ಮತ್ತೆ ಮಣ್ಣಲ್ಲಿ ಸಿಲುಕಿದ ಪ್ರಯಾಣಿಕರ ದೋಣಿ-ಆತಂಕ ಸೃಷ್ಟಿ

ಸೇತುವೆ ಕಾಮಗಾರಿಗಾಗಿ ಬಳಸಿದ್ದ ಮಣ್ಣು ತೆರವುಗೊಳಿಸದ್ದರಿಂದ ಹೆಚ್ಚಿದ ಸಮಸ್ಯೆ

Team Udayavani, Oct 14, 2022, 3:56 PM IST

20

ಅಂಕೋಲಾ: ತಾಲೂಕಿನ ಮಂಜಗುಣಿ-ಗಂಗಾವಳಿ ನಡುವಿನ ಸೇತುವೆ ನಿರ್ಮಾಣಕ್ಕೆ ಹಾಕಲಾಗಿದ್ದ ಮಣ್ಣು ಸಂಪೂರ್ಣ ತೆರವುಗೊಳಿಸದ್ದರಿಂದ ಯಾಂತ್ರೀಕೃತ ದೋಣಿಯೊಂದು ಮಣ್ಣಿನಲ್ಲಿ ಸಿಲುಕಿ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ಕಾಮಗಾರಿ ಕೈಗೊಂಡ ಕಂಪನಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2018 ರಲ್ಲಿ ಅಂದಿನ ಶಾಸಕ ಸತೀಶ ಸೈಲ್‌ 30 ಕೋಟಿ ರೂ. ವೆಚ್ಚದ ಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ರೂಪಾಲಿ ನಾಯ್ಕ ಶಾಸಕರಾದ ನಂತರ ಕಾಮಗಾರಿ ಆರಂಭಗೊಂಡಿತ್ತು. ಈ ಕಾಮಗಾರಿಗಾಗಿ ಗಂಗಾವಳಿ ನದಿಗೆ ಮಣ್ಣು ಹಾಕಿ ಫಿಲ್ಲರ್‌ ಮಾಡಲಾಗಿತ್ತು. ಆದರೆ μಲ್ಲರ್‌ ಕಾಮಗಾರಿ ಮುಗಿದರೂ ಕೂಡ ಮಣ್ಣು ತೆಗೆಯದೆ ಇರುವುದರಿಂದ ಸಮಸ್ಯೆ ಉಂಟಾಗಿತ್ತು. ಸ್ಥಳೀಯರು ಸೇರಿದಂತೆ ನದಿ ತಟದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

ಈ ಸೇತುವೆ ಕಾಮಗಾರಿಗಾಗಿ ನದಿಗೆ ಮಣ್ಣು ಹಾಕಿದ್ದರಿಂದ ಸತತ ಮೂರು ವರ್ಷ ನೆರೆ ಉಂಟಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದ್ದಲ್ಲದೇ ಶಿರೂರಿನಲ್ಲಿ ದೋಣಿ ಮಗುಚಿ ಇಬ್ಬರು ಮೃತಪಟ್ಟಿದ್ದರು. ಹೀಗಾಗಿ ನದಿಗೆ ಹಾಕಲಾಗಿದ್ದ ಮಣ್ಣು ತೆರವುಗೊಳಿಸುವಂತೆ ಕೆಲ ತಿಂಗಳ ಹಿಂದೆ ಮಂಜಗುಣಿ ಸೇರಿದಂತೆ ನದಿ ಅಕ್ಕ ಪಕ್ಕದ ಗ್ರಾ.ಪಂ. ವ್ಯಾಪ್ತಿಯ ಜನಪ್ರತಿನಿ ಗಳು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು.

