ಭಟ್ಕಳದಲ್ಲಿ ಭೀಕರ ಅಪಘಾತ; ಮತ್ಸ್ಯೋದ್ಯಮಿ ಸಾವು; 3 ಗಂಭೀರ
Team Udayavani, Mar 6, 2018, 4:50 PM IST
ಭಟ್ಕಳ: ಇಲ್ಲಿನ ಶಿರಾಲಿ ಬಳಿಯ ಮಾವಿನಕಟ್ಟೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಕಾರಿಗೆ ಪೆಟ್ರೋಲ್ ಟ್ಯಾಂಕರ್ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕುಂದಾಪುರ ಉಪ್ಪುಂದದ ಮತ್ಸ್ಯೋದ್ಯಮಿ ಅಣ್ಣಪ್ಪ ಖಾರ್ವಿ (33) ಅವರು ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳ ಪೈಕಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿದ್ದ ಪ್ರಭಾಕರ , ನಾಗವೇಣಿ, ಸುಬ್ರಹ್ಮಣ್ಯ ಮತ್ತು ಮುಕುಂದ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಅಪಘಾತದ ತೀವ್ರತೆಗೆ ಕಾರು ಎದುರುಗಡೆಯಿಂದ ನಜ್ಜುಗುಜ್ಜಾಗಿದ್ದು , ಟ್ಯಾಂಕರ್ ಪಲ್ಟಿಯಾಗಿದೆ.
ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.