ನಿರಪೇಕ್ಷೆಯಿಂದ ರಸ್ತೆ ದುರಸ್ತಿ ಮಾಡಿದ ಕೂಲಿ ಕಾರ್ಮಿಕ


Team Udayavani, Aug 30, 2019, 12:08 PM IST

uk-tdy-1

ಕುಮಟಾ: ಹದಗೆಟ್ಟ ಕೂಜಳ್ಳಿ ರಸ್ತೆ ದುರಸ್ತಿ ಪಡಿಸುತ್ತಿರುವ ಪರಮೇಶ್ವರ ತಿಮ್ಮಪ್ಪ ಗೌಡ.

ಕುಮಟಾ: ರಸ್ತೆ ದುರಸ್ತಿ ಸರ್ಕಾರದ ಕಾರ್ಯ ಎಂದು ನಿರ್ಲಕ್ಷ್ಯ ತೋರುವವರ ನಡುವೆ ಕೂಲಿ ಕಾರ್ಮಿಕನೊಬ್ಬ ಬಿಡುವಿನ ಸಮಯದಲ್ಲಿ ಶ್ರಮದಾನದ ಮೂಲಕ ರಸ್ತೆ ದುರಸ್ತಿ ಪಡಿಸುವ ಕಾಯಕದಲ್ಲಿ ತೊಡಗಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರನಾಗಿ, ಇತರರಿಗೆ ಮಾದರಿಯಾಗಿದ್ದಾನೆ.

ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಹಾರೋಡಿ ನಿವಾಸಿ, ಕೂಲಿಕಾರ್ಮಿಕ ಪರಮೇಶ್ವರ ತಿಮ್ಮಪ್ಪ ಗೌಡ ಪ್ರಶಂಸೆಗೆ ಪಾತ್ರನಾದ ವ್ಯಕ್ತಿ.

ಪಟ್ಟಣದ ಹೊಸ ಹೆರವಟ್ಟಾದಿಂದ ಕೂಜಳ್ಳಿವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ. ಇದರಿಂದ ಅನೇಕ ವಾಹನ ಸವಾರರು ತಾಲೂಕು ಆಡಳಿತವನ್ನು ಶಪಿಸುತ್ತಾರೆಯೇ ಹೊರತು ಅದರ ದುರಸ್ತಿಗೆ ಮುಂದಾಗಿಲ್ಲ. ಆದರೆ ಕೂಲಿಕಾರ್ಮಿಕ ಪರಮೇಶ್ವರ ತಿಮ್ಮಪ್ಪ ಗೌಡ ಕಳೆದ 4 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ರಸ್ತೆಯ ಹೊಂಡಗಳಿಗೆ ಕಲ್ಲು ಹಾಕಿ ಮುಚ್ಚುವ ಕಾಯಕದಲ್ಲಿ ತೊಡಗಿದ್ದಾರೆ.

ಜೀವನ ನಿರ್ವಹಣೆಗಾಗಿ ಕೃಷಿ ಕೂಲಿ ಅವಲಂಬಿಸಿರುವ ಪರಮೇಶ್ವರ ಗೌಡ ಅವರು, ಯಾವಾಗ ಕೂಲಿ ಕೆಲಸ ಇರುವುದಿಲ್ಲವೋ ಆ ದಿನ ರಸ್ತೆ ದುರಸ್ತಿಪಡಿಸುತ್ತಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ ಗೌಡ, ಹೊಸ ಹೆರವಟ್ಟಾದಿಂದ ಕೂಜಳ್ಳಿವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ದುರಸ್ತಿ ಮಾಡಿಲ್ಲ. ನಾನೇ ಆ ಕಾರ್ಯ ಮಾಡುತ್ತಿದ್ದೇನೆ. ರಸ್ತೆ ದುರಸ್ತಿಯಾದರೆ ನಮಗೆ ಓಡಾಡಲೂ ಅನುಕೂಲವಾಗುತ್ತದೆ. ಸಾರ್ವಜನಿಕ ಕಾರ್ಯಗಳನ್ನು ಸರ್ಕಾರವೇ ಮಾಡಲಿ ಎಂದು ಕೈಕಟ್ಟಿ ಕೂರುವ ಬದಲು, ನಾವೇ ಮಾಡಿದರೆ, ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎನ್ನುತ್ತಾರೆ.

ಒಟ್ಟಾರೆ ಇವರ ರಸ್ತೆ ದುರಸ್ತಿ ಶ್ರಮದಾನಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದ್ದು, ಪಿಎಸ್‌ಐ ಈ.ಸಿ. ಸಂಪತ್‌ ಕೂಡಾ ಸ್ಥಳಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನಾದರೂ ತಾಲೂಕು ಆಡಳಿತ ಈ ರಸ್ತೆ ಅಭಿವೃದ್ಧಿಪಡಿಸುವ ಮೂಲಕ ಪರಮೇಶ್ವರ ಗೌಡರ ಕಾರ್ಯಕ್ಕೆ ನೆರವಾಗಲಿ ಎಂಬುದು ಎಲ್ಲರ ಆಶಯ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.