ಗಾಂಧೀಜಿ ಅಪರೂಪದ ಛಾಯಾಚಿತ್ರ ಪ್ರದರ್ಶನ
Team Udayavani, Nov 4, 2019, 3:55 PM IST
ಕಾರವಾರ: ಮಹಾತ್ಮಾಗಾಂಧೀಜಿ ಅಪರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಗಾಂಧಿ ಪ್ರತಿಮೆಗೆ ಹೂಹಾರ ಹಾಕುವ ಮೂಲಕ ಚಾಲನೆ ನೀಡಿದರು.
ಹಾಗೂ ಗಾಂಧಿಜೀ ಜೀವನ ಕಟ್ಟಿಕೊಡುವ ಛಾಯಚಿತ್ರಗಳನ್ನು ವೀಕ್ಷಿಸಿದರು. ಜಿಲ್ಲಾ ರಂಗಮಂದಿರದಲ್ಲಿ ಏರ್ಪಟ್ಟಿರುವ ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಗಾಂಧೀಜಿ ಅಪರೂಪದ ಛಾಯಾಚಿತ್ರಗಳ ಕುರಿತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಮಹಾತ್ಮಾ ಗಾಂಧೀಜಿ ಜೀವನದ ಪ್ರಮುಖ ಘಟನೆಗಳ ಆಧಾರಿತ ಅಪರೂಪದ ಛಾಯಾಚಿತ್ರಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಕಾರವಾರ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
ಛಾಯಾಚಿತ್ರ ಪ್ರದರ್ಶನವನ್ನು ಹೆಚ್ಚು ಆಕರ್ಷಕಗೊಳಿಸಲು ಕರಕುಶಲ ಪಾರಂಪರಿಕ ಕಂಬಗಳನ್ನು ವಿನ್ಯಾಸಗೊಳಿಸಿ, ಸುವರ್ಣ ಚೌಕಟ್ಟಿನ ಅಲಂಕೃತ ಫ್ರೇಮನಲ್ಲಿ ಗಾಂಧೀಜಿ ಜೀವನ ಚರಿತ್ರೆ ಹಾಗೂ ಸ್ವಾತಂತ್ರ್ಯ ಹೋರಾಟದ ಕಪ್ಪು ಬಿಳುಪಿನ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಹೆಜ್ಜೆ ಹಾಕುತ್ತಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆ ವಿಶೇಷ ಆಕರ್ಷಣೆಯಾಗಿದೆ. ಮರದಿಂದ ತಯಾರಿಸಿದ ಚರಕ ಎಲ್ಲರ ಗಮನ ಸೆಳೆಯುತ್ತಿದ್ದು, ಮಕ್ಕಳಿಂದ ಹಿಡಿದು ಹಿರಿಯ ಅಧಿಕಾರಿ ವರ್ಗದವರೆಗೂ ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು. ಸಾಕ್ಷ್ಯಚಿತ್ರ ಪ್ರದರ್ಶನವನ್ನು ಎಲ್‌ಇಡಿ ಟಿ.ವಿ ಮೂಲಕ ಬಿತ್ತರಿಸಲಾಯಿತು.
ಮಹಾತ್ಮಾ ಗಾಂಧೀಜಿ ಬಾಲ್ಯ ಶೈಕ್ಷಣಿಕ ಜೀವನ, ವಿದೇಶ ಪ್ರವಾಸ, ಸ್ವಾತಂತ್ರ್ಯ ಹೋರಾಟ, ಉಪ್ಪಿನ ಸತ್ಯಾಗ್ರಹ, ಪ್ರಾಣಿಗಳ ಮೇಲೆ ಇರುವ ಪ್ರೀತಿ, ಇಂಡಿಯನ್ ಓಪಿನಿಯನ್, ಯಂಗ್ಇಂಡಿಯಾ ಹಾಗೂ ಹರಿಜನ ಪತ್ರಿಕೆಗಳನ್ನು ಮುನ್ನೆಡಿಸಿದ ಪತ್ರಿಕಾ ಜೀವನ, ಪತ್ನಿ ಕಸ್ತೂರ ಬಾ ಹಾಗೂ ಗುಂಡೇಟಿನಿಂದ ಹೇ ರಾಮ ಎಂದು ಕೊನೆಯುಸಿರೆಳೆದ ಕ್ಷಣದ ವರೆಗಿನ ಮಾಹಿತಿ ನೀಡುವ ಅಪರೂಪದ ಛಾಯಾಚಿತ್ರಗಳು ಸಾರ್ವಜನಿಕರನ್ನು ಆಕರ್ಷಿಸುತ್ತಿವೆ. ಈ ಛಾಯಾಚಿತ್ರಗಳ ಪ್ರದರ್ಶನ ನ.5 ವರೆಗೆ ನಡೆಯಲಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಾರ್ತಾ ಇಲಾಖೆ ವಿನಂತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.