ್ಯಾಗ್ರಹದ 91ನೇ ವರ್ಷಾಚರಣೆ!
Team Udayavani, Apr 15, 2021, 8:40 PM IST
ಉಪ್ಪಿನ ಸತ್ಯಾಗ್ರಹ ಮಹತ್ವವಾದುದು! ಪೂಜಗೇರಿ ಹಳ್ಳಕ್ಕೆ ಬಾಗಿನ ಅರ್ಪಣೆ
ಅಂಕೋಲಾ: ಚರಿತ್ರೆ ಮರೆತವರು ಚರಿತ್ರೆಯನ್ನು ನಿರ್ಮಿಸಲಾರರು ಎಂಬ ಮಾತೊಂದಿದೆ. ಅಂಕೋಲಾ ಸ್ವಾತಂತ್ರ್ಯ ಹೋರಾಟದಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಮೂಲಕ ಕರ್ನಾಟಕದ ಬಾರ್ಡೋಲಿ ಎಂಬ ಖ್ಯಾತಿಗೆ ಕಾರಣವಾಗಿದೆ. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ನಮ್ಮ ಹಿರಿಯರ ತ್ಯಾಗ, ಬಲಿದಾನಗಳ ಬಗ್ಗೆ ತಿಳಿಯುವ ಆಸಕ್ತಿ ಯುವ ಜನಾಂಗಕ್ಕೆ ಇದ್ದಂತಿಲ್ಲ ಎಂದು ಹಿರಿಯ ಸಾಹಿತಿ ಶಾಂತಾರಾಮ ನಾಯಕ ಹಿಚ್ಕಡ ಹೇಳಿದರು.
ಕಡಲು ಪ್ರಕಾಶನದ ವತಿಯಿಂದ ಮಂಗಳವಾರ ಅಂಕೋಲಾ ಉಪ್ಪಿನ ಸತ್ಯಾಗ್ರಹದ 91ನೇ ವರ್ಷಾಚರಣೆ ನಿಮಿತ್ತ ಪೂಜಗೇರಿ ಹಳ್ಳಕ್ಕೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ನಮ್ಮ ನೆಲದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಯುವಜನರಿಗೆ ಆಸಕ್ತಿ ಮೂಡಿಸಲು ಮತ್ತು ಅರಿತುಕೊಳ್ಳಲು ಸಹಾಯವಾಗುವುದಕ್ಕಾಗಿ ಮುಂದಿನ ಶೈಕ್ಷಣಿಕ ಹಂತದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಬೇಕು ಎಂಬ ಆಸೆ ನನ್ನದು. ಅದಕ್ಕೆ ಸಂಘಟಕರ ಪ್ರೋತ್ಸಾಹ ಅಗತ್ಯ ಎಂದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಿ ವೈದ್ಯ ಹನುಮಂತ ಗೌಡ ಮಾತನಾಡಿ, ಮಹಾತ್ಮಾ ಗಾಂಧೀಜಿ ಕರೆಯ ಮೇರೆಗೆ ಅಂಕೋಲಾದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಅದ್ಭುತವಾದದ್ದು. ಬ್ರಿಟೀಷರ ವಿರುದ್ಧ ಸೆಟೆದು ನಿಂತ ವೀರ ಸೇನಾನಿಗಳನ್ನು ಈ ಮೂಲಕ ನೆನಪಿಸಿಕೊಳ್ಳುವಂತಾಗಿದೆ ಎಂದರು.
ಕನ್ನಡ ಚಂದ್ರಮದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಉಪ್ಪಿನ ಸತ್ಯಾಗ್ರಹದಂದು ಅದರ ನೆನಪಿಗಾಗಿ ಹಳ್ಳಕ್ಕೆ ಬಾಗೀನ ಬಿಡುವ ಮೂಲಕ ಯುವಜನರಿಗೆ ತಲುಪಬೇಕು ಎನ್ನುವ ಆಶಯ ನಮ್ಮದು ಎಂದರು. ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆ ಸಂಚಾಲಕ ಉಮೇಶ ನಾಯ್ಕ, ಕಸಾಪ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಎನ್‌ಸಿಸಿ ಅಧಿ ಕಾರಿ ಜಿ.ಆರ್. ತಾಂಡೇಲ, ಸಂದೀಪ ಬಂಟ, ವರದಿಗಾರರಾದ ವಿದ್ಯಾಧರ ಮೊರಬಾ, ವಿಲಾಸ ನಾಯಕ, ರಾಮ ನಾಯಕ ಮಾತನಾಡಿದರು. ಕಡಲು ಪ್ರಕಾಶನದ ಸಂಚಾಲಕ ನಾಗರಾಜ ಮಂಜಗುಣಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.