ತಹಶೀಲ್ದಾರ್‌ ಉದಯ ಕುಂಬಾರ, ಸಿಪಿಐ ಸಂತೋಷ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಮಣ್ಣನ್ನು ತೆರವುಗೊಳಿಸುವಂತೆ ಸೂಚನೆ ನೀಡುವುದರೊಂದಿಗೆ ನೋಟಿಸ್‌ ಕೂಡ ಜಾರಿ ಮಾಡಿದ್ದರು. ನಂತರ ಕಂಪನಿಯವರು ಮಣ್ಣು ತೆರವಿಗೆ ಮುಂದಾದರೂ ನೀರಿನ ಮೇಲ್ಭಾಗದ ಮಣ್ಣನ್ನು ಮಾತ್ರ ತೆಗೆಯಲು ಸಾಧ್ಯವಾಯಿತು. ನದಿಯಾಳದ ಮಣ್ಣನ್ನು ತೆಗೆಯಬೇಕಾದರೆ ಬಾರ್ಜ್‌ನಿಂದಲೇ ತೆಗೆಯಬೇಕು. ಹೀಗಾಗಿ ದುಬಾರಿ ವೆಚ್ಚದ ಸಬೂಬು ಹೇಳಿ ಕಂಪನಿ ಜಾರಿಕೊಂಡಿತ್ತು.

ಈ ವರ್ಷ ಘಟ್ಟದ ಮೇಲ್ಭಾಗದಲ್ಲಿ ಮಳೆ ಹೆಚ್ಚಾಗಿರದಿದ್ದರಿಂದ ನೆರೆ ಉಂಟಾಗಿಲ್ಲ. ಒಂದು ವೇಳೆ ಮಳೆ ಹೆಚ್ಚಾಗಿದ್ದರೆ ಪ್ರವಾಹ ಉಂಟಾಗುವ ಸಾಧ್ಯತೆಯಿತ್ತು. ಇದನ್ನು ಹೀಗೆ ಬಿಟ್ಟರೆ ಮುಂದೆಯೂ ಕೂಡ ಅನಾಹುತ ಕಟ್ಟಿಟ್ಟ ಬುತ್ತಿ. ಹೀಗಾಗಿ ಕೂಡಲೇ ನದಿಗೆ ಹಾಕಲಾದ ಸಾವಿರಾರು ಲೋಡ್‌ ಮಣ್ಣನ್ನು ತೆರವುಗೊಳಿಸಬೇಕು. ಜತೆಗೆ ಸೇತುವೆ ಕಾಮಗಾರಿಯು ಆದಷ್ಟು ಬೇಗ ಮುಗಿಯಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಅನಾಹುತ ಹೆಚ್ಚುವ ಮುನ್ನ ಮಣ್ಣು ತೆರವಾಗಲಿ

ತಾರಿ ದೋಣಿ ಗುತ್ತಿಗೆ ಪಡೆದವರು ಸ್ವಂತ ಹಣದಲ್ಲಿ ಮಂಜಗುಣಿಯಲ್ಲಿ ಸಣ್ಣ ಜಟ್ಟಿ ನಿರ್ಮಿಸಿಕೊಂಡಿದ್ದರು. ಆದರೆ ಅಮವಾಸ್ಯೆ ಮತ್ತು ಹುಣ್ಣಿಮೆಯ ಸಮಯದಲ್ಲಿ ನೀರು ಕಡಿಮೆಯಾಗುವುದರಿಂದ ಹಳೆಯ ಜಟ್ಟಿಯ ಮೂಲಕ ದೋಣಿಯನ್ನು ಚಲಾಯಿಸಬೇಕಾಗುತ್ತದೆ. ಎಂದಿನಂತೆ ಚಲಾಯಿಸುತ್ತಿದ್ದ ದೋಣಿ ಸೇತುವೆ ಕೆಳಗೆ ಹಾಕಲಾಗಿದ್ದ ಮಣ್ಣಿಗೆ ಸಿಲುಕಿ ಸಂಕಷ್ಟ ಎದುರಿಸುವಂತಾಯಿತು. ನೀರಿನ ರಭಸಕ್ಕೆ ಸಂಪೂರ್ಣ ಮಣ್ಣು ಕೊಚ್ಚಿ ಹೋಗಿದೆ ಎಂದು ಹೇಳುವ ಗುತ್ತಿಗೆ ಕಂಪನಿಗೆ ಈಗ ಸಾಕ್ಷé ಒದಗಿಸಿದಂತಾಗಿದೆ. ಕೆಲವೊಮ್ಮೆ ಮೀನುಗಾರಿಕೆ ದೋಣಿಗಳೂ ಕೂಡ ದಾಟದ ಪರಿಸ್ಥಿತಿಯಲ್ಲಿದೆ. ಕೂಡಲೇ ಅಧಿಕಾರಿಗಳು ಮಣ್ಣು ತೆರವಿಗೆ ಮುಂದಾಗದಿದ್ದರೆ ಮತ್ತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.