ಅನಧಿಕೃತ ಮರಳು ದಾಸ್ತಾನಿನ ಮೇಲೆ ಎಸಿ ದಾಳಿ: ಮರಳು ವಶ
Team Udayavani, Nov 17, 2021, 11:25 PM IST
ಕಾರವಾರ : ನಗರದ ಸುಂಕೇರಿ ನಂದನಗದ್ದಾ, ಗಾಬಿತವಾಡ, ನದಿವಾಡ ಪ್ರದೇಶಗಳಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಅಡ್ಡೆ ಮೇಲೆ ದಾಳಿ ನಡೆಸಿ ಸುಮಾರು 45 ಟನ್ ಗಳಷ್ಟು ಮರಳನ್ನು ವಶಕ್ಕೆ ಪಡೆಯಲಾಯಿತು.
ವಶಕ್ಕೆ ಪಡೆದ ಮರಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಬಳಸಿಕೊಳ್ಳಲು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು ಎಂದು ಉಪವಿಭಾಗಾಧಿಕಾರಿಗಳಾದ ವಿದ್ಯಾಶ್ರೀ ಚಂದರಗಿ ಹೇಳಿದರು.
ಬಳಿಕ ಉಪವಿಭಾಗಾಧಿಕಾರಿಗಳು ಕಾಳಿ ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೋಟ್ ಮೂಲಕ ತೆರಳಿ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ ಕಾರವಾರ, ಪೋಲೀಸ್ ವೃತ್ತ ನಿರೀಕ್ಷಕರು ಕಾರವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಕಂದಾಯ ಮತ್ತು ಪೋಲೀಸ್ ಇಲಾಖೆಗಳ ಸಿಬ್ಬಂದಿಗಳು ಇದ್ದರು. ಅಕ್ರಮವಾಗಿ ಮರಳು ತೆಗೆಯುವುದನ್ನು ತಡೆಯಲಾಗಿದ್ದು, ಸೂಕ್ತ ಕಾನೂನು ಕ್ರಮದ ಎಚ್ಚರಿಕೆ ನೀಡಲಾಯಿತು. ತಹಶಿಲ್ದಾರರ ಎನ್. ನರೋನಾ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